Thursday, November 1, 2012

ಕನ್ನಡದ ಮೊದಲ ಸೂಫಿ ಕವಿ ಗುರು ಖಾದರಿಪೀರಾ

ದೇವರು ಮಸೀದಿ, ಮಂದಿರದಲ್ಲಿ ಇಲ್ಲ ಆತ ನಮ್ಮೊಳಗೇ ಇದ್ದಾನೆ. ಆತನ ಜೊತೆಗೇ ಇದ್ದು ಪ್ರತಿಯೊಬ್ಬ ಮಾನವ ವಿಶ್ವಮಾನವ ಆಗುವ ಮೂಲಕ ದೇವರೇ ಆಗಬೇಕು ಎಂಬುದು ಗುರು ಖಾದರಿಪೀರಾ ಅವರ ಆಶಯವಾಗಿತ್ತು. ಆದ್ದರಿಂದ ಅವರಿಗೆ ಸೂಫಿಗಳ ಮತ್ತು ಶರಣರ ದೃಷ್ಟಿಕೋನದ ಧರ್ಮವೇ ಸತ್ಯ ವೆನಿಸಿತ್ತು ಎನ್ನುತ್ತಾರೆ ಸಂಶೋಧಕ ರಂಜಾನ್ ದಗರ್ಾ.

ಕನ್ನಡದ ಮೊದಲ ಸೂಫಿ ಕವಿ ಗುರು ಖಾದರಿಪೀರಾ (1822-1896) ಅವರು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂದಾ ಗ್ರಾಮದವರು. ಕನ್ನಡದ ಮೊದಲ ಮುಸ್ಲಿಂ ತತ್ತ್ವಪದಕಾರರಾದ ಗುಲಬಗರ್ಾ ಜಿಲ್ಲೆ ಜೇವಗರ್ಿ ತಾಲ್ಲೂಕಿನ ಚೆನ್ನೂರು ಜಲಾಲಸಾಹೇಬರು ಇವರ ಹಿರಿಯ ಸಮಕಾಲೀನರು. (1770-1850) ಇಂದಿನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜನಮನ ಸೂರೆಗೊಂಡ ತತ್ತ್ವಪದಕಾರ ಶಿಶುನಾಳ ಶರೀಫರು (1819-1889) ಇವರ ಸಮಕಾಲೀನರು. ಈ ಮೂವರು ಕನ್ನಡದಲ್ಲಿ ಬರೆದ ಮೊದಲ ಮುಸ್ಲಿಂ ಕವಿಗಳಾಗಿದ್ದಾರೆ.

ಚೆನ್ನೂರ ಜಲಾಲಸಾಹೇಬರ ಮೂರು ತತ್ತ್ವಪದಗಳು ಸಿಕ್ಕಿವೆ. ಹಿಂದುಗಳು ಮತ್ತು ಮುಸಲ್ಮಾನರನ್ನು ಅವರು ಭಾವೈ ಕ್ಯದ ಕಡೆಗೆ ಸೆಳೆದರು. ಮಾನವಕುಲದ ಮೂಲ ಒಂದೇ ಎಂದು ತಿಳಿಸಿದರು. ಸೂಫಿ ಇಸ್ಲಾಂ ತತ್ತ್ವ, ಶರಣರ ನಡೆ ನುಡಿ ಸಿದ್ಧಾಂತ ಮತ್ತು ಕಳಸದ ಗುರು ಗೋವಿಂದಭಟ್ಟರಿಂದ ಸಂಪಾದಿಸಿದ ಉಪನಿಷತ್ ಜ್ಞಾನದ ಮೂಲಕ ಶಿಶುನಾಳ ಶರೀಫರು ನಿಗರ್ುಣ ನಿರಾಕಾರ ಬ್ರಹ್ಮನೆನಿಸಿದ ಪರಮಾತ್ಮ ನನ್ನು ಅನುಭಾವಿಸಿದರು. ಬೋಧ ಒಂದೇ ಬ್ರಹ್ಮನಾದ ಒಂದೇ ಎಂದು ಸಾರಿದರು. ಗುರು ಖಾದರಿ ಪೀರಾ ಅವರು ಶರಣ ಮತ್ತು ಸೂಫಿ ತತ್ತ್ವದ ಮೂಲಕ ಅದ್ವೈತವನ್ನು ಸಾಧಿಸಿದರು. ಮಾನವಕುಲದ ಏಕತೆ ಮತ್ತು ಮಾನವರ ಒಳಗೇ ದೇವರಿದ್ದಾನೆ ಎಂಬುದರ ಕುರಿತು ಅವರು ಮನ ಮುಟ್ಟುವಂತೆ ಬರೆದ 255 ತತ್ತ್ವಪದಗಳು ಸಿಕ್ಕಿವೆ. ಅವುಗಳಲ್ಲಿ ಕೆಲವೊಂದು ಉದರ್ು ಭಾಷೆಯಲ್ಲಿವೆ ಕೆಲವೊಂದು ಉದರ್ು ಮಿಶ್ರಿತ ಕನ್ನಡ ಭಾಷೆಯಲ್ಲಿವೆ. ಉಳಿದ ಬಹುಪಾಲು ತತ್ತ್ವ ಪದಗಳು ರಾಯಚೂರು ಭಾಗದ ಜನಪದ ಕನ್ನಡದಲ್ಲಿವೆ. ನಿಜಾಂ ಆಡಳಿತದಿಂದಾಗಿ ಅಂದಿನ ದಿನಗಳಲ್ಲಿ ಉದರ್ು ಭಾಷೆಯ ಪ್ರಭಾವವಿರುವ ಆ ಪ್ರದೇಶದಲ್ಲಿ ಈ ಸೂಫಿಸಂತ ಕನ್ನಡದಲ್ಲಿ ಬರೆದದ್ದು ಕನ್ನಡವನ್ನು ಕಡೆಗಣಿಸುವವರ ಕಣ್ಣು ತೆರೆಸುವಂಥದ್ದಾಗಿದೆ.

ಈ ಮೂವರು ತತ್ತ್ವಪದಕಾರರ ಆಶಯ ಒಂದೇ ಆಗಿ ತ್ತು. ಆದರೆ ಗುರು ಖಾದರಿಪೀರಾ ಅವರು ಇಸ್ಲಾಂ ತತ್ತ್ವಗಳ ರಹಸ್ಯವನ್ನು ಭೇದಿಸಿ ಕನ್ನಡಿಗರಿಗೆ ಮಾನವ ಏಕತೆಯ ಮಹತ್ವವನ್ನು ತಿಳಿಸಿದ್ದು ವಿಶಿಷ್ಟವಾಗಿದೆ. ಅಹಂ ಬ್ರಹ್ಮಾಸ್ಮಿ (ನಾನೇ ದೇವರು) ಎಂದು ಶಂಕರಾಚಾರ್ಯರು ಹೇಳಿದರೆ. ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯಾ ಎಂ ದು ಬಸವಣ್ಣನವರು ತಿಳಿಸಿದರು. ನಾನು ದೇವರಲ್ಲ ಆದರೆ ನನ್ನೊಳಗಿನ ದೇವರ ದಾಸ ನಾನು ಎಂಬದು ಇದರ ಅರ್ಥ. ಇದೇ ವಿಚಾರವನ್ನು ಪವಿತ್ರ ಕುರಾನ್ ತಿಳಿಸುತ್ತದೆ ಎಂಬುದನ್ನು ನಮಗೆ ತೋರಿಸಿಕೊಟ್ಟವರು ಮತ್ತು ಆ ಮೂಲ ಕ ಸೂಫಿಗಳ ಪ್ರೇಮತತ್ತ್ವವನ್ನು ಸಾರಿದವರು ಗುರು ಖಾದರಿ ಪೀರಾ ಅವರು.

ವನಹನು ಅಕ್ರಬಮಿನ್ ಹಬ್ಲಿಲ್ ವರೀದ್ ಎಂಬ ಕುರಾನ್ ವಾಕ್ಯ ದೇವರು ಕಾಯದಲ್ಲಿ ಇದ್ದಾನೆ ಎಂಬ ಭಾವಾರ್ಥವನ್ನು ಕೊಡುತ್ತದೆ ಎಂದು ಹೇಳಲಾಗುತ್ತಿದೆ. ಇದನ್ನೇ ಗುರು ಪೀರಾ ಅವರು ಕನ್ನಡದಲ್ಲಿ ಹೀಗೆ ಹೇಳಿ ದ್ದಾರೆ: ನನ್ನ ಮನೆಯಲ್ಲಿ ಇದ್ದಾನೊ ನಲ್ಲಾ; ಇವನೇ ಅವನೆಂದು ತಿಳಿಯಲಿಲ್ಲಾ

ಗುರು ಖಾದರಿಪೀರಾ ಅವರು ಕನ್ನಡ, ಹಿಂದಿ, ಉದರ್ು, ಸಂಸ್ಕೃತ, ಪಾಸರ್ಿ ಮತ್ತು ಅರಬಿ ಭಾಷೆ ಮತ್ತು ಸಾಹಿತ್ಯದಲ್ಲಿ ಪರಿಣತರಾಗಿದ್ದರು. ಆದರೆ ಕನ್ನಡದಲ್ಲಿ ಸೂಫಿ ಸಿದ್ಧಾಂತವನ್ನು ಜನಸಾಮಾನ್ಯರಿಗೆ ತಿಳಿಸುವಲ್ಲಿ ಬಹಳ ಆಸಕ್ತಿ ವಹಿಸಿದರು.

ಅನ ಅಲ್ ಹಖ್ (ನಾನೇ ಸತ್ಯ) ಎಂದು ಹೇಳಿದ ಇರಾನಿನ ಸೂಫಿ ಸಂತ ಮನಸೂರ್ ಅಲ್ ಹಲ್ಲಾಜ್ (858-922) ನನ್ನು ದೈವನಿಂದನೆಯ ಆರೋಪ ಹೊರಿಸಿ ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಗಲ್ಲಿಗೇರಿಸಲಾಯಿತು. ಸತ್ಯ ಎಂಬುದು ಅಲ್ಲಾಹನ 99 ಹೆಸರುಗಳಲ್ಲಿ ಒಂದಾಗಿರುವು ದರಿಂದ ಮನಸೂರ್ ಹೇಳುವ ಸಾಲಿನ ಅರ್ಥ ನಾನೇ ದೇವರು ಎಂದು ಆಗುತ್ತದೆ ಎಂದು ಮೂಲಭೂತವಾದಿಗಳು ಪ್ರತಿಪಾ ದಿಸಿದರು. ಈ ಕಾರಣದಿಂದಲೇ ಅವನನ್ನು ಗಲ್ಲಿಗೇರಿಸ ಲಾಯಿತು. ಗುರು ಖಾದರಿಪೀರಾ ಕೂಡ ಇಂಥ ಪರಂಪರೆಗೆ ಸೇರಿದ ಸೂಫಿಸಂತ. ಈ ಹಿನ್ನೆಲೆಯಲ್ಲೇ ಅವರು ಇಸ್ಲಾಂ ತತ್ತ್ವಜ್ಞಾನವನ್ನು ವ್ಯಾಖ್ಯಾನಿಸಿದರು.

ಒಬ್ಬನೇ ದೇವರು. ಆದರೆ ಮಾನವರೆಲ್ಲರಲ್ಲಿ ಆತ ಇರು ವುದರಿಂದ ಎಲ್ಲರೂ ದೇವರು. ಎಲ್ಲರಲ್ಲಿ ದೇವರಿರುವುದರಿಂದ ಅವನನ್ನು ಸ್ವರ್ಗದಲ್ಲಿ, ಕಾಬಾ-ಕಾಶಿಯಲ್ಲಿ ಅಥವಾ ಮಂದಿರ-ಮಸೀದಿಗಳಲ್ಲಿ ಹುಡುಕಬೇಕಿಲ್ಲ. ಆತ ಇರುವುದು ದೇಹ ಎಂಬ ಮಂದಿರದೊಳಗೆ ಎಂಬುದು ಖಾದರಿಪೀರಾ ಅವರ ಅಚಲ ನಂಬಿಕೆಯಾಗಿತ್ತು. ಹೀಗೆ ಅವರ ಏಕದೇವೋಪಾಸನೆಯ ಪರಿಕಲ್ಪನೆ ಪ್ರತಿಯೊಬ್ಬ ಮಾನವನೊಳಗಿನ ಘನದ ಮೂಲಕ ಮಾನವನ ಘನತೆಯನ್ನು ಎತ್ತಿಹಿಡಿಯುವಂಥದ್ದಾಗಿದೆ.

ಈ ಹಿನ್ನೆಲೆಯಲ್ಲಿ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಮಹಮ್ಮದ್ ಪೈಗಂಬರರ ವಚನಗಳಾದ ಹದೀಸ್ ಅನ್ನು ಅವರು ಕೂಲಂಕಷವಾಗಿ ಅಧ್ಯಯನ ಮಾಡಿದರು. ಇಸ್ಲಾಮಿನ ಮಾನವೀಯ ಪರಂಪರೆಯ ವಕ್ತಾರರಾದರು. ಆ ಮೂಲಕ ಸೂಫಿ ಜೀವಕಾರುಣ್ಯ ಮತ್ತು ಪ್ರೇಮತತ್ತ್ವವನ್ನು ತಮ್ಮ ತತ್ತ್ವಪದಗಳ ಮೂಲಕ ಸಾರಿದರು. ಶರಣರ ವಚನಗಳ ಅಧ್ಯಯನದೊಂದಿಗೆ ವೇದೋಪನಿಷತ್ತುಗಳ ಅಧ್ಯಯನವನ್ನೂ ಮಾಡಿದರು. ವೈದಿಕರ ಜಡ ವಿಚಾರಗಳನ್ನು ದೂರ ಸರಿಸಿ, ಮಾನವೀಯ ಚಿಂತನೆಗಳನ್ನು ಸ್ವೀಕರಿಸಿ, ಶರಣರ ತತ್ವಕ್ಕೆ ಮಾರುಹೋಗಿ ಸೂಫಿ ತತ್ವದ ಜೊತೆ ಸಮೀಕರಿಸಿದರು. ಸೂಫಿ, ಶರಣ, ಸಂತ ಮತ್ತು ದಾಸರ ತತ್ತ್ವಗಳೊಳಗಿನ ಜೀವಪರ ನಿಲುವನ್ನು ಎತ್ತಿಹಿಡಿದ ಗುರು ಖಾದರಿಪೀರಾ ಅವರು ಈ ನಾಲ್ಕೂ ವಿಚಾರಧಾರೆಗಳನ್ನು ತತ್ತ್ವಪದಕಾರರಾಗಿ ಸ್ವೀಕರಿ ಸಿದ್ದಾರೆ. ಇವುಗಳ ಒಳತೋಟಿಯ ಪ್ರಜ್ಞೆಯೊಂದಿಗೆ ಅನೇಕ ಕಡೆಗಳಲ್ಲಿ ಇವುಗಳನ್ನು ಸಮಾನಾರ್ಥದಲ್ಲಿ ಬಳಸಿದ್ದಾರೆ. ಅಷ್ಟೇ ಅಲ್ಲದೆ ಸೂಫಿಗಳನ್ನು ಶರಣರೆಂದೇ ಕರೆದಿದ್ದಾರೆ. ಹೀಗಾಗಿ ಅವರ ತತ್ವ್ವಪದಗಳು ಸೂಫಿ ಮತ್ತು ಶರಣ ತತ್ವಗಳ ಮಹಾ ಸಂಗಮವಾಗಿವೆ.

19ನೇ ಶತಮಾನದ ಅಂತ್ಯದವರೆಗೆ ಕನ್ನಡಿಗರಿಗೆ ವಚನಗಳು ಪ್ರಕಟಿತ ಗ್ರಂಥರೂಪದಲ್ಲಿ ಲಭ್ಯವಿರಲಿಲ್ಲ. ವಚನಕಟ್ಟುಗಳು ಪೂಜೆಯ ವಸ್ತುಗಳಾಗಿ ಪರಿಣಮಿಸಿದ್ದವು. ಇಂಥ ಸ್ಥಿತಿಯಲ್ಲಿ ಗುರು ಖಾದರಿಪೀರಾ ಅವರು ವಚನಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿ ಅವುಗಳಲ್ಲಿನ ತತ್ವ ಎಲ್ಲ ದೃಷ್ಟಿಯಿಂದಲೂ ಸೂಫಿತತ್ತ್ವಕ್ಕೆ ಸಮನಾಗಿದೆ ಎಂಬುದನ್ನು ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ತಾವೊಬ್ಬ ಬಸವಣ್ಣನ ಅನುಯಾಯಿಯಾಗಿದ್ದು ಬಸವ ಣ್ಣನೇ ತಮ್ಮ ಪ್ರಾಣ ಎಂದು ಸಾರಿದ್ದಾರೆ. ಅವರ ವಿಚಾರಗಳು ಮುಖ್ಯವಾಗಿ ಬಸವಣ್ಣನವರ ವಿಚಾರಗಳೊಂದಿಗೆ ಬಹಳಷ್ಟು ಸಾಮ್ಯತೆಯನ್ನು ಹೊಂದಿವೆ. ನಮ್ಮೊಳಗಿನ ಘನದ ಪೂಜೆ ಮಾತ್ರ ನಿಜವಾದ ಪೂಜೆ ಎಂಬುದು ಇವರಿಬ್ಬರ ನಿಲುವಾಗಿದೆೆ.

ಖಾದರಿಪೀರಾ ಅವರ ಪೂರ್ವಜರು ಪೈಗಂಬರರ ಅಳಿಯ ಹಜರತ್ ಅಲಿ ಅವರ ವಂಶಸ್ಥರು.700 ವರ್ಷಗಳಷ್ಟು ಹಿಂದೆ ಇರಾಕ್ ರಾಜಧಾನಿ ಬಾಗ್ದಾದ್ನಿಂದ ಖ್ಯಾತ ಸೂಫಿಸಂತ ಮಹಬೂಬೇ ಸುಬಹಾನಿ ಅವರ ಮೊಮ್ಮಗ ಸೈಯ್ಯದ್ ವಲಿ ಉಲ್ಲಾ ಷಾ ಖಾದರಿ ಅವರು ತಮ್ಮ 13ನೇ ವಯಸ್ಸಿನಲ್ಲಿ ಒಂಟಿಯಾಗಿ ಭಾರತಕ್ಕೆ ಬಂದರು...

ಸಾಲಗುಂದಾ ಗ್ರಾಮದಲ್ಲಿ ಸೈಯದ್ ಷಾ ಮೊಹಿಯುದ್ದೀನ್ ಖಾದರಿ ಮತ್ತು ಬಿಜಾಪುರದ ಸೂಫಿ ಹಾಷಂಪೀರ ಸಂತತಿಯ ಯೂಸುಫ್ ಹುಸೇನಿಯವರ ಪುತ್ರಿ ಸೈಯದಾ ಸೋಗರಾಬೀ ಸಾಹೇಬ ಬೀಬಿ ಪುಣ್ಯ ದಂಪತಿಗಳ ಉದರದಲ್ಲಿ ದಿನಾಂಕ 11.5.1822 ಸೋಮವಾರದಂದು ಆಲಾ ಹಜರತ್ ಇಮಾಮ್ ಸೈಯದ್ ಅಬ್ದುಲ್ ಖಾದಿರ್ ಖಾದರಿ ಹಸನಿ ಉಲ್ ಹುಸೈನಿ ಹಾಷಮಿ (ಗುರು ಖಾದರಿಪೀರಾ) ಅವರು ಜನಿಸಿದರು ಸಹಾ ನುಭೂತಿ, ಮಾನವತಾವಾದ, ಸರ್ವಧರ್ಮ ಸಮಾನತೆ ಮತ್ತು ಜಾತ್ಯತೀತತೆಯನ್ನು ಮೈಗೂಡಿಸಿಕೊಂಡ ಜ್ಞಾನಾಕಾಂಕ್ಷಿಗಳಾದ ಇವರು ತಂದೆಯವರಿಂದ ಖಿಲಾಪತ್ (ಜ್ಞಾನದೀಕ್ಷೆ) ಪಡೆದು ಗುರುಪೀಠವನ್ನು ಅಲಂಕರಿಸಿದರು.

ತಮ್ಮ 22ನೇ ವಯಸ್ಸಿನಲ್ಲಿ ಬಿಜಾಪುರದ ಮಹಾನ್ ಸೂಫಿ ಯಾದ ಅಮೀನುದ್ದೀನ್ ಆಲಾ ಶೇರ್ ಏ ಖುದಾ ಬಿಜಾಪುರಿ ಅವರ ಸಂತತಿಯ ಅಸದುಲ್ಲಾ ಹುಸೈನಿಯವರ ಪುತ್ರಿ ಸೈಯದಾ ಬೀಬಿ ಜೈನಬ್ ಅವರ ಸಂಗಡ ಇವರ ವಿವಾಹ ನೆರವೇರಿತು..

ಉದರ್ು ಭಾಷೆಯಲ್ಲಿ ಫೈಜುಲ್ ಹೈದರಿಯಾ, ಕನ್ನಡ ಭಾಷೆಯಲ್ಲಿ ಜ್ಞಾನಸಮುದ್ರ ಮತ್ತು ಹಿಂದಿ ಭಾಷೆಯಲ್ಲಿ ಸಾಕ್ಷಾ ತ್ಕಾರ ಎಂಬ ಪದ್ಯರೂಪದ ಮಹಾನ್ ಕೃತಿಗಳನ್ನು ರಚಿಸಿದರು. ಈ ಗ್ರಂಥಗಳಲ್ಲಿ ವ್ಯಕ್ತವಾದ ಎಲ್ಲಾ ಪದ್ಯಗಳ ಕೊನೆಯಲ್ಲಿ ಗುರುಪೀರಾ ಎಂಬ ಅಂಕಿತನಾಮದಿಂದ ಮಹಬೂಬೇ ಸುಬ ಹಾನಿ ಪೀರಾನೇಪೀರ್ ದಸ್ತಗೀರ್ ಅವರಿಗೆ ಅರ್ಪಣೆ ಮಾಡಿ ಕೊನೆಗೊಳಿಸಿದ್ದಾರೆ. ಎಂದು ಅವರ ಮೊಮ್ಮಗ ಡಾ. ಎಸ್.ಎ. ಖಾದರಿ (ಹಾಷಮಿ) ಅವರು ಜ್ಞಾನಸಮುದ್ರ ಗ್ರಂಥದ ಆರಂಭ ದಲ್ಲಿ ಗ್ರಂಥಕರ್ತ ಶ್ರೀಗುರು ಖಾದರಿಪೀರಾ ಅವರ ಕುರಿತು ಬರೆದ ಪರಿಚಯ ಲೇಖನದಲ್ಲಿ ತಿಳಿಸಿದ್ದಾರೆ.

ಜ್ಞಾನಸಮುದ್ರ ಗ್ರಂಥದಲ್ಲಿನ ತತ್ತ್ವಪದಗಳನ್ನು ಗುರು ಖಾದರಿಪೀರಾ ಅವರ ಶಿಷ್ಯರಾಗಿದ್ದ ದಿವಂಗತ ಮದಿರೆ ತಿಮ್ಮಪ್ಪ ಮತ್ತು ಅವರ ಮಗ ರಂಗಪ್ಪ ಸಾಲಗುಂದ ಅವರು ಏಕತಾರ ದೊಂದಿಗೆ ಸುಶ್ರಾವ್ಯವಾಗಿ ಹಾಡುವುದನ್ನು 1971ರಲ್ಲಿ ಕಂಡು ಎಸ್.ಎ. ಖಾದರಿರವರು ಆಕಷರ್ಿತರಾದರು. 1973ರಲ್ಲಿ ಶಿಷ್ಯ ವೃಂದದ ಸಹಕಾರದಿಂದ ಭಜನಾ ಮಂಡಳಿ ರಚಿಸಿ ಈ ತತ್ತ್ವ ಪದಗಳನ್ನು ಸಿಂಧನೂರು, ಆಲೂರು, ಆದವಾನಿ, ಹೊಸಪೇಟೆ ಮತ್ತು ಬಳ್ಳಾರಿ ತಾಲ್ಲೂಕುಗಳಲ್ಲಿ ಜನಪ್ರಿಯಗೊಳಿಸಿದರು. ಕ್ರಿಸ್ತ ಶಕ 2000ದಲ್ಲಿ ಜ್ಞಾನಸಮುದ್ರ ಗ್ರಂಥವನ್ನು ಪ್ರಕಟಿಸಿದರು ಎಂದು ಆರ್. ಅಬ್ದುಲ್ ವಾಹಬ್ ಖಾದರಿ ಅವರು ಜ್ಞಾನಸ ಮುದ್ರ ಗ್ರಂಥದ ಬೆನ್ನುಡಿಯಲ್ಲಿ ಬರೆದಿದ್ದಾರೆ.
ಇಸ್ಲಾಂ ಎಂದರೆ ಶಾಂತಿಯೊ ಜಾಣ
ತಿಳಿದು ನುಡಿಯುವುದೇ ಸುಜ್ಞಾನ
ಹುರುಫೆ ಮುಖತ್ತಿಯಾತ ತಿಳಿಯದೆ
ಹೆಂಗ ತಿಳಿಯತೈತೊ ಖುರಾನ
ಎಂದು ಗುರು ಖಾದರಿಪೀರಾ ಅವರು ಬರೆದು ಮುಲ್ಲಾ ಮೌಲ್ವಿಗಳಿಗೆ ಸವಾಲು ಹಾಕಿದ್ದಾರೆ. ಮೌಲ್ವಿಗಳಿಗೆ ಗೊತ್ತಿದೆ; ಖುರಾನಿನಲ್ಲಿ ಹುರುಫೇ ಮುಖತ್ತಿಯಾತ ಎನ್ನುವ 29 ಸಂಕೇತ ಅಕ್ಷರಗಳಿವೆ. ಅಲೀಫ್, ಲಾಮ್, ಮೀಂ, ಯಾಸೀನ್ ಮುಂತಾ ದ ಈ ಸಂಕೇತ ಅಕ್ಷರಗಳಿಗೆ ಎಲ್ಲಿಯೂ ಅರ್ಥ ಸಿಗುವುದಿಲ್ಲ. ಸೂಫೀಜಂನಲ್ಲಿ ಇವುಗಳಿಗೆ ಗೌಪ್ಯವಾಗಿ ಅರ್ಥ ತಿಳಿಸಲಾಗು ವುದು. ಇದರಿಂದ ನಮಗೆ ತಿಳಿಯುವುದೇನೆಂದರೆ ಗುರುಪೀರಾ ರವರಿಗೆ ಇವುಗಳ ಅರ್ಥ ತಿಳಿದಿದೆ ಎಂದು. ಆದುದರಿಂದ ಹುರಫೇ ಮುಕತ್ತಿಯಾತ ತಿಳಿಯದೆ ಖುರಾನ ತಿಳಿಯು ವುದಿಲ್ಲಾ ಎಂದು ಸಾಧಿಕ್ ಹುಸೇನ್ ಖಾದರಿ ಅಲ್ ಅನ್ಸಾರಿ ಅವರು ಜ್ಞಾನಸಮುದ್ರಕ್ಕೆ ಬರೆದ ಮುನ್ನುಡಿಯಲ್ಲಿ ತಿಳಿಸಿದ್ದಾರೆ.

ಮಾನವಧರ್ಮಕ್ಕೆ ಜಯವಾಗಲಿ; ಮಾನವರಿಂದ ಮಾನ ವರು ಉದ್ಧಾರವಾಗಲಿ ಎಂಬ ಸಂದೇಶದೊಂದಿಗೆ ಗುರು ಖಾದರಿಪೀರಾ ಅವರು ಗ್ರಾಮ್ಯಭಾಷೆಯಲ್ಲಿ ತತ್ತ್ವಪದಗಳನ್ನು ಬರೆದು ಖುರಾನ್ ತಿರುಳನ್ನು ಮತ್ತು ಶರಣರ ವಚನಗಳ ತಿರುಳನ್ನು ಒಂದಾಗಿಸಿ ಲೋಕಾರ್ಪಣೆ ಮಾಡಿದ್ದಾರೆ.

ತತ್ತ್ವಪದಗಳು ಜನಪದ ತತ್ತ್ವಜ್ಞಾನವನ್ನೂ ಒಳಗೊಂಡಿ ರುತ್ತವೆ. ವಿಶ್ವಮಾನ್ಯವಾದ ಧರ್ಮತತ್ತ್ವಗಳನ್ನು ಜನಪದ ತತ್ತ್ವ ಜ್ಞಾನದೊಂದಿಗೆ ಕೂಡಿಸುವುದರ ಮೂಲಕ ರಾಯಚೂರು ಭಾಗದ ಕನ್ನಡ ಜನರ ಆಡುಭಾಷೆಯಲ್ಲಿ ಸಾಮರಸ್ಯದ ಸಾಹಿತ್ಯ ಸೃಷ್ಟಿಸಿದ ಕೀತರ್ಿ ಗುರು ಖಾದರಿಪೀರಾ ಅವರಿಗೆ ಸಲ್ಲುತ್ತದೆ. ಆ ಮೂಲಕ ಮೂಲಭೂತವಾದಿಗಳು ಅರಿಯದಂಥ ಧರ್ಮ ದ ತಿರುಳನ್ನು ಜನಸಾಮಾನ್ಯರಿಗೆ ನೀಡಿ ಅವರ ಬದುಕನ್ನು ಅರ್ಥಪೂರ್ಣಗೊಳಿಸಿದ್ದಾರೆ.

ಗುಡಿಗುಂಡಾರದ ಜಗಳವ್ಯಾಕೊ ಯಪ್ಪ ಮಾನವಗೆ ಮಾನವನು ತಾ ತಿಳಿಯಬೇಕು
ಎಲ್ಲರೊಳಗೆ ಜೀವ ಶಿವನಾಗಿರುವಾಗ ಗುಡಿಕಟ್ಟಿ ಅವನಿಗೆ ಬಂಧನವ್ಯಾಕೊ
ಶಿವ ಕಾಣಲಿಲ್ಲ ನೀ ಶಿವನು; ನಿನ್ನ ದೇಹದ ಗುಡಿಯೊಳಗೆ ಕುಂತಾನು ಅವನು
ನೀನೆ ಗುಡಿಯಾಗಿ ಗುಡಿ ಕಟ್ಟುವದ್ಯಾಕೊ ಸಾಕಪ್ಪ ಸಾಕು ನಿನ್ನ ಗುಡಿಜನಗಳ ಸಾಕು
ನಿರಾಕಾರ ನಿರಾಹಾರ ಶಿವಗ ಯಪ್ಪ ನಿನ್ನಂತೆ ರೂಪ ಮಾಡಿ ಅವಗ
ಎಲ್ಲ ನಿನ್ನ ಲಾಭಕ್ಕಾಗಿ ಮಾಡಿಟ್ಟು ಅವಗ ಮೋಸ ವಂಚನೆಯ ಮಂತ್ರ ಹೇಳುವುದ್ಯಾಕೊ
ಎಲ್ಲರಿಗೆ ಗುರು ಒಬ್ಬ ಸಾಕೊ ಭೇದ ಮಾಡುವ ಕೆರಗುರು ನಮಗ್ಯಾಕಬೇಕು
ಭೇದ ಮಾಡುವ ಜಗದ್ಘಾತಕರ್ಯಾಕೊ ಮಾನವ ಪ್ರೀತಿಯೆ ಮಾನವ ತಿಳಿಯಬೇಕು
ಪ್ರೀತಿಯ ರೂಪಧಾರಿ ಅವನು; ನೀವು ಪ್ರೀತಿ ಮಾಡಿರಿ ಸಿಗುವನವನು
ಪ್ರೀತಿಯಿಂದಲೇ ಭಕುತಿ, ಪ್ರೀತಿಯಿಂದಲೇ ಮುಕುತಿ, ಪ್ರೀತಿ ಇಲ್ಲದ ಬದುಕು ಬಾಳುವುದ್ಯಾಕೊ
ಜಾತಿಭೇದಗಳಿಲ್ಲ ಶಿವಗ ಯಪ್ಪಾ ಹೆಂಡರಿಲ್ಲ ಮಕ್ಕಳಿಲ್ಲ ಅವಗ
ನೋಡಿಬಂದವರಿಲ್ಲಿ ಹೇಳಲಿಲ್ಲ ನಮಗ: ಕರುಣಾಳು ಗುರುಪೀರ ಭೇದಬುದ್ಧಿ ನಮಗ್ಯಾಕೊ
ಸಾಲಗುಂದಿಪುರದೊಳಗೆ ಖಾತ್ರಿ ನೀವು ಮರಿಯದೆ ಮಾಡಬೇಕು ಪ್ರೀತಿ
ಗುರುಪೀರ ಖಾದರಿಯ ಪ್ರೀತಿಯೇ ಬಲು ಖಾತ್ರಿ; ಪ್ರೀತಿ ಇಲ್ಲದ ಬದುಕು ಬಾಳುವದ್ಯಾಕೊ

ಭೇದ ಮೂಡಿಸುವ ಯಾವುದನ್ನೂ ಖಾದರಿಪೀರಾ ಅವರು ಸ್ವೀಕರಿಸುವುದಿಲ್ಲ. ಸೌಹಾರ್ದಕ್ಕಾಗಿ ಅವರು ಏನನ್ನಾದರೂ ತ್ಯಾಗ ಮಾಡಲು ಸಿದ್ಧರಿದ್ದಾರೆ. ಪ್ರೀತಿಯಿಂದ ಮಾತ್ರ ಸೌಹಾ ರ್ದ ಸಾಧ್ಯ ಎಂಬುದನ್ನು ಅವರು ಪದೆ ಪದೆ ಒತ್ತಿ ಹೇಳಿದ್ದಾರೆ. ಕುಲ, ಗೋತ್ರ, ಜಾತಿಗಳು ಮಾನವನ ಏಕತೆಗೆ ಬಹುದೊಡ್ಡ ಕಂಟಕಗಳಾಗಿವೆ ಎಂಬುದನ್ನು ಮನಂಬುಗುವಂತೆ ತಿಳಿಸಿದ್ದಾರೆ.

150 ವರ್ಷಗಳಷ್ಟು ಹಿಂದೆಯೇ ಅವರು ಗುಡಿಗುಂಡಾ ರಗಳ ಜಗಳಗಳ ಕುರಿತು ಪ್ರಸ್ತಾಪಿಸಿದ್ದಾರೆ. ಗುಡಿವಿವಾ ದಗಳಿಂದ ಈ ದೇಶ ಇನ್ನೂ ಮುಕ್ತವಾಗಿಲ್ಲ. ಸಾವಿರಾರು ಜನರು ಈ ಘರ್ಷಣೆಗಳಿಗೆ ಬಲಿಯಾಗಿದ್ದಾರೆ. ಕೋಟ್ಯಂತರ ರೂಪಾಯಿಗಳ ಆಸ್ತಿಪಾಸ್ತಿ ಹಾನಿಯಾಗಿದೆ. ವಿವಿಧ ಸಮಾಜಗ ಳನ್ನು ಒಂದುಗೂಡಿಸದೆ ದೇಶದ ಉದ್ಧಾರವಾಗುವುದಿಲ್ಲ. ಅದಕ್ಕಾಗಿ ಗುರು ಖಾದರಿಪೀರಾ ಅವರಂತೆ ಪ್ರತಿಯೊಬ್ಬರಲ್ಲಿ ದೇವರನ್ನು ಕಂಡು ಪ್ರತಿಯೊಬ್ಬರ ಘನತೆ ಗೌರವಗಳನ್ನು ಮಾನ್ಯಮಾಡುತ್ತ ಮಾನವಕುಲ ಒಂದೇ ಎಂದು ದಯಾ ಭಾವ ಮತ್ತು ಪ್ರೇಮಭಾವ ದೊಂದಿಗೆ ಬದುಕುವುದರಿಂದ ಮಾತ್ರ ಈ ದೇಶ ಔನ್ನತ್ಯಕ್ಕೆ ಏರಲು ಸಾಧ್ಯ.

ಬಂಗಾರ ಗಟ್ಟಿಯಿಂದ ತಮ್ಮ ಇಲ್ಲಿ ವಸ್ತ ಮಾಡ್ಯಾರಲ್ಲ
ಬಂಗಾರ ಬ್ಯಾರೆ ವಸ್ತ ಬ್ಯಾರೆ ಎಂದು ಹೇಳತಾರ ಜನರೆಲ್ಲ
ಬಂಗಾರವೆ ವಸ್ತ ವಸ್ತವೆ ಬಂಗಾರ ಮೂಲ ತಿಳಿಯಲಿಲ್ಲ
ಸಾಲಗುಂದಿಪುರದೊಳಗೆ ಸೇರಿ ನೀ ನೋಡು ನಿನ್ನ ಮೊದಲ
ಗುರುಪೀರಖಾದರಿ ಕೇಳಿ ತಿಳಿದು ತಾವು ನೋಡಿ ಹೇಳ್ಯಾರಲ್ಲಾ
ಮನುಷ್ಯರೇ ದೇವರು, ದೇವರೇ ಮನುಷ್ಯರು ಬಿಚ್ಚಿ ಹೇಳಿದರೆಲ್ಲ

ಮನುಷ್ಯರೊಳಗೆ ದೇವರಿದ್ದಾನೆ. ಆ ದೇವರು ಮನುಷ್ಯ ರೂಪದಲ್ಲಿದ್ದಾನೆ. ಇದನ್ನು ತಿಳಿದವ ತನ್ನೊಳಗಿನ ದೇವರ ಜೊತೆ ಒಂದಾಗುತ್ತಾನೆ. ಹೀಗೆ ಒಂದಾದಾಗ ಆತ ಅಂತಃ ಕರಣ ಮತ್ತು ಪ್ರೇಮ ಭಾವವನ್ನು ತಾಳುತ್ತಾನೆ. ಆ ಮೂಲಕ ದೇವಸ್ವರೂಪನೇ ಆಗುತ್ತಾನೆ. ಈ ಪ್ರಕ್ರಿಯೆಯನ್ನು ಅನುಭವಿ ಸುವ ಮೊದಲು ಮಾನವ ರೂಪದಲ್ಲಿರುವ ನಾವು ನಿಜ ಮಾನವರಾಗಬೇಕಾಗುತ್ತದೆ. ನಿಜಮಾನವರಾದ ಮನುಷ್ಯರೇ ದೇವರು. ಹೀಗೆ ದೇವರೇ ಮನುಷ್ಯರೂಪದಲ್ಲಿರುವ ಕ್ರಮವನ್ನು ಗುರು ಖಾದರಿಪೀರಾ ಅವರು ತಿಳಿಸಿದ್ದಾರೆ.

ಸತ್ಯವನು ತಿಳಿದುಕೊಂಡೆನೊ ನಾ ನಿನ್ನೊಳು ಕಂಡು
ಸತ್ಯವನು ತಿಳಿದುಕೊಂಡೆನೊ ನಾ ನಿನ್ನೊಳು ಕೂಡಿ
ಸತ್ಯವನು ನಾ ತಿಳಕೊಂಡೆ ಜನರಿಗೆ ನಾ ಕೆಟ್ಟವ ಕಂಡೆ
ಪ್ರೀತಿ ಮಾಡಿ ಎಲ್ಲ ಪಡಕೊಂಡೆ ಸದ್ಗುರುವಿನ ಕಂಡೆ

ಮಾನವರು ಉನ್ನತಿಯನ್ನು ಸಾಧಿಸಬೇಕಾದರೆ ತಮ್ಮೊಳಗಿನ ದೇವರಲ್ಲಿ, ಅಂದರೆ ತಮ್ಮ ಆತ್ಮಸಾಕ್ಷಿಯಲ್ಲಿ ತಮ್ಮ ನಿಜಸ್ವರೂಪವನ್ನು ಕಂಡುಕೊಳ್ಳಬೇಕು. ಅಲ್ಲದೆ ತಮ್ಮೊಳ ಗಿನ ದೇವರು ಹೇಳಿದಂತೆ ಕೇಳುವುದರ ಮೂಲಕ ಆ ದೇವರೊಡನೆ ಕೂಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಸಕಲಜೀವಾತ್ಮರಿಗೆ ಲೇಸನೇ ಬಯಸುವಂಥ ಮನಸ್ಸು ರೂಪು ಗೊಳ್ಳುವುದು. ಆಗ ಜಾತಿ, ವರ್ಣ, ಮೇಲು, ಕೀಳು ಮುಂತಾ ದ ಮಾನಸಿಕ ಹೊಲಸು ಮಾಯವಾಗುವವು. ಹೀಗೆ ಮಾನವ ಉದಾತ್ತವಾಗುವನು. ಆದರೆ ವರ್ಣವ್ಯವಸ್ಥೆಯಿಂದ ಲಾಭ ಪಡೆಯುವವರು ಇಂಥ ಮಾನಸಿಕ ಸ್ಥಿತಿಗೆ ವಿರುದ್ಧವಾಗಿರು ತ್ತಾರೆ. ಎಲ್ಲರೂ ಸಮಾನರಾದಾಗ ಅವರ ಅಸ್ತಿತ್ವವೇ ಉಳಿಯು ವುದಿಲ್ಲ. ಹೀಗಾಗಿ ಅಂಥವರ ದೃಷ್ಟಿಯಲ್ಲಿ ಇಂಥ ಉತ್ತಮರು ಕೆಟ್ಟವರಾಗಿ ಕಾಣುತ್ತಾರೆ. ಆದರೆ ಉತ್ತಮರು ಯಾವುದಕ್ಕೂ ಎದೆಗುಂದದೆ ಜಗತ್ತನ್ನು ಪ್ರೀತಿಸುತ್ತಲೇ ಮುಂದೆ ಮುಂದೆ ಸಾಗುತ್ತ ತಮ್ಮೊಳಗಿನ ಅರಿವೆಂಬ ಸದ್ಗುರುವಾದ ದೇವರನ್ನು ಕಾಣುತ್ತಾರೆ. ಅರಿವು ಎಂದರೆ ಬೇರೆ ಅಲ್ಲ. ನಮ್ಮೊಳಗೇ ದೇವರಿದ್ದಾನೆ ಎಂಬುದೇ ಅರಿವು. ಸಕಲ ಜೀವಿಗಳಲ್ಲಿ ದೇವರಿ ದ್ದಾನೆ ಎಂಬುದೇ ಅರಿವು. ಈ ಕಾರಣದಿಂದ ಸಕಲಜೀವಾ ತ್ಮರಿಗೆ ಲೇಸನ್ನೇ ಬಯಸಬೇಕು. ಸಕಲರ ಜೊತೆ ಪ್ರೇಮಭಾ ವದಿಂದ ಇರಬೇಕು. ದಯೆಯೇ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿರಬೇಕು ಎಂದು ನಾವು ನಿರ್ಧರಿಸುವಂತೆ ಮಾಡುವುದೇ ಅರಿವು.

ದೇವರು ಒಬ್ಬನಲ್ಲೊ ಯಪ್ಪ ಬಹಳ ಬಹಳ ಮಂದಿ ಹಾರ
ದೇವರು ಅಲ್ಲೆ ಅಲ್ಲೊ ಜಾಣ ಅವರು ಇಲ್ಲೆ ಇಲ್ಲೆ ಹಾರ
ತೆತ್ತೀಸ ಕೋಟಿ ಎಣಿಸಿ ಹೇಳಿದರು; ಎಲ್ಲರೂ ಇಲ್ಲೇ ಹಾರ ಅವರೆ
ನಾವಾಗಿ ಇರುತಾರ; ಹೇಳಬ್ಯಾಡ ಸತ್ಯ ಹೊಡಿಯುತಾರ
ಹೂವಿನೊಳ್ ವಾಸನೆ, ಹಾಲಿನೊಳಗೆ ತುಪ್ಪ ಎಲ್ಲರೂ ಒಪ್ತಾರ
ಗುರುಪೀರಾ ಖಾದರಿ ಬಿಚ್ಚಿ ಹೇಳಿದರೆ ಎಗರಿ ಬೀಳತಾರ

ದೇವರು ಬಹಳ ಮಂದಿ ಇದ್ದಾರೆ ಎಂದರೆ ಬಹುದೇ ವೋಪಾಸನೆ ಮಾಡಬೇಕೆಂದಲ್ಲ. ಪ್ರತಿಯೊಬ್ಬರು ತಮ್ಮೊಳಗಿನ ದೇವರನ್ನು ಆರಾಧಿಸಬೇಕು ಎಂದು ಅರ್ಥ. ಪ್ರತಿಯೊಬ್ಬರು ತಮ್ಮೊಳಗಿನ ದೇವರ ಜೊತೆ ಬದುಕಲು ಕಲಿತರೆ ಇಡೀ ವಿಶ್ವ ಸುಲಿಗೆಯಿಂದ, ಮೇಲುಕೀಳು ಭಾವನೆಯಿಂದ, ಹಿಂಸೆ, ಅತ್ಯಾಚಾರ, ಕೊಲೆ ಮತ್ತು ಯುದ್ಧಗಳಿಂದ ಮುಕ್ತವಾಗುತ್ತದೆ. ಹೂವಿನಲ್ಲಿ ವಾಸನೆ ಇರುವಂತೆ, ಹಾಲಿನೊಳಗೆ ತುಪ್ಪ ಇರುವಂತೆ ದೇವರು ನಮ್ಮೊಳಗೆ ಇರುತ್ತಾನೆ. ಆದ್ದರಿಂದ ಪ್ರತಿಯೊಬ್ಬರು ಅವರವರ ಒಳಗಿರುವ ದೇವರ ಉಪಾಸನೆ ಮಾಡಬೇಕು ಮತ್ತು ಕೊನೆಗೆ ಆ ದೇವರೇ ಆಗಬೇಕು. ಆದರೆ ವಿಶ್ವಮಾನವರಾಗದೇ ಎಲ್ಲರೀತಿಯ ಶೋಷಣೆಯನ್ನು ಮಾಡುತ್ತ ಬದುಕ ಬಯಸುವವರು ಈ ಸತ್ಯ ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅವರು ಇಂಥ ನಿಜತತ್ತ್ವಕ್ಕೆ ವಿರೋಧ ವ್ಯಕ್ತಪ ಡಿಸುತ್ತಲೇ ಇರುತ್ತಾರೆ.

ಹೇ ತೊಗಲಿನ ಕಾಯ ಭೇದವೇಕೊ ಮಹಾರಾಯ
ಮೈಯಲ್ಲಾ ನಿನಗೆ ಗಾಯ ನಿನ್ನಂತೆ ಅವರ ಕಾಯ
ಶಿವನಿರುವ ಗುಡಿಯೇ ತೊಗಲು ಮುಂದೆ ಕುಂತ ನಂದಿಯೇ
ತೊಗಲು; ಇವನು ತೊಗಲು, ಶಿವನು ತೊಗಲು, ಅರಿವು ಎಂಬ
ಗುರುಪೀರನೆ ತೊಗಲು

ಇಲ್ಲಿ ಗುರು ಖಾದರಿಪೀರಾ ಅವರು ತೊಗಲನ್ನು ನಶ್ವರ ವಸ್ತುವಿನ ಸಂಕೇತವಾಗಿ ಬಳಸಿದ್ದಾರೆ. ದೇಹ ಎಂಬುದು ವಸ್ತು, ಅರಿವಿನ ಮೂಲಕ ಆ ದೇಹದೊಳಗಿನ ಚೈತನ್ಯವನ್ನು ದೇವರೆಂಬುದನ್ನು ಮನಗಾಣಬೇಕು ಎಂದು ಸೂಚಿಸಿದ್ದಾರೆ. ಈ ಸತ್ಯವನ್ನು ಹೇಳುವ ಗುರು ಕೂಡ ಇತರರಂತೆ ವಸ್ತುವೇ ಆಗಿದ್ದಾನೆ. ಆದರೆ ಪ್ರತಿಯೊಂದು ವಸ್ತುವಿನ ಒಳಗೆ ದೇವರಿದ್ದಾನೆ.

ಪರಮ ಸುಂದರ ನೀನು, ನಿನ್ನ ಮಂದಿರ ನಾನು
ಸುಂದರ ಮಂದಿರವು ಎರಡು ಒಂದಾಗಿರಲು
ಕಲ್ಲು ಮೂರುತಿ ಮಾಡಿ ನಲ್ಲನೆಂದೆನುತಿರಲು
ನಲ್ಲ ಬಂದೊಡೆ ಕಲ್ಲು ಮೂರುತಿ ಸರಿಸಲು
ನಿನ್ನ ರಥವು ನಾನು, ರಥಕೆ ಸಾರಥಿ ನೀನು
ಎರಡು ಚಕ್ರದ ಆಟ ಇರಿಸು ಒಂದಾಗಿರಲು

ವಸ್ತುವೆಂಬುದು ಮಂದಿರ; ಅದರೊಳಗಿನ ಚೈತನ್ಯವೇ ಪರಮ ಸುಂದರ. ಅದುವೇ ಸತ್ಯ. ಅದುವೇ ಶಿವ. ಆ ಚೈತನ್ಯವೇ ಎಲ್ಲ ದೇವರುಗಳ ಮೂಲ. ಅದುವೇ ಪರಮ ಸುಂದರ. ವಸ್ತು ಎಂಬದು ಮತ್ತು ಮಾನವಕುಲ ಎಂಬುದು ರಥ ಮಾತ್ರ. ಆ ಪರಮ ಸುಂದರ ಚೈತನ್ಯವೇ ಸಾರಥಿ. ಈ ವಸ್ತು ಮತ್ತು ಚೈತನ್ಯದ ಅಭೇದ್ಯ ಸಂಬಂಧವೇ ಅದ್ವೈತ.

ಪಂಚಭೂತ ರಂಗಮಂಟಪ ರಚಿಸಿ; ಇದರೊಳು ಆತ್ಮದ ಪೀಠವ ಇರಿಸಿ ಕುಂತು
ಕಾಣದಂತೆ ನನ್ನೊಳು ಸೂತ್ರಧಾರಿಯಾಗಿ ನೀನು ನಾನಾಗಿ ಪಾತ್ರ ಮಾಡಿದ್ಯಾ

ಪ್ರತಿಯೊಂದು ಜೀವ ಪಂಚಮಹಾಭೂತಗಳಿಂದಲೇ ಸೃಷ್ಟಿಯಾಗಿದೆ. ಆ ಜೀವಿಗಳೊಳಗಿನ ಆತ್ಮದ ಪೀಠದ ಮೇಲೆ ಚೈತನ್ಯವೆಂಬ ದೇವರು ಕಾಣದಂತೆ ಆತ್ಮಸಾಕ್ಷಿಯಾಗಿ ಕುಳಿತು ಬದುಕಿನ ಸೂತ್ರಧಾರಿಯಾಗಿದ್ದಾನೆ. ಆತ ಆ ಜೀವಿಯ ಪಾತ್ರ ಮಾಡುತ್ತಿದ್ದಾನೆ. ಆದ್ದರಿಂದ ಆತ್ಮಸಾಕ್ಷಿಯೇ ದೇವರು. ಜೀವಿಯು ತನ್ನ ಆತ್ಮಸಾಕ್ಷಿಯ ಆದೇಶವನ್ನು ಪಾಲಿಸಿದರೆ ದುಃಖಕ್ಕೆ ಈಡಾಗುವುದಿಲ್ಲ.

ಎಲ್ಲ ಮಾನವರು ಒಂದೇ ಎಂಬ ನಿಜತತ್ತ್ವ ನೀ ತಿಳಿಬೇಕು
ಭೇದ ಮಾಡದೆ ಸರ್ವಜನರಲ್ಲಿ ರಬ್ಬಿಲಾಲನ ನೀ ಕಾಣಬೇಕು

ಹೀಗೆ ಎಲ್ಲರೊಳಗೂ ಒಂದೇ ತೆರನಾದ ಆತ್ಮಸಾಕ್ಷಿ ಇರು ತ್ತದೆ. ಆ ಮೂಲಕ ಎಲ್ಲರಲ್ಲೂ ಒಬ್ಬನೇ ದೇವರಿದ್ದಾನೆ. ಆ ದೇವರನ್ನು ನಮ್ಮ ಅರಿವಿನ ಕಣ್ಣುಗಳಿಂದ ಕಾಣುವುದರ ಮೂಲ ಕ ಎಲ್ಲ ಮಾನವರು ಒಂದೇ ಎಂಬ ಸತ್ಯವನ್ನು ಅರಿಯಬೇಕು. ಈ ನಿಜತತ್ತ್ವವನ್ನು ಅರಿತವನು ಜಾತಿ, ಧರ್ಮ, ದೇಶ ಮತ್ತು ಭಾಷೆಗಳ ಹೆಸರಿನಲ್ಲಿ ಜನರಲ್ಲಿ ಭೇದಭಾವ ಮಾಡದೆ ಎಲ್ಲ ರಲ್ಲೂ ದೇವರನ್ನೇ ಕಾಣುವನು. ತಾನು ಎಲ್ಲರೊಳಗೆ ಎಲ್ಲರೂ ತನ್ನೊಳಗೆ ಎಂದು ಬದುಕುವನು. ಹೀಗೆ ಬದುಕುವ ಅರಿವನ್ನು ಮೂಡಿಸುವುದೇ ನಮಾಜ (ಪ್ರಾರ್ಥನೆ) ಎಂದು ಖಾದರಿಪೀರಾ ತಿಳಿಸಿದ್ದಾರೆ. ಪ್ರಾರ್ಥನೆ ಎಂಬುದು ಸಕಲಜೀವಾತ್ಮರನ್ನು ಪ್ರೀತಿಸುವ ಮನಸ್ಸನ್ನು ರೂಪಿಸುವಂಥದ್ದು.

ಹೊಂದಿಕೊಂಡು ಒಂದಾಗಿರಲಿಲ್ಲಾ; ಕೂಡಿ ಬಾಳಲಿಲ್ಲಾ
ಶಾಂತಿ ಎಂಬುದೇ ಸಿಗಲಿಲ್ಲಾ ಪ್ರೀತಿ ಮಾಡಲಿಲ್ಲಾ
ಭೇದ ಮಾಡುವರೆಲ್ಲಾ ಬಲವಿದ್ದಲ್ಲಿ ಬಾಗುವರೆಲ್ಲಾ
ಪ್ರೀತಿ ಏನೆಂಬುದು ತಿಳೀಲಿಲ್ಲಾ ಹಾಳಾದರೆಲ್ಲಾ

ಪ್ರೀತಿ ಇಲ್ಲದೆ ಮಾನವನ ಮನಸ್ಸಿನಲ್ಲಿ ಶಾಂತಿ ಲಭಿಸದು. ಭಾವೈಕ್ಯದಿಂದ ಬದುಕುವ ಪ್ರಜ್ಞೆ ಮೂಡದು. ಭೇದಭಾವ ದಿಂದಾಗಿ ಬಲವುಳ್ಳವರು ಬಲಹೀನರನ್ನು ಗುಲಾಮಗಿರಿಗೆ ತಳ್ಳುವರು. ಲೋಕದಲ್ಲಿ ಅಶಾಂತಿಯ ವಾತಾವರಣ ನಿಮರ್ಾಣ ವಾಗುವುದು. ಹೀಗೆ ಪ್ರೀತಿಯ ಮಹತ್ವವನ್ನು ಅರಿಯದೇ ಜನರು ಹಾಳಾಗಿಹೋಗುವರು ಎಂದು ಖಾದರಿಪೀರಾ ಅವರು ಖೇದ ವ್ಯಕ್ತಪಡಿಸುತ್ತಾರೆ.

ರಾಜಭೋಗದ ದರ್ಪ ಸಿರಿ ಸಂಪತ್ತಿನ ದರ್ಪ
ಬುದ್ಧಿವಂತಿಕೆಯ ದರ್ಪ ದೊಡ್ಡವನೆಂಬುವ ದರ್ಪ
ಜೀವ ಹೋದಮ್ಯಾಲೆ ಏನಿಲ್ಲೊ ಮರುಳೆ

ಪ್ರತಿಯೊಬ್ಬರು ಪ್ರತಿಕ್ಷಣವೂ ಸಾವಿನ ದವಡೆಯ ಕಡೆಗೆ ಸಾಗುತ್ತಿರುತ್ತಾರೆ. ಇದನ್ನು ಅರಿಯದೆ ಅಧಿಕಾರ, ಶ್ರೀಮಂತಿಕೆ, ಬುದ್ಧಿವಂತಿಕೆ ಮತ್ತು ದೊಡ್ಡಸ್ತಿಕೆಯ ದರ್ಪದಿಂದ ಬದುಕು ವವರು ಕೂಡ ಎಲ್ಲವನ್ನೂ ಇಲ್ಲೇ ಬಿಟ್ಟು ಸಾಯುವರು. ಅವರ ಸೊಕ್ಕು ಧಿಮಾಕುಗಳೆಲ್ಲ ಅರ್ಥಹೀನವಾಗುತ್ತವೆ ಎಂಬುದನ್ನು ಆ ಧಿಮಾಕಿನವರು ಅರಿಯುವಂತೆ ಎಚ್ಚರಿಸುತ್ತಾರೆ.

ಸಾಧು ಆಗಿ ನೀ ಸಾಧನೆ ಇಲ್ಲದೆ ಭೋಗವ ಭೋಗಸೈತಿ ನಿನ್ನ ಮನ
ಯೋಗದ ತೋರಿಕೆ, ಜಾಗದ ಮಹಿಮೆ ಮನಸೆಲ್ಲಿ ಜಾರೈತಿ
ಹೇಳು ನಿನ್ನ ಮನಸೆಲ್ಲಿ ಜಾರೈತಿ

ಇಂಥ ವಿಷಮಸ್ಥಿತಿಯಲ್ಲಿ ಜನರಿಗೆ ಮಾರ್ಗದರ್ಶನ ಮತ್ತು ತತ್ತ್ವದರ್ಶನ ಮಾಡಿಸಬೇಕಾದ ಧರ್ಮಗುರುಗಳು ಕೂಡ ಯಾವುದೇ ಸಾಧನೆ ಇಲ್ಲದೆ ಭೋಗಕ್ಕೆ ಮನಸೋತು ಅದರಲ್ಲೇ ನಿತ್ಯಾನಂದವನ್ನು ಕಾಣುತ್ತಿದ್ದಾರೆ. ತೋರಿಕೆಯ ಯೋಗ ಮತ್ತು ಧ್ಯಾನ ಹಾಗೂ ತಾವು ಪ್ರತಿನಿಧಿಸುತ್ತಿರುವ ಸುಕ್ಷೇತ್ರದ ಮಹಿಮೆ ಯಿಂದಾಗಿ ಇಂಥ ಧರ್ಮಗುರುಗಳು ವರ್ಚಸ್ಸನ್ನು ಬೆಳೆಸಿ ಕೊಂಡು ಮನೋ ಕಾಮನೆಗಳನ್ನು ಈಡೇರಿಸಿಕೊಳ್ಳುವುದರಲ್ಲೇ ಮಗ್ನರಾಗಿರುತ್ತಾರೆ. ಇಂಥವರನ್ನು ಪ್ರಶ್ನಿಸುವ ಕ್ರಮವಿದು.

ದುಷ್ಟಶಕ್ತಿ ಹೇಳಿದಾ ಮಾತು ವೇದವಾಕ್ಯ ಬಡವನಿಗಾಯ್ತು
ಬಡವ ಹೇಳಲಾರದಂಗಾಯ್ತು ಹೇಳಿದರೆ ಹೆಣ ಸಿಗದಂಗಾ ಯ್ತು
ಶಕ್ತಿಶಾಲಿ ನೀನಾಗಬೇಕು ಸತ್ಸಂಗ ನಿನ್ನ ಉಸಿರಾಗಬೇಕು
ಮಾನವಂತರ ಮಾನ ನಿನ್ನಯ ಮಾನವಾಗಿ ತಿಳಿಯಬೇಕೊ

ಈ ದುಷ್ಟಶಕ್ತಿಗಳೆಲ್ಲ ಕೂಡಿ ಬಡವರ ಜೀವ ತಿನ್ನುತ್ತವೆ. ಇಂಥ ಅಧಿಕಾರಬಲ, ಧನಬಲ, ಅಂತಸ್ತುಬಲ ಮತ್ತು ಧರ್ಮ ಬಲ ಇದ್ದವರು ಹೇಳಿದ ಮಾತುಗಳನ್ನು ಬಡವರು ವೇದವಾ ಕ್ಯವೆಂಬಂತೆ ಸ್ವೀಕರಿಸುವುದು ಅನಿವಾರ್ಯವಾಗಿದೆ. ಒಂದುವೇಳೆ ಸ್ವೀಕರಿಸದೆ ಇದ್ದರೆ ಆತನ ಹೆಣವೂ ಸಿಗದಂಥ ಪರಿಸ್ಥಿತಿ ಅನೇಕ ಕಡೆಗಳಲ್ಲಿ ಇಂದಿಗೂ ಮುಂದುವರಿದಿದೆ. ಇಂಥ ಸ್ಥಿತಿಯಲ್ಲಿ ಬಡವರು ಸತ್ಸಂಗ ಮಾಡುತ್ತ ದುಷ್ಟಶಕ್ತಿಗಳನ್ನು ಎದುರಿಸುವ ಕ್ರಮವನ್ನು ಅವರು ಬಹಳ ಮಾಮರ್ಿಕವಾಗಿ ಸೂಚಿಸಿದ್ದಾರೆ. ಸದಾ ನೋವು ಮತ್ತು ಅಪಮಾನಕ್ಕೆ ಒಳಗಾಗುವ ಬಡವರು ಒಂದಾಗದೆ ಇದ್ದಾಗ ಅವರನ್ನು ಬಲವುಳ್ಳವರು ಬಹಳ ಹೀನಾ ಯವಾಗಿ ಕಾಣುತ್ತಾರೆ ಎಂಬುದನ್ನು ಗುರು ಖಾದರಿಪೀರಾ ಅವರು ಕೋತಿ ಕರಡಿ ರಾಕ್ಷಸರು ತತ್ತ್ವಪದದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕೋತಿ ಕರಡಿ ರಾಕ್ಷಸರು ನಾವು ಹಿಂದೆ ಉಳಿದವರು
ದೇವಿ ದೇವತರೆಲ್ಲ ಮುಂದೊರೆದ ಹಾರುವರು
ಗುಡಿಗಳು ಹುಟ್ಟಲು ಕಾರಣರ್ಯಾರು; ಅದಕೆ ಪೂಜಾರಿ ಅವರು
ದಾನ ನೀಡಲು ಹಿಂದುಳಿದವರು; ಬೇಡುವವರೇ ಹಿರಿಯರು
ಸಹಾಯ ಮಾಡಿದ ಜಾಂಬುವಂತಗೆ ಕರಡಿಯೆಂದು ಕರೆದವರ್ಯಾರು
ಅಪಕಾರ ಮಾಡಿದವರು ದೇವರಾಗಿ ಮೆರಿತಿಹರು
ಜಾನಕಿಯ ತಂದವರ್ಯಾರು; ಕಪಿಸೈನ್ಯ ನಮ್ಮವರ ಹೆಸರು
ಕಷ್ಟದಿಂದ ಪಾರು ಮಾಡಲು ನಾವೇ ಪ್ರಜೆಗಳು, ಅವರೆ ರಾಜರು
ಯಲ್ಲಮ್ಮ ಯಾರವರು; ಹಿಂದುಳಿದ ನಾವೇ ಜೋಗಮ್ಮನವರು
ಕೊರಳಲ್ಲಿ ಕೆರು ಕಟ್ಟಿಕೊಂಡು ಬೆತ್ತಲಾಗಿ ನಮ್ಮವರು
ದೇವರ ಹೆಸರಿನಲ್ಲಿ ವ್ಯಭಿಚಾರ ಮಾಡುವರ್ಯಾರು; ಯಾಗದ ನೆಪದಲ್ಲಿ
ಕುರಿಕೋಣಕೋಳಿ ನುಂಗಿ ಮಂತ್ರ ಹೇಳಿದವರ್ಯಾರು
ಹಕ್ಕು ಕೇಳಬಾರದು ಯಾರು, ಹಿಂದುಳಿದ ನಾವೇ ಶೂದ್ರ ಜನರು
ಸತ್ತರೆ ಸುಡುವರ್ಯಾರು ನಾವೆ ಸಂಕಟರಮಣರು
ಗುರುಪೀರ ನಮ್ಮವರು ಬೈಲುಮಾಡಿ ತೋರಿದರು ಶೂದ್ರರಲ್ಲಾ
ನಾವೇ ರಾಜರು ಎಂದು ಸತ್ಯ ಹೇಳಿದವರು ಇವರೆ ನಮ್ಮ ಗುರುಗಳು

ದುಡಿಯುವ ಬಹುಪಾಲು ಶೂದ್ರ ಜನರೇ ರಾಜರು ಎಂಬ ಸತ್ಯವನ್ನು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ. ಗುರು ಖಾದರಿ ಪೀರಾ ಅವರು ಕಾಲರ್್ ಮಾಕ್ಸರ್್ ಮತ್ತು ಸ್ವಾಮಿ ವಿವೇಕಾನಂದರ ಸಮಕಾಲೀನರು ಕೂಡ ಆಗಿದ್ದಾರೆ. ಕಾಲರ್್ ಮಾಕ್ಸರ್್ ಅವರು ಕಾಮರ್ಿಕ ಸವರ್ಾಧಿಕಾರದ ಬಗ್ಗೆ ತಿಳಿಸಿ ದ್ದಾರೆ. ಸ್ವಾಮಿ ವಿವೇಕಾನಂದ ಅವರು ಶೂದ್ರರು ಈ ಜಗತ್ತನ್ನು ಆಳಬೇಕು ಎಂದು ತಿಳಿಸಿದ್ದಾರೆ. ಇದೇ ರೀತಿಯಲ್ಲಿ ಖಾದರಿ ಪೀರಾ ಅವರು ಶೂದ್ರರಲ್ಲಾ; ನಾವೇ ರಾಜರು ಎಂದು ಹೇಳಿದ್ದು ಸಹಸ್ರಾರು ವರ್ಷಗಳಿಂದ ಶೋಷಣೆಗೆ ಒಳಗಾಗುತ್ತ ಬಂದ ಶೂದ್ರ ಜನಾಂಗದ ಬಗ್ಗೆ ಅವರಿಗೆ ಇರುವ ಕಾಳಜಿ ಯನ್ನು ತೋರಿಸುತ್ತದೆ.

ಸೌಹಾರ್ದ ಎಂಬುದು ತೋರಿಕೆಯ ಮಾತುಗಳಿಂದ ಸೃಷ್ಟಿ ಯಾಗುವಂಥದ್ದಲ್ಲ. ಮೇಲ್ಜಾತಿ ಮತ್ತು ಮೇಲ್ವರ್ಗದ ದೌರ್ಜನ್ಯ ವನ್ನು ಅಲ್ಲಗಳೆಯುತ್ತ, ಕೆಳಜಾತಿ ಮತ್ತು ಕೆಳವರ್ಗಗಳ ಜನಸ ಮುದಾಯಗಳ ಬಗ್ಗೆ ಅಂತಃಕರಣದ ವಾತಾವರಣ ಸೃಷ್ಟಿಸುತ್ತ ಸರ್ವಧರ್ಮ ಸಮಭಾವದ ಪ್ರಜ್ಞೆಯೊಂದಿಗೆ ಮಾನವೀಯ ಚಿಂತನೆಗಳನ್ನು ಹರಡಿದಾಗ ಸೌಹಾರ್ದದ ವಾತಾವರಣ ಸೃಷ್ಟಿಯಾಗುತ್ತದೆ. ಸೌಹಾರ್ದ ಸೃಷ್ಟಿಯಲ್ಲಿ ಕಾಳಜಿ, ಹೋರಾಟ, ಇದ್ದದ್ದನ್ನು ಇದ್ದ ಹಾಗೆ ಹೇಳುವ ನೈತಿಕ ಶಕ್ತಿ, ಸರ್ವಧರ್ಮ ಸಮಭಾವ ಮತ್ತು ಮಾನವ ಏಕತೆಯ ಪ್ರಜ್ಞೆ ಹೆಚ್ಚಿನ ಪಾತ್ರ ವಹಿಸುತ್ತವೆ. ಗುರು ಖಾದರಿಪೀರಾ ಅವರು ತಮ್ಮ ಬದುಕಿನಲ್ಲಿ ಸಾಧಿಸಿದ್ದು ಇದನ್ನೇ. ಅವರ ಸಾಧನೆಯ ಸಂಕೇತವಾಗಿ ಜ್ಞಾನಸಮುದ್ರ ನಮ್ಮ ಕಣ್ಣೆದುರಿಗಿದೆ.

ಶಿಶುನಾಳ ಶರೀಫರು ನಮಗೆ ಭಾವಪೂರ್ಣ ತತ್ತ್ವಪದ ಕಾರರಾಗಿ ಕಂಡುಬಂದರೆ ಸೂಫಿ ದೃಷ್ಟಿಕೋನದ ಧರ್ಮಗುರು ಖಾದರಿಪೀರಾ ಅವರು ಪ್ರಜ್ಞಾಪೂರ್ಣ ತತ್ತ್ವಪದಕಾರರಾಗಿ ಕಂಡುಬರುತ್ತಾರೆ. ದೇವರು ಎಲ್ಲರಲ್ಲಿ ಇದ್ದಾನೆ ಎಂದು ಪ್ರತಿಪಾದಿಸುವ ಅವರು ಗುಡಿ ಮಸೀದಿಗಳ ಬಗ್ಗೆ ಉದಾಸೀನ ಭಾವ ತಾಳುತ್ತಾರೆ. ನಮ್ಮ ದೇಹಗಳೇ ಗುಡಿ ಮಸೀದಿಗಳು ಎಂದು ಸಾರುವ ಅವರು ಜಾತಿ, ವರ್ಣ, ಶೋಷಣೆ ಮುಂತಾದ ಅನಿಷ್ಟಗಳ ಬಗ್ಗೆ ಸಾತ್ವಿಕ ಕೋಪವನ್ನು ವ್ಯಕ್ತಪಡಿ ಸುತ್ತಾರೆ. ಅಸ್ಪೃಶ್ಯರ ಮತ್ತು ಶೂದ್ರರ ಪರವಾಗಿ ನಿಲ್ಲುತ್ತಾರೆ. ತೋರಿಕೆಯ ದೇವರುಗಳನ್ನು ನಿರಾಕರಣೆ ಮಾಡುವ ಅವರು ಗಣಪತಿ, ದೇವಿ ಮುಂತಾದ ದೇವತೆಗಳನ್ನು ಕೂಡ ಸಂಕೇತಾ ರ್ಥದಲ್ಲಿ ನೋಡಿ ಪ್ರೇಮಭಾವದಿಂದಲೇ ಬರೆದಿದ್ದಾರೆ. ಸೂಫಿ ಪ್ರೇಮತತ್ತ್ವವು ಯಾವುದನ್ನೂ ನಿರಾಕರಿಸುವುದಿಲ್ಲ. ಆದರೆ ಮಾನವಘನತೆಗೆ ಕುಂದು ತರುವ ಯಾವುದನ್ನೂ ಸ್ವೀಕರಿಸುವುದಿಲ್ಲ.

ದಾನಧರ್ಮದ ನೆಪಕಾಗಿ ಜನರಲ್ಲಿ ತನ್ನಯ ಹಿತಕ್ಕಾಗಿ
ಕ್ವಾಣ ಕಡಿಯುವ ಧರ್ಮವೆ ಅಲ್ಲಾ; ಮಾರೆಮ್ಮನಿಗೆ ಅದು
ಬೇಕಿಲ್ಲಾ

ಪ್ರಾಣಿಬಲಿ ಕೊಡುವುದು ಧರ್ಮ ಅಲ್ಲ ಎಂದು ಹೇಳುವ ಅವರು, ಇದ್ದವರು ಜನರಿಂದ ತಮಗೆ ಲಾಭವಾಗುವ ಉದ್ದೇ ಶದಿಂದಲೇ ದಾನಧರ್ಮದ ನೆಪದೊಂದಿಗೆ ಇಂಥ ಸಂಪ್ರದಾ ಯಗಳನ್ನು ತಂದಿದ್ದಾರೆ ಎಂದು ತಿಳಿಸಿದ್ದಾರೆ. ಇದು ಅವರ ಸೂಕ್ಷ್ಮಪ್ರಜ್ಞೆಯ ಪ್ರತೀಕವಾಗಿದೆ.

ಮಾರೆಮ್ಮಾ ಅಲ್ಲಾ ತಮ್ಮಾ ಮಾ ಅಮ್ಮ ಎಂದು ತಿಳಿಸುತ್ತಾರೆ. ಅಮ್ಮನಿಗೆ ನೀ ತಿಳಿ ತಮ್ಮ; ಮನ್ಯಾಗ ಐದಾಳ ನಿಮ್ಮಮ್ಮ ಎಂದು ಹೇಳಿ ಮನೆಯೊಳಗಿನ ಅಮ್ಮನ ಸೇವೆ ಮಾಡಬೇಕೆನ್ನುತ್ತಾರೆ. ಅಮ್ಮನಂಥ ದೇವರು ಇಲ್ಲಾ; ಅಮ್ಮ ನಿಂದಲೇ ದೇವರು ಎಲ್ಲಾ ಎಂದು ಸಾರುತ್ತಾರೆ. ಹೀಗೆ ಮಾನವೀಯತೆ ಮತ್ತು ದೈವತ್ವದ ಮಧ್ಯೆ ಅಭೇದ್ಯ ಕಲ್ಪಿಸುವ ಅವರ ಕ್ರಮ ವಿಶಿಷ್ಟವಾಗಿದೆ.

ಅವರು ಮಾನವೀಯ ತತ್ತ್ವವನ್ನು ಸಾರುತ್ತಲೇ ಸಮಾ ಜದ ನಿಜಸ್ವರೂಪವನ್ನು ಅನಾವರಣಗೊಳಿಸುತ್ತ ಕಾವ್ಯರಚನೆ ಮಾಡಿದ್ದಾರೆ. ಒಳಗಿನ ಮಾತು ಸಂಗಯ್ಯನೇ ಬಲ್ಲ ಎಂಬ ತತ್ತ್ವಪದದಲ್ಲಿ ಅವರು ನಮ್ಮ ಸಮಾಜದ ನಿಜಸ್ವರೂಪವನ್ನು ಹೀಗೆ ತೋರಿಸಿದ್ದಾರೆ.

ಒಳಗಿನ ಮಾತು ಸಂಗಯ್ಯನೇ ಬಲ್ಲ; ಲಿಂಗಯ್ಯ ತಾನಾಗಿ ನೋಡ್ಯಾನ
ಲಿಂಗಸಂಗದ ಕೂನಾವು ತಾನಾಗಿ ಗುರುಪೀರಾ ಖಾದರಿ ಹೇಳ್ಯಾನ
ಸುಳ್ಳರಂಗ ನಿ ಇರದಿದ್ದರ ಇಲ್ಲಿ ಹುಚ್ಚನೆನ್ನುವರು ತಿಳಿ ನೀನಾ
ಬಟ್ಟೆತೊಟ್ಟು ಬಿಚ್ಚಿಡುವ ಜನರಿಗೆ ಸತ್ಯ ಕೆಟ್ಟ ಸಂಕಟರಮಣ
ಪ್ರೀತಿ ಮಾಡುವ ಜನರಿಗೆ ಜಗದಲ್ಲಿ ಅಸುರರೆಂದರು ತಿಳಿ ನೀನಾ
ಕುಡಿತ ಕಡಿತ ಜಡಿತೆಲ್ಲಾ ಮಾಡಿ ಇಲ್ಲಿ ದೇವರಾದರು ತಿಳಿ ಜಾಣಾ
ಕಾಲಿಗೆ ತಲೆಯೆಂದು ತಲೆಗೆ ಕಾಲೆಂದು ಪಂಡಿತರಾಗ್ಯಾರೊ ತಿಳಿ ನೀನಾ
ಸುರ ಅಸುರರ ಮೂಲಾ ಗುಟ್ಟು ತಿಳಿದ ಶರಣರಿಗಾಯಿತು ಅವಮಾನ
ಎಲ್ಲ ಧರ್ಮದಲ್ಲಿ ಮಣ್ಣಿಗೆ ಸುಣ್ಣ ಹೊಡೆದು ಸುಳ್ಳು ಹೇಳಿದವರಿಗೆ ಘನಸ್ಥಾನ
ಸತ್ಯ ಹೇಳಿದ ಸೂಫಿಸಂತರಿಗೆ ಗಲ್ಲಿಗೇರಿಸ್ಯಾರೊ ತಿಳಿ ನೀನಾ
ಮೂರು ಕಾಲದೊಳು ಬದಲಾಗುವ ಜನ ನೋಡಿ ತಿಳಿಯೊ ನೀ ಅವರ ಗುಣ
ಸಾಲಗುಂದಿಪುರದೊಳು ನೀ ಹಸನಾಗಿ ವೆಸನ ಮಾಡಿ ತಿಳಿ ನಿನ್ನ ನೀನಾ
ಗುರುವೇ ಖಾದರಿ ಪೀರನಾಗಿ ಹೇಳೋ ಇದ್ದದ್ದು ಇದ್ದಾಂಗ ಜಗದ ಗುಣ
ಸತ್ಯಶರಣರಿಗೆ ಕಾಡಿಸಿ ಕೊಲೆಮಾಡಿ ಬೆಂಕಿಯಂಥ ಶರಣೆಂದ ಜನ

ಇನ್ನೊಂದು ತತ್ತ್ವಪದದಲ್ಲಿ ಇಲ್ಲಿ ಧರ್ಮ ಎಂಬುದು ಬಂದೀಖಾನೆ ಅಲ್ಲಿ ನರಕ ಎಂಬುವ ಬಂದೀಖಾನೆ.. .. ಪ್ರೀತಿಯೇ ನಿಜಧರ್ಮ ನನ್ನ ಗುರುವಿನಾಣೆ
ಎಂದು ಪ್ರೇಮದ ಉತ್ಕಟ ಭಾವವನ್ನು ಮೆರೆದಿದ್ದಾರೆ. ಎಲ್ಲ ಸೂಫಿ ಗಳಂತೆ ಅವರಿಗೆ ಪ್ರೇಮವೇ ಧರ್ಮವಾಗಿತ್ತು. ಬಸವಣ್ಣನವರ ದಯೆ ಮತ್ತು ಭಕ್ತಿಯನ್ನು ಅವರು ಪೇಮದ ಆದಿ ಮತ್ತು ಅಂತ್ಯವಾಗಿ ಕಾಣುತ್ತಾರೆ. ಅವರ ಬಡವರ ಬಸವ ಕವನ ಇದಕ್ಕೆ ಸಾಕ್ಷಿ.

ಬಸವ ಬಡವರ ಬಸವ ಕರುಣಾಸಾಗರ ಬಸವ
ಅಲ್ಲಮನ ಪ್ರಾಣ ಬಸವ ಅಕ್ಕನ ಮಾನ ಬಸವ
ಸರ್ವರೊಳು ಗುರುಸಂಗನ ಕಂಡ ಕಲ್ಯಾಣ ಬಸವ
ಬಸವ ನಿನ್ನಯ ವಾಸ ಕೂಡಲಸಂಗನ ಧ್ಯಾಸ
ಸತ್ಯ ಸಾರುವ ಧೀಶ ನಿನ್ನ ನೆನೆಯುವ ಧ್ಯಾಸ
ಮರೆತು ಬಾಳೆನಯ್ಯಾ ಬಸವ ನನ್ನುಸಿರು ನನ್ನ ಬಸವ
ಭೇದ ಅಳಿದವನೆ ಬಸವ ಪ್ರೀತಿ ತಿಳಿಸಿದವನೆ ಬಸವ
ಜಾತಿ ಧರ್ಮಕೆ ಅತೀತನಾಗಿ ಮಾನವತೆಯ ಪ್ರಾಣ ಬಸವ
ಎಲ್ಲಾ ನನ್ನವರೆಂದು ಭೇದವಿಲ್ಲದ ಬಂಧು
ಎಲ್ಲಾ ಮಾನವರೊಂದು ಎಲ್ಲರೂ ಶರಣರೆಂದು
ಎಲ್ಲರೊಳು ತಾ ಕಿರಿಯನೆಂದು ತನ್ನ ತಾನು ತಿಳಿದ ಬಸವ
ಬಿಜ್ಜಳನಿಗೆ ಬಸವನೇ ಮಂತ್ರ; ಹಾರವನ ಸ್ಥಾನ ಅತಂತ್ರ
ಕೊಂಡಿ ಮಂಚಣ್ಣನ ಕುತಂತ್ರ ಮಂತ್ರಿಪದವಿ ಬಿಟ್ಟುನಿಂತ
ದೀನರಾ ಮಾನ ಬಸವ ಬಡವರ ಪ್ರಾಣ ಬಸವ
ಬಡಜಂಗಮರು ಶಿವನೆಂದು ಸಾರಿದ ಧೀರಬಸವ
ಸಾಲಗುಂದಿಪುರದ ಜನರ ಪ್ರೀತಿಪ್ರಾಣವೆ ಬಸವ
ಗುರುಪೀರಾ ಖಾದರಿಯ ಜೀವದಾಜೀವ ಬಸವ

19ನೇ ಶತಮಾನದಲ್ಲಿ ಬಸವಣ್ಣ ಎಂದರೆ ಎತ್ತು ಎಂದು ತಿಳಿದಂಥ ವಾತಾವರಣವಿತ್ತು. ಕನ್ನಡಿಗರಲ್ಲಿ ವಚನಪ್ರಜ್ಞೆಯೇ ಮೂಡಿರಲಿಲ್ಲ. ಇಂಥ ಸ್ಥಿತಿಯಲ್ಲಿ ಖಾದರಿಪೀರಾ ಅವರು ಬಸವಣ್ಣನವರ ಬಗ್ಗೆ ಸೂಕ್ಷ್ಮ ವಿವರಣೆಗಳೊಂದಿಗಿನ ಒಳನೋಟವನ್ನು ಹೊಂದಿದ ಪದರಚನೆ ಮಾಡಿದ್ದು ಇಂದಿನ ವಚನತಜ್ಞರನ್ನು ಕೂಡ ಬೆರಗುಗೊಳಿಸುವಂಥದ್ದಾಗಿದೆ.

ಬಸವಣ್ಣ ಹುಟ್ಟಿದ ವಿಜಾಪುರದಲ್ಲೇ ಹುಟ್ಟಿದ ಪ್ರಖ್ಯಾತ ಸೂಫಿ ಸಂತರಾಗಿದ್ದ ಹಾಗೂ ತಮ್ಮ ಪತ್ನಿ ಸಯ್ಯದಾ ಬೀಬಿ ಜೈನಬ್ರವರ ಪೂರ್ವಜರಾಗಿದ್ದ ಖಾಜಾ ಅಮೀನುದ್ದೀನ ಆಲಾ (1597-1675) ಅವರ ಬಗ್ಗೆ ಖಾದರಿಪೀರಾ ಅವರು ಬರೆದದ್ದು ಶರಣ ಮತ್ತು ಸೂಫಿ ಬದುಕಿನಲ್ಲಿ ಯಾವುದೇ ಭೇದವಿಲ್ಲ ಎಂಬುದನ್ನು ಸೂಚಿಸುತ್ತದೆ.

ಸದ್ಗುರು ಅಮೀನ್ ಆಲಾ ಭೇದ ತೊರೆದು ನಿನೇ ಮೌಲಾ
ಕರುಣಿಸಿ ನನ್ನ ಮ್ಯಾಲೆ ನೀನಾದಿ ನನ್ನ ಶೀಲಾ
ಅಜ್ಞಾನಿಗಳಿಗೆ ನೀನು ಜ್ಞಾನದಾನ ಮಾಡುವಾತ
ಧರ್ಮಜಾತಿಭೇದ ಅತೀತಾ ಖ್ವಾಜಾ ಅಮೀನ್ ಆಲಾ
ದೊರೆಗಳಿಗೆ ದೊರೆಯಾದಾತ ಬಡವರಿಗೆ ನೀ ವಿಧಾತ
ಸರ್ವರಲಿ ನೀನೆ ಪ್ರಾಣ ಆಖಾ ಅಮೀನ್ ಆಲಾ
ಪ್ರೀತಿ ಒಂದೇ ನಿನ್ನ ಮಾತ; ಸಿದ್ಧ ನಾಥರಿಗೆ ನೀ ನಾಥ
ಭೇದವಿಲ್ಲೊ ನಿನಗೆ ತಾತಾ ಮೌಲಾ ಅಮೀನ್ ಆಲಾ
ಶೂನ್ಯ ಮರ್ಮ ತಿಳಿಸಿದಾತ ಭಯ ಬಯಲು ಮಾಡುವಾತ
ಧ್ಯಾನ ಜಪತಪಿಲ್ಲದಂತೆ ಮಮಾ ಮೋಕ್ಷ ಅಮೀನ್ ಆಲಾ

ಶಿರಹಟ್ಟಿ ಫಕೀರಸ್ವಾಮಿಗಳು ಖಾಜಾ ಅಮೀನುದ್ದೀನ ಅವರ ಶಿಷ್ಯರಾಗಿದ್ದರು. ಫಕೀರಸ್ವಾಮಿಗಳು ಹುಟ್ಟಿದಾಗ ಖಾಜಾ ಅಮೀ ನರು ಇಟ್ಟ ಹೆಸರೇ ಭಾವೈಕ್ಯದ ಪ್ರತೀಕವಾದ ಫಕೀರಸ್ವಾಮಿ. ಈ ಹೆಸರಿನಲ್ಲಿ ಸೂಫಿ ಮತ್ತು ಶರಣ ತತ್ತ್ವದ ಸಂಗಮವಾಗಿದೆ. ಇದು ಅಮೀನರ ಕನಸಾಗಿತ್ತು.

ತಮ್ಮ ಪೂರ್ವಜ ಹಜರತ್ ಮಹಬೂಬೇ ಸುಬಹಾನಿ ಪೀರಾನೇ ಪೀರ ದಸ್ತಗೀರ ಅಬ್ದುಲ್ ಖಾದಿರ್ ಜೀಲಾನಿ, ಬಗದಾದಿ ಅವರ ತತ್ತ್ವಗಳ ಜೊತೆ ಬಸವಣ್ಣ ಮತ್ತು ಖಾಜಾ ಅಮೀನರ ತತ್ತ್ವಗಳನ್ನು ಒಂದಾಗಿಸಿ ಮಾನವ ಏಕತೆಯ ತತ್ತ್ವಪದಗಳನ್ನು ಬರೆದ ಖಾದರಿಪೀರಾ ಅವರು ಈ ಧರ್ಮ ವ್ಯಾಕೊ ಈ ಜಾತಿಯಾಕೊ ಎಂಬ ಪದ್ಯದಲ್ಲಿ ಮೊದಲು ಮಾನವನಾಗು ಎಂಬುದನ್ನು ಒತ್ತಿಹೇಳಿದ್ದಾರೆ.

ಈ ಧರ್ಮವ್ಯಾಕೊ ಈ ಜಾತಿಯಾಕೊ
ಮೊದಲಿಗೆ ಮಾನವ ನೀನಾಗು ಸಾಕು
ಕರುಣೆಯೇ ನಿಜಧರ್ಮ ತಿಳಿದರೆ ಸಾಕು; ಪ್ರೀತಿಯೇ ನಿಜಪೂಜೆ ಈ ಭೇದವ್ಯಾಕೊ
ಸ್ನೇಹದಿ ನೀ ಸನಹ ಬರಲಿಲ್ಲವ್ಯಾಕೊ ಮೊದಲಿಗೆ ಮಾನವ ನೀನಾಗು ಸಾಕು
ತಿಳಿಯದೆ ಏನೇನು ನೀ ಮಾಡಿ ಕೆಟ್ಟಿ; ದೇವರ ಹೆಸರೇಳಿ ನೀನೆ ತಿಂದಿಟ್ಟಿ
ನಿರಾಕಾರ ನಿರಾಹಾರ; ಇಲ್ಲದವನಗ್ಯಾಕೊ, ಕಲ್ಲಿಗೆ ಎಡೆಮಾಡಿ ಕೆಡಿಸುವುದ್ಯಾಕೊ
ಮಾನವರೆಲ್ಲರೊಂದೆ ಎಂದ್ಹೇಳುವುದ್ಯಾಕೊ; ನಾಲ್ಕು ವರ್ಣದ ಭೇದ ಬಿಡುನೀ ಸಾಕು
ಮಾನವನೇ ನಿಜಧರ್ಮ ತಿಳಿದರೆ ಸಾಕೊ; ಸತ್ಯವೇ ಶಿವರೂಪ ನೀನಾಗಬೇಕು
ಹಸಿದ ಹೊಟ್ಟಿಗೆ ಹಿಟ್ಟು ಕೊಡಲಿಲ್ಲವ್ಯಾಕೊ ಕಲ್ಲುದೇವರಿಗೆಂದು ಯಡೆ ಮಾಡುವದ್ಯಾಕೊ
ಬೇಡುವವನಿಗೆ ನೀಡು ಕೆಡಸುವುದ್ಯಾಕೊ; ಉಡುವ ತಿನ್ನುವ ವಸ್ತು ನೀ ಸುಡುವುದ್ಯಾಕೊ
ಈ ಗೊಳ್ಳು ಧರ್ಮ ಈ ಜೊಳ್ಳು ಜಾತಿ: ಪ್ರೀತಿ ತಿಳಿಯದೆ ನೀನು ಹೀಂಗ್ಯಾಕ ಸಾಯ್ತಿ
ಈ ಕ್ರೋಧವ್ಯಾಕೊ ಈ ಭೇದ ಸಾಕೊ; ಮೊದಲಿಗೆ ಮಾನವ ನೀನಾಗು ಸಾಕು
ಕೈಯೊಳಗಿನ ಗಂಟೆ ನೋಡಲಿಲ್ಲವ್ಯಾಕೊ; ಆರತಿ ಬೆಳಕಲ್ಲಿ ಶಿವ ಕಾಣಲಿಲ್ಯಾಕೊ
ನೀ ದೇವನಾಗಿರುವಿ ತಿಳಿದರೆ ಸಾಕೊ; ಕಣ್ಣು ಮುಚ್ಚಿ ಬೆಕ್ಕಿನಂತೆ ಹಾಲು ಕುಡಿಯುವುದ್ಯಾಕೊ
ಪುರ ಸಾಲಗುಂದದೊಳಗೆ ಕೂಡಲಿಲ್ಲವ್ಯಾಕೊ; ತಿಳಿದು ಮತ್ತಿದರೊಳಗೆ ಬೆರಿಲಿಲ್ಲವ್ಯಾಕೊ
ಗುರುಪೀರ ಖಾದರಿಯ ದಯವೊಂದೇ ಸಾಕೊ; ಪ್ರೀತಿಯೆ ನಿಜಧರ್ಮ ತಿಳಿದೆಡುವೂದ್ಯಾಕೊ

ಮಾನವೀಯತೆ ಇಲ್ಲದ್ದು ಏನೇ ಇದ್ದರೂ ಅರ್ಥಹೀನ ಎಂಬ ಅವರ ದೃಢನಿಲುವು ಸದಾಕಾಲ ಮಾನವರನ್ನು ಎಚ್ಚರ ಗೊಳಿಸುವಂಥದ್ದಾಗಿದೆ. ಮಾನವೀಯತೆಯ ಅಭಾವದಿಂದಾ ಗಿಯೇ ನಮಗೆ ಮಂದಿರ ಮಸೀದಿ ವಿವಾದಗಳು ದೊಡ್ಡದಾ ಗುತ್ತವೆ. ಅಂದಿನ ದಿನಗಳಲ್ಲೇ ಇಂಥ ಸಮಸ್ಯೆಗಳು ಕುರಿತು ಗುಡಿಗುಂಡಾರದ ಜಗಳವ್ಯಾಕೊ ಯಪ್ಪ; ಮಾನವಗೆ ಮಾನ ವನು ತಾ ತಿಳಿಯಬೇಕು.

ಎಲ್ಲರೊಳಗೆ ಜೀವಶಿವನಿರುವಾಗ ಗುಡಿಕಟ್ಟಿ ಅವನಿಗೆ ಬಂಧ ನವ್ಯಾಕೊ ಎಂದು ಬುದ್ದಿ ಹೇಳಿದ್ದಾರೆ. ಈ ಬುದ್ಧಿ ನಮಗೆಲ್ಲ ಬಂದಿದ್ದರೆ ರಾಮಜನ್ಮಭೂಮಿ ವಿವಾದದಲ್ಲಿ ಸಹಸ್ರಾರು ಜನರು ಪ್ರಾಣ ಕಳೆದುಕೊಂಡು ಕೋಟ್ಯಂತರ ರೂಪಾಯಿ ಆಸ್ತಿಪಾಸ್ತಿ ಹಾನಿಯಾಗುವ ಪ್ರಸಂಗ ಬರುತ್ತಿರಲಿಲ್ಲ.

ಇವನ ಎಲ್ಲೆಲ್ಲಿ ಹುಡುಕಿದೆನಲ್ಲ ಅವನು ನನ್ನೊಳಗೆ ತಾನಿದ್ದನಲ್ಲ
ಸುಮ್ಮಸುಮ್ಮನೆ ತಿರುಗಿ ಸತ್ತೆನಲ್ಲ; ನನ್ನ ಒಡೆಯನ ನಾ ತಿಳಿಯ ಲಿಲ್ಲ
ಯವ್ವ ನನ್ನ ಗಂಡನ ನಾ ತಿಳಿಯಲಿಲ್ಲ
ಕಾಬಾ ಕಾಶಿಯೊಳಗೆ ಕಾಣಲಿಲ್ಲ; ವ್ಯರ್ಥ ಕಲ್ಲುಪೂಜೆ ಮಾಡಿ ಸತ್ತೆನಲ್ಲ
ಭೇದ ನಾ ಮಾಡಿ ಮೋಸ ಹೋದೆನಲ್ಲ; ನನ್ನ ಪ್ರಿಯಕರನ ನಾ ತಿಳಿಯಲಿಲ್ಲ
ದೇವರನ್ನು ಮಂದಿರ ಮಸೀದಿಗಳಲ್ಲಿ ಹುಡಕದೆ ನಮ್ಮೊಳಗೆ ಹುಡುಕಿದ್ದರೆ ಈ ಪರಿಸ್ಥಿತಿ ಬಂದೊದಗುತ್ತಿರಲಿಲ್ಲ.
ಈ ಸೃಷ್ಟಿಗೆ ನೀನೊಡೆಯನಂತ ಸೃಷ್ಟಿಕರ್ತನ ಪ್ರತಿರೂಪವಂತ
ಕಲ್ಲುದೇವರು ಹೆಂಗ ಹುಟ್ಯಾರಂತ ಇವರಪ್ಪ ಅಮ್ಮ ಯಾರಂತ
ಈ ದೇವರಿಗೆ ನೀ ದೇವರಂತ ನಿನ್ನ ಬಿಟ್ಟು ದೇವರಿಲ್ಲಂತ ಭಗವಂತ

ಎಂಬ ತೀಕ್ಷ್ಣ ಮಾತುಗಳಿಂದ ಖಾದರಿಪೀರಾ ಅವರು ನಮ್ಮನ್ನು ಜಾಗೃತಗೊಳಿಸುತ್ತಾರೆ. ಕಣ್ಣಿಗೆ ಕಾಣುವ ಎಲ್ಲ ದೇವರು ಗಳನ್ನು ಮಾನವನೇ ಸೃಷ್ಟಿ ಮಾಡಿದ್ದಾನೆ. ಅವು ಕಾಲದ ತುಳಿತಕ್ಕೆ ಒಳಗಾಗುವ ದೇವರುಗಳು! ಆದರೆ ಆತ ತನ್ನೊಳಗಿನ ಅಗಮ್ಯ ಅಗೋಚರ ಮತ್ತು ಅಪ್ರತಿಮನಾದ ದೇವರನ್ನು ಕಾಣುವ ಪ್ರಯತ್ನವನ್ನೇ ಮಾಡುತ್ತಿಲ್ಲ. ಹೀಗಾಗಿ ಜಾತಿ ಧರ್ಮಗಳ ಹೆಸರಿನಲ್ಲಿ ಭೇದಭಾವ ಮಾಡುವುದರಲ್ಲೇ ಮಾನವ ಆಯು ಷ್ಯವನ್ನು ಕಳೆದುಕೊಳ್ಳುತ್ತಾನೆ.

ಅಲ್ಲಾಕೇ ಬಂದೇ ತೊಗಲೆಲ್ಲ ಒಂದೆ; ಯೋಚಿಸು ನೀನ್ಯಾರು ಎಲ್ಲಿಂದ ಬಂದೆ. ನಿನ್ನ ನೀನು ತಿಳಿದುಕೊಂಡು ನಡಿಯಬೇಕು ಮುಂದೆ ಎಂದು ಅವರು ಮುಸ್ಲಿಮರಿಗೆ ಹೇಳಿದರೆ, ಹಿಂದು ಗಳಿಗೆ ಹೀಗೆ ಹೇಳುತ್ತಾರೆ:

ಬ್ರಾಹ್ಮಣ ವೈಶ್ಯ ಕ್ಷತ್ರಿಯ ಶೂದ್ರ ನಾಲ್ಕರಿಂದ ವೇದ ಭದ್ರ
ಶೂದ್ರ ಸಣ್ಣ ವಸ್ತು ಎಂದು ತಿಳಿಯಬ್ಯಾಡೊ ನೀ ದರಿದ್ರ
ತಿನ್ನುವ ಅನ್ನ ಶೂದ್ರ, ಕುಡಿಯುವ ನೀರು ಶೂದ್ರ
ತಿಳಿದು ಹೇಳಿದವನು ಇದ್ರ ಕೇಳಿದವನು ಬಲು ಭದ್ರ
ಹನಿಯಾಗಿ ಇರು ನೀ ಇದ್ರ ಸಾಲಗುಂದಿ ಬಲು ಭದ್ರ
ಪಿಂಡ ಅಂಡದೊಳಗೆ ಸೇರಿ ಒಳಗಿನಿಂದ ಬಂದ ಶೂದ್ರ

ಈ ಎಲ್ಲ ತಾರತಮ್ಯಗಳು ದೇಹದಲ್ಲಿ ಜೀವವಿರುವವರೆಗೆ ಮಾತ್ರ. ಆ ಜೀವವೇ ಪರಮಾತ್ಮ. ಆ ಪರಮಾತ್ಮ ನಮ್ಮಿಂದ ದೂರ ಹೋದ ಮೇಲೆ ನಾವು ಹೆಣವಾಗುವೆವು. ಅವ ನಿನ್ನಲ್ಲಿರುವತನಕ ಆನಂದ ಸಿಗುವುದು ನಿನಗ. ಅವ ಬಿಟ್ಟು ಹೋದ ಮ್ಯಾಗ ಹೆಣವೆಂದು ಕರಿವರು ನಿನಗ ಎಂದು ಖಾದರಿಪೀರಾ ಅವರು ಮಾನವದೇಹದ ನಶ್ವರತೆಯ ಬಗ್ಗೆ ಹೇಳುತ್ತಾರೆ. ನಮ್ಮ ಎಲ್ಲ ಮೇಲುಕೀಳುಗಳು ದೇಹಕ್ಕೆ ಅಂಟಿ ಕೊಂಡು ಮನಸ್ಸಿಗೆ ಕಿರಿಕಿರಿ ಮಾಡುತ್ತವೆ. ದೇಹವು ಐಹಿಕ ಸುಖವನ್ನು ಬಯಸುತ್ತದೆ. ಐಹಿಕ ಸುಖ ನೀಡುವ ವಸ್ತು ಮೋಹದಿಂದಾಗಿ ವರ್ಗಗಳು ಮತ್ತು ವರ್ಣಗಳು ಸೃಷ್ಟಿ ಯಾಗಿವೆ. ಮಾನವ ಐಹಿಕ ಸುಖವನ್ನು ಮೀರಿ ಒಳನೋಟದ ಅರಿವನ್ನು ಪಡೆದು ಜೀವಪರವಾದಾಗ ಸಹಜವಾಗಿಯೇ ಸರ್ವರಿಗೂ ಸಮಾನವಾದ ಬದುಕನ್ನು ಬಯಸುತ್ತಾನೆ. ಹೀಗೆ ಮಾನವರು ಸರ್ವಸಮತ್ವದಿಂದ ಬದುಕಬೇಕೆನ್ನುವುದೇ ಖಾದರಿಪೀರಾ ಅವರ ಆಶಯವಾಗಿದೆ.

ಇರಬೇಕವ್ವಾ ಇರಬೇಕು ಗುರು ಎಲ್ಲರಿಗಿರಬೇಕು. ಜಾತಿಧರ್ಮಗಳಿಗತೀತನಾದ ಸದ್ಗುರು ನಮಗೆ
ಇರಬೇಕು ಇರಬೇಕು ಗುರು ಇರಬೇಕು
ಎಂದು ಅವರು ಇಂಥ ಸದುದ್ದೇಶದಿಂದಲೇ ಹೇಳಿದ್ದಾರೆ.
ನಮ್ಮ ದೇಶಕ್ಕೆ ಮತ್ತು ನಮ್ಮ ಜನಗಳಿಗೆಲ್ಲ ಸೌಖ್ಯವಾಗಿರುವಂಥ ಸುಬುದ್ಧಿ ಕೊಡು ಅಲ್ಲಾ; ಈಶ್ವರನು ನೀನಾಗಿ ರಕ್ಷಿಸು ನಮಗೆಲ್ಲಾ

ಎಂದು ಅವರು ಪ್ರಾಥರ್ಿಸಿದ್ದಾರೆ. ಅವರ ದೇಶಪ್ರೇಮ ಅನುಕ ರಣೀಯವಾಗಿದೆ. ಅವರು ಬದುಕಿದ್ದ ಕಾಲದಲ್ಲಿ ಭಾರತ ಎಂಬುದು ಅನೇಕ ದೇಶಗಳ ದೇಶವಾಗಿತ್ತು. ಇಂದಿನ ಭಾರತ ದೇಶದ ಕಲ್ಪನೆ ಅಂದು ಇರಲಿಲ್ಲ. ಆದರೆ ಖಾದರಿಪೀರಾ ಅವರು ಭವ್ಯಭಾರತದ ಕನಸುಕಂಡಿದ್ದರು.

ನಮಿಸುವೆ ಭಾರತಿ ತಾಯಿಗೆ ಸಿರಬಾಗಿ ತಲೆಬಾಗಿ ಮಮತೆಯ ಮೂರುತಿ ನೀನೆಂದ
ಪುಣ್ಯ ಬೇಕು ಈ ಭೂಮಿಯಲು ಹುಟ್ಟಲು ಭಾಗ್ಯವಂತರು ನಾವೆಂದ

ಸೂಫಿಸಂತನ ಈ ದೇಶಪ್ರೇಮ ನಮಗೆಲ್ಲ ಮಾರ್ಗದಶರ್ಿ ಯಾಗಬೇಕಲ್ಲವೆ? ಅಷ್ಟೇ ಅಲ್ಲ ಮುಹಮ್ಮದ್ ಪೈಗಂಬರರು ಕೂಡ ಭಾರತದೇಶವನ್ನು ಪ್ರೀತಿಸಿದ್ದರು ಎಂಬುದನ್ನು ನಮ್ಮ ನೆನಪಿಗೆ ತರುತ್ತಾರೆ.

ಮಹ್ಮದ್ ಶರಣರು ಪ್ರೀತಿ ಮಾಡುವ ದಿಕ್ಕದು ಭಾರತ ದೇಶೆಂದ
ಅರಬ್ ದೇಶದಲ್ಲಿ ಹುಟ್ಟಿದೆ ಮನಸಿಲ್ಲಾ ನನ್ನ ಮನಸು ಭಾರತವೆಂದ
ಅಲೆನಬಿ ಅನ್ಸಾರಿಗಳೆಲ್ಲ ನೆಲೆಸಿದ ಈ ದೇಶ ಬಲು ಛಂದ

ಮುಹಮ್ಮದ್ ಪೈಗಂಬರರ ವಚನಗಳಾದ ಹದೀಸ್ನಲ್ಲಿ ಹಿಂದ್ (ಭಾರತ) ದೇಶದ ಬಗ್ಗೆ ಪ್ರಸ್ತಾಪವಿದೆ. ಹಿಂದ್ನಿಂದ ತಂಪುಗಾಳಿ ಬೀಸುತ್ತಿದೆ. ನಾನು ಹಿಂದ್ನಲ್ಲಿ ಇಲ್ಲ; ಹಿಂದ್ ನನ್ನೊಳಗೆ ಇದೆ ಎಂದು ಮುಂತಾಗಿ ಪೈಗಂಬರರು ಹೇಳಿದ ವಿಚಾರಗಳು ಹದೀಸ್ನಲ್ಲಿ ಇವೆ. ಈ ತಂಪುಗಾಳಿ ಶಾಂತಿ ತತ್ತ್ವದ ಪ್ರತೀಕವಾಗಿದೆ. ಉಪನಿಷತ್ತಿನ ಶಾಂತಿಮಂತ್ರಗಳು ಮತ್ತು ನಿಗರ್ುಣ ನಿರಾಕಾರ ಬ್ರಹ್ಮತತ್ತ್ವ 1400 ವರ್ಷಗಳಷ್ಟು ಹಿಂದೆಯೆ, ಅಂದರೆ ಪೈಗಂಬರರ ಜೀವಿತಾವಧಿಯಲ್ಲೇ ಅರಬ್ ದೇಶವನ್ನು ತಲುಪಿದ ಸಾಧ್ಯತೆಗಳಿವೆ. ಇಂಥ ಮಹತ್ವದ ಚಿಂತನೆಗಳನ್ನು ಖಾದರಿಪೀರಾ ಅವರು ನಮ್ಮ ಮುಂದೆ ಇಟ್ಟು ವಿಶ್ವಬಂಧುತ್ವದಲ್ಲಿ ಭಾರತದೇಶದ ಮಹತ್ವವನ್ನು 19ನೇ ಶತಮಾನದಲ್ಲೇ ಸಾರಿದ್ದಾರೆ.

ಸುಳ್ಳುದೇವರುಗಳೆಲ್ಲ ನಾಶವಾಗಿ ಒಬ್ಬನೇ ದೇವರು, ಒಂದೇ ವಿಶ್ವ, ಒಂದೇ ಮಾನವ ಕುಲ ಎಂದು ಮಾನವರು ನಂಬುವುದರ ಮೂಲಕ ಎಲ್ಲ ಅಡ್ಡಗೋಡೆಗಳನ್ನು ಕೆಡವುತ್ತ ಒಂದಾಗುವ ಕಾಲ ಬರುತ್ತದೆ ಎಂಬುದರಲ್ಲಿ ಅವರಿಗೆ ನಂಬಿಕೆ ಇದೆ. ಸಾಲಗುಂದಾದಂಥ ಹಳ್ಳಿಯ ಮೂಲೆಯೊಂದರಲ್ಲಿ ಕುಳಿತಿದ್ದ ಅವರು, ಕೈಗಾರಿಕೀಕರಣದಿಂದಾಗಿ ಜಗತ್ತಿನ ರೂಪು ಬದಲಾಗುತ್ತಿರುವುದನ್ನು ಮಾಧ್ಯಮದ ಸಹಾಯವಿಲ್ಲದೆ ಅಥರ್ೈ ಸಿಕೊಂಡಿದ್ದಾರೆ. ಟಿ.ವಿ. ಜನಕ ಲೋಗಿ ಬಿಯಾಡರ್್ ಹುಟ್ಟುವ ಮೊದಲೇ ಟಿ.ವಿ. ಬರುವ ಬಗ್ಗೆ ಅವರು ನಿಖರವಾಗಿ ತಿಳಿಸಿ ದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಸೃಷ್ಟಿ ಯಾಗುತ್ತಿರುವ ಹೊಸ ಕಾಲದ ಬಗ್ಗೆ ಮುನ್ಸೂಚನೆ ನಿಡಿದ್ದಾರೆ. ದೇವರು ಧರ್ಮಗಳ ಕುರಿತ ಆಚಾರ ವಿಚಾರಗಳಲ್ಲಿ, ಜಾತಿ ಮತ್ತು ವರ್ಗಗಳಲ್ಲಿ, ಆಹಾರ ಧಾನ್ಯಗಳ ಉತ್ಪಾದನಾ ಮತ್ತು ಸಂಸ್ಕರಣಾ ವ್ಯವಸ್ಥೆಯಲ್ಲಿ, ಹೆಣ್ಣು ಗಂಡಿನ ಸಂಬಂಧಗಳಲ್ಲಿ ಅಗಾಧ ಬದಲಾವಣೆಗಳಾಗುವ ಬಗ್ಗೆ ಅವರು ತರ್ಕಬದ್ಧವಾದ ಭವಿಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲ ಬಲುಬೇಗ ಬರುತೈತೆ ಎಂದು ಬರೆದ ತತ್ತ್ವಪದವಿದು.

ಕಾಲ ಬಲುಬೇಗ ಬರತೈತೆ ಈ ದೇವರೆಲ್ಲ ನಾಶವಾಗುವ ಕಾಲ
ಬಲುಬೇಗ ಬರತೈತೆ
ಗೊತ್ತಿಲ್ಲದೆ ಗಳಿಸಿದ ಆಸ್ತಿ ಬಡವರ ಪಾಲಾಗುವ ಕಾಲ
ಜಾತಿಭೇದಗಳು ನಾಶವಾಗಲು ದ್ವೇಷವಿಲ್ಲದೆ ಬದುಕುವ ಕಾಲ
ಮಠದಲ್ಲಿಯ ಘಟದ ದೇವರಿಗೆ ಹಟದಿಂದ ಕಡಿಯುವ ಕಾಲ
ಹೊಗಳುತಿದ್ದ ನಾಯಿಗಳೆಲ್ಲ ಹಡಪತ್ತಿ ಅವು ಸಾಯುವ ಕಾಲ
ಹೆಚ್ಚಿನ ಬೆಳೆಯನು ತಂತ್ರಜ್ಞಾನದಿ ಯಂತ್ರದಿಂದ ಬೆಳೆಯುವ ಕಾಲ
ಧಾನ್ಯ ರಸವನು ಮಾನ್ಯ ಮಾಡಿಸಿ ಗುಳಿಗೆ ಮಾಡಿ ನುಂಗಿ ಬದುಕುವ ಕಾಲ
ಗಂಡು ಹೆಣ್ಣುಗಳ ಭೇದ ಅಳಿಯುವುದು; ಹೆಣ್ಣು ತನ್ನ ತಾ
ತಿಳಿದು ಬಾಳುವುದು; ಕೃತಕ ಗರ್ಭಧಾರಣದಿಂದ ಮಕ್ಕಳು ಜನ್ಮಪಡೆಯುವ ಕಾಲ
ದೇವರಿಂದ ಆಗದ ಕೆಲಸಕೆ ಮಾನವ ಸಾಧಿಸಿ ತೋರುವ ಕಾಲ
ಒಂದೆ ಕ್ಷಣದಿ ನಿಜರ್ೀವ ಲೋಹದಿ ಅಲ್ಲೆ ವಸ್ತು ಇಲ್ಲಿ ಕಾಣುವ ಕಾಲ
ಬಡವರು ಶ್ರೀಮಂತರಾಗುವರು, ಶ್ರೀಮಂತರು ಬಡವರಾಗುವರು
ಕಷ್ಟ ಪಟ್ಟವರು ಸುಖಭೋಗಿಸುವ ಸತ್ಯವೆಂಬ ನಿತ್ಯದ ಕಾಲ
ಉತ್ತರದಿಂ ನಾಶವಾಗುವರು ದಕ್ಷಿಣದಿಂ ರಾಜ್ಯವಾಳುವರು
ಚಪಲ ಮೋಸ ವಂಚನೆಯಲ್ಲ ಹಾಳಾಗಿ ಹಲ್ ಕಿಸಿಯುವ ಕಾಲ
ಸತ್ಯ ಮಿಥ್ಯಕೆ ಜಗಳಾಗುವುದು ಮಿಥ್ಯ ನಿತ್ಯ
ನಾಶ ಆಗುವುದು ಸತ್ಯಗುರು ಖಾದರಿ ಪೀರನು
ಹೇಳಿದ ಸತ್ಯ ನೋಡುವ ಕಾಲ

ಇಂಥ ಬದಲಾವಣೆಗಳೊಳಗಿನ ವೈರುಧ್ಯಗಳನ್ನೂ ಅವರು ಗುರುತಿಸಿದ್ದಾರೆ. 150 ವರ್ಷಗಳಿಗೂ ಹಿಂದೆಯೆ ಪ್ರಜಾಪ್ರಭು ತ್ವದಲ್ಲಿನ ಸಮಸ್ಯೆಗಳನ್ನು ಗುರುತಿಸಿದ್ದಾರೆ.

ಪ್ರಜೆಗಳೆಲ್ಲ ಪ್ರಭುಗಳು ಎಂದು ಹೇಳುವರು ಜನರಲ್ಲಿ
ಸುಳ್ಳು ಮೋಸ ವಂಚನೆ ಮಾಡಿ ಪ್ರಭುಗಳು ಆಗುವರು ಇಲ್ಲಿ
ಸತ್ಯವೆಂಬಾ ಬಡತನದಲ್ಲಿ ಸುಳ್ಳಿಗೆ ಶ್ರೀಮಂತಿಕೆಯಿಲ್ಲಿ
ನೂರಾರು ಮನೆಗಳು ಮುರಿದು ಧರ್ಮಛತ್ರ ಕಟ್ಟುವರಲ್ಲಿ

ಎಂದು ಅವರು ಹೇಳುವಲ್ಲಿ ಇಂದಿನ ಭ್ರಷ್ಟಸಮಾಜದ ಬೇರುಗಳಿವೆ. ಎಷ್ಟೊಂದು ತರ್ಕಬದ್ಧ ಮುಂದಾಲೋಚನೆಯ ವಿಶಿಷ್ಟ ಸೂಫಿ ಈ ಖಾದರಿಪೀರಾ ಎಂಬುದು ಅವರ ತತ್ತ್ವಪದಗಳ ಓದುಗರಿಗೆ ಅನಿಸದೆ ಇರದು.

ಉಳಿಯದೊ ಯಪ್ಪಾ ಈ ದೇಶ ಹಿಂಗಾದರೆ ದಿವಸಾ
ಜಾತಿಯ ಜಗಳವೆದ್ದು ಬಿದ್ದಾರೊ ತಾವೆ ಎದ್ದು ದಿವಸಾ
ನ್ಯಾಯಾದ ಮೂಲ ಈ ಖೋಡಿ ಜಗಳ

ಹೀಗೆ ಅವರು ಜನಸಮುದಾಯಗಳ ಮಧ್ಯದ ವೈರು ಧ್ಯಗಳು ದೇಶದ ಏಕತೆಗೆ ಹೇಗೆ ಕಂಟಕವಾಗುತ್ತವೆ ಎಂಬು ದನ್ನು ತಿಳಿಸಿಹೇಳಿದ್ದಾರೆ. ಜಾತಿ ಧರ್ಮಗಳ ಮಧ್ಯದ ವೈರುಧ್ಯ ಹೆಚ್ಚಾದಂತೆಲ್ಲ ಪರಿಸ್ಥಿತಿ ಉಲ್ಬಣಗೊಂಡು ಇಂದು ದೇಶ ಭಯೋತ್ಪಾದಕರ ಮತ್ತು ಕೋಮುಗಲಭೆಕೋರರ ಸ್ಥಾನವಾಗಿದೆ. ಈ ದೇಶ ದುದರ್ಿನಗಳನ್ನು ಕಾಣಬಾರದು ಎಂಬುದು ಅವರ ಕಳಕಳಿಯಾಗಿತ್ತು. ಸೌಹಾರ್ದ ಬದುಕಿ ನಿಂದ ಮಾತ್ರ ಈ ದುರಂತವನ್ನು ತಪ್ಪಿಸಲು ಸಾಧ್ಯ ಎಂಬುದು ತಮ್ಮ ಬಹುಪಾಲು ತತ್ತ್ವಪದಗಳಲ್ಲಿ ಸೂಚಿಸಿದ್ದಾರೆ.

ಎಲ್ಲಾ ನೀನೇ ಮಾಡಿ ಅವನ ಹೆಸರು ಹೇಳಬೇಕು ಪುಣ್ಯವಂತನವನು
ಅವನೇ ನಾನೆಂದು ಹೇಳಿದ ಮನಸೂರಗೆ ಗಲ್ಲಿಗೇರಿಸಿಲ್ಲೇನು?
ಬ್ಯಾಡೆಂದು ಹೇಳಲಿಲ್ಲ ಕಾರಣೇನು?

ಸೂಫಿಸಂತ ಮನಸೂರ್ ನಾನೇ ಸತ್ಯ ಎಂದು ಹೇಳಿದ್ದಕ್ಕೆ ದೈವನಿಂದನೆಯ ಆರೋಪ ಹೊರಿಸಿ ಗಲ್ಲಿಗೇರಿಸಲಾಯಿತು. ಸಮಾಜ ಅದನ್ನು ವಿರೋಧಿಸಲಿಲ್ಲ. ಮನುಷ್ಯರು ತಮ್ಮೊಳಗಿನ ಶಕ್ತಿಸಾಮಥ್ರ್ಯದಿಂದ ಎಲ್ಲವನೂ ಸಾಧಿಸುತ್ತಾರೆ. ಆದರೆ ಅದೆಲ್ಲದಕ್ಕೆ ತಮ್ಮೊಳಗಿನ ದೇವರೇ ಕಾರಣ ಎಂದು ತಿಳಿಯದೆ ಇಲ್ಲದ ದೇವರ ಹೆಸರು ಹೇಳುತ್ತಾರೆ ಎಂದು ಖಾದರಿಪೀರಾ ಬೇಸರ ವ್ಯಕ್ತಪಡಿಸುತ್ತಾರೆ.

ದೇವರ ಹೆಸರೇಳಿ ನೀನು ಮಾಡಬ್ಯಾಡೊ ಕದನ
ಭೇದ ಅಳೆದು ಪ್ರೀತಿ ಮಾಡಿದರೆ ನಿನೆ ದೇವರು ಗೊತ್ತಿಲ್ಲೇನಾ
ಯೋಚಿಸಿ ನೋಡಪ್ಪಾ ನೀನಾ; ಬಿಡು ನಿನ್ನ ಕೆಟ್ಟ ಗುಣಾ

ನಮ್ಮ ದೇಶದ ದುರಂತವೆಂದರೆ ಮಾನವರು ತಮ್ಮ ದೇವರು ಮತ್ತು ಧರ್ಮದ ಹೆಸರಿನಲ್ಲೇ ಗಲಭೆಗಳನ್ನು ಸೃಷ್ಟಿ ಸುತ್ತಾರೆ. ಆದರೆ ಭೇದ ಅಳಿಸಿ ಪ್ರೀತಿ ಭಾವದ ಮೂಲಕ ತಾವೇ ದೇವ ರಾಗಬೇಕೆಂಬ ತೀವ್ರತೆಯನ್ನು ಅವರು ಹೊಂದಿರುವುದಿಲ್ಲ. ಅಂದರೆ ತಮ್ಮೊಳಗಿನ ಸದ್ಭಾವನೆಗಳ ಜೊತೆ ಬದುಕುವುದನ್ನು ಅವರು ಕಲಿಯಲು ಪ್ರಯತ್ನ ಮಾಡುವುದಿಲ್ಲ. ಇದೇ ಎಲ್ಲ ಭೇದಭಾವಗಳ ಮತ್ತು ಶೋಷಣೆಯ ಮೂಲವಾಗಿದೆ. ಈ ನೋವು ಖಾದರಿಪೀರಾ ಅವರಿಗೆ ಕಾಡುತ್ತಲೇ ಇದೆ. ಸತ್ಯ ಹೇಳಿದ ಹುತಾತ್ಮ ಸೂಫಿಸಂತ ಮನಸೂರರನ್ನು ಅವರು ಅನೇಕ ಕಡೆ ನೆನಪಿಸಿಕೊಳ್ಳುತ್ತಾರೆ. ಸತ್ಯ ಹೇಳಿದವರಿಲ್ಲಿ ಉಳೀ ಲಿಲ್ಲ ಮನಸೂರ್ಗ ಗಲ್ಲಿಗೇರಿ ಸ್ಯಾರಲ್ಲ ಎಂದು ದುಃಖ ಪಡುತ್ತಾರೆ.

ಯಾವುದೇ ಧರ್ಮ ತನ್ನತನವನ್ನು ಉಳಿಸಿಕೊಳ್ಳಬೇಕಾದರೆ ಅದು ಅಹಿಂಸೆ, ಸಮಾನತೆ ಮತ್ತು ಶಾಂತಿಯ ಮೇಲೆ ನಿಂತಿರಬೇಕಾಗಿರುತ್ತದೆ. ವಿಶ್ವಶಾಂತಿ ಮತ್ತು ಸತ್ಯದರ್ಶನಕ್ಕೆ ಇವೇ ಮೂಲವಾಗಿರುತ್ತವೆ. ಹಿಂಸೆಯನ್ನು ಮುಂದಿಟ್ಟುಕೊಟ್ಟು ಯಾವುದೇ ಧರ್ಮ ಸತ್ಯದರ್ಶನ ಮಾಡಿಸಲಾರದು. ಮಾನವ ಅಹಿಂಸೆಯನ್ನು ಪಾಲಿಸಬೇಕು. ಅಹಿಂಸೆಯು ಆತ್ಮಸಾಕ್ಷಾ ತ್ಕಾರದೆಡೆಗೆ ಒಯ್ಯುತ್ತದೆ. ಆತ್ಮಸಾಕ್ಷಾತ್ಕಾರದಿಂದ ಶಾಂತಿ ಲಭಿ ಸುತ್ತದೆ. ಈ ಒಳಗಿನ ಶಾಂತಿಯೇ ವಿಶ್ವಶಾಂತಿಗೆ ಮೂಲಾಧಾರ ವಾಗುತ್ತದೆ. ಆ ಮೂಲಕ ಸಮಾನತೆಯಿಂದ ಕೂಡಿದ ವಿಶ್ವ ಭ್ರಾತೃತ್ವ ಶಾಶ್ವತವಾಗುತ್ತದೆ. ಇಂಥ ವಾತಾವರಣದಲ್ಲಿ ಮಾನವ ರೇ ದೇವರಾಗುತ್ತಾರೆ. ಹೀಗೆ ಮಾನವರನ್ನು ಉದ್ಧರಿಸುವುದು ಧರ್ಮದ ಕಾರ್ಯವಾಗಿದೆ.

ಹಿಂಸೆ ಎಂಬುದು ಧರ್ಮಕ್ಕೆ ಅಂಟಿದ ಕಳಂಕ. ಅದು ಧರ್ಮ ನಿಂದನೆಯ ಆರೋಪದ ಮೇಲೆ ನಡೆಯಬಹುದು. ಧರ್ಮ ಯುದ್ಧದ ನೆಪದಲ್ಲಿ ನಡೆಯಬಹುದು. ಧರ್ಮರಕ್ಷಣೆಯ ನೆಪದಲ್ಲಿ ನಡೆಯಬಹುದು. ಈ ಹಿಂಸಾ ಪ್ರವೃತ್ತಿ ಕೊನೆಯಲ್ಲಿ ಕೋಮುಹಿಂಸೆ ಮತ್ತು ಭಯೋತ್ಪಾದನೆಯಲ್ಲಿ ಕೊನೆಗೊ ಳ್ಳುವುದು. ಆದ್ದರಿಂದ ಧರ್ಮದ ಹೃದಯವನ್ನು ಅರಿಯುವುದು ಅವಶ್ಯವಾಗಿದೆ. ಆ ಹೃದಯವಂತಿಕೆಯ ಆಧಾರದ ಮೇಲೆ ಧರ್ಮದ ಬುದ್ಧಿಯ ಮಹತ್ವವನ್ನು ತಿಳಿದುಕೊಳ್ಳಬೇಕಿದೆ. ಆದರೆ ಮೂಲಭೂತವಾದಿಗಳು ತಮ್ಮ ಧರ್ಮದ ಭುಜಭಲವನ್ನು ಮಾತ್ರ ನೋಡಲು ಬಯಸುತ್ತಾರೆ. ಹೀಗಾಗಿ ಅವರಿಗೆ ಅವರ ಧರ್ಮಗ್ರಂಥಗಳ ಅಂತರಾಳ ಗೊತ್ತೇ ಆಗುವುದಿಲ್ಲ. ಜಗತ್ತಿನ ದೇವರುಗಳಿಗೆ ಇಟ್ಟ ಹೆಸರುಗಳೆಲ್ಲ ಮನುಷ್ಯರು ಇಟ್ಟ ಹೆಸರುಗಳೇ ಆಗಿವೆ. ದೇವರು ಅಖಂಡ ಪ್ರೇಮಸ್ವರೂಪದಲ್ಲಿ ಮಾತ್ರ ಇರುತ್ತಾನೆ. ಅಲ್ಲಿ ಹಿಂಸೆ, ಅನ್ಯಾಯ, ಶೋಷಣೆ, ಅಸಮಾನತೆ ಮತ್ತು ಗುಲಾಮಗಿರಿಗೆ ಅವಕಾಶವಿಲ್ಲ.

ಒಬ್ಬ ಗುರು ತನ್ನ ಕಿರಿಯ ಶಿಷ್ಯನಿಗೆ ಕುದುರೆಗೆ ನೀರು ತೋರಿಸಿಕೊಂಡು ಬಾ ಎಂದು ಹೇಳುತ್ತಾನೆ. ಆತ ಕುದುರೆ ಯನ್ನು ನದಿ ದಂಡೆಗೆ ಒಯ್ದು, ಕುದುರೆಗೆ ನೀರು ಕುಡಿಯಲು ಅವಕಾಶ ಕಲ್ಪಿಸದೆ ಬರಿ ತೋರಿಸಿಕೊಂಡು ಬರುತ್ತಾನೆ. ಇದನ್ನು ಅರಿತ ಗುರು ತನ್ನ ಹಿರಿಯ ಶಿಷ್ಯನನ್ನು ಕರೆದು ಕುದುರೆಗೆ ನೀರು ತೋರಿಸಿಕೊಂಡು ಬಾ ಎಂದು ಹೇಳುತ್ತಾನೆ. ಆ ಹಿರಿಯ ಶಿಷ್ಯ ಕುದುರೆಯನ್ನು ನದಿ ದಂಡೆಗೆ ಒಯ್ದು ಬಿಡು ತ್ತಾನೆ. ಆಗ ಕುದುರೆ ನೀರು ಕುಡಿಯುತ್ತದೆ. ಕುದುರೆಯು ಎಮ್ಮೆಯ ಹಾಗೆ ಅಲ್ಲ. ಅದು ನೀರು ಕಂಡಲ್ಲಿ ಮುಳುಗುವುದಿಲ್ಲ. ನೀರಡಿಕೆಯಾದಾಗ ಮಾತ್ರ ನೀರ ಬಳಿ ಹೋಗುತ್ತದೆ. ಕುದುರೆಗೆ ನೀರು ಕುಡಿಯಲು ಕೂಡ ಒತ್ತಾಯಿಸಬಾರದು. ನೀರು ತೋರಿಸಬೇಕು ಅಷ್ಟೆ. ಅಂದರೆ ಅದಕ್ಕೆ ನೀರಿನ ಬಳಿ ಬಿಡಬೇಕು. ಅದು ಕುಡಿಯಬಹುದು ಅಥವಾ ಬಿಡಬಹುದು, ಒತ್ತಾಯವಿಲ್ಲ.

ಕಿರಿಯ ಶಿಷ್ಯ ಗುರುವಿನ ಮಾತನ್ನು ಅರ್ಥಮಾಡಿಕೊಂಡಂತೆ ಮೂಲಭೂತವಾದಿಗಳು ಧರ್ಮಗ್ರಂಥಗಳನ್ನು ಅಥರ್ೈಸುತ್ತಾರೆ. ಆದರೆ ಸೂಫಿಗಳು, ಶರಣರು, ಸಂತರು, ದಾಸರು ಮತ್ತು ತತ್ತ್ವಪದಕಾರರು ಹಿರಿಯ ಶಿಷ್ಯ ಗುರುವಿನ ಮಾತನ್ನು ಅರ್ಥ ಮಾಡಿಕೊಂಡಂತೆ ಧರ್ಮದ ಮಾತನ್ನು ಅರ್ಥಮಾಡಿ ಕೊಳ್ಳು ತ್ತಾರೆ. ಹೀಗೆ ಎಲ್ಲ ಸೂಫಿಗಳ ಹಾಗೆ ಖಾದರಿಪೀರಾ ಅವರು ಪವಿತ್ರ ಖುರಾನ್ ಅನ್ನು ಅರ್ಥ ಮಾಡಿಕೊಂಡರು. ತುಳಿತಕ್ಕೊ ಳಗಾದವರು ಮತ್ತು ಅಪಮಾನಕ್ಕೆ ಒಳಗಾದವರು ಈ ಜಗತ್ತನ್ನು ಆಳಬೇಕೆಂದು ಖುರಾನ್ ಬಯಸುತ್ತದೆ. ಈ ಖುರಾನ್ ಆಶಯ ಗಳೊಂದಿಗೆ ಸಾಲಗುಂದಾದಲ್ಲಿ ಬದುಕಿದ ಖಾದರಿಪೀರಾ ಅವರು ಶರಣರ ಮಾರ್ಗದಲ್ಲಿ ನಡೆಯುತ್ತ ಜನರಿಗೆ ಹೊಸ ಬದುಕಿನ ಬೆಳಕನ್ನು ನೀಡಿದ್ದು ಒಂದು ಅಪೂರ್ವ ಸಾಧನೆ ಯಾಗಿದೆ. ಅಂತೆಯ ಅವ್ರು ಮೇಲೆ ತಿಳಿಸಿದ ಕಿರಿಯ ಶಿಷ್ಯನಂತಿ ರುವ ಮುಲ್ಲಾ ಮೌಲಾನರನ್ನು ಪ್ರಶ್ನಿಸುತ್ತಾರೆ.

ನಿನ್ನ ನೀನು ತಿಳಿಯೋ ಮುಲ್ಲಾ, ದಯವಿಲ್ಲದೆ ಧರ್ಮವಿಲ್ಲ
ನಲ್ಲನ ನೀ ಎಂದು ನೋಡಲಿಲ್ಲ, ಬರೆ ಕೂಗಿದೋ ಮುಲ್ಲಾ
ನೋಡಿ ನಿನಗೆ ನಗುತಾನ ಅಲ್ಲಾ, ನೀ ನೋಡಲಿಲ್ಲ

ಎಂದು ಹೇಳುವ ಮೂಲಕ ಅವರು ಮುಸ್ಲಿಂ ಮೂಲ ಭೂತವಾದಿಗಳನ್ನು ಎದುರು ಹಾಕಿಕೊಳ್ಳುತ್ತಾರೆ. ದೇವರಲ್ಲಿ ಅಚಲವಾದ ನಂಬಿಕೆ ಇರುವ ಅವರು ಆತನನ್ನು ಮನುಷ್ಯನ ಒಳಗೇ ಕಾಣಲು ಲೋಕಕ್ಕೆ ತಿಳಿಸುತ್ತಾರೆ. ಸೂಫಿಗಳಿಂದ ಆರಂಭ ವಾದ ಈ ಕ್ರಮ ಶರಣರಲ್ಲಿ ಅಂತಿಮ ಘಟ್ಟವನ್ನು ತಲುಪಿದೆ. ಇವೆರಡೂ ತತ್ತ್ವಗಳ ಸಂಗಮವಾಗಿರುವುದರಿಂದಲೇ ಖಾದರಿ ಪೀರಾ ಅವರಿಗೆ ಇಂಥ ಪ್ರಖರ ತಾತ್ತ್ವಿಕ ವೈಚಾರಿಕತೆಯನ್ನು ವ್ಯಕ್ತಪಡಿಸಲು ಸಾಧ್ಯವಾಗಿದೆ.

ಅಲ್ಲಾ ನೀನೆಲ್ಲಾ ಸೃಷ್ಟಿ ಮಾಡಿದ್ಯೋ ನಮಗೆಲ್ಲಾ
ನಮ್ಮೊಳಗೆಲ್ಲಾ ನೀನೇ ಇರಲು ಹೇಗೆ ಹೇಳಲಿ ನೀನಿಲ್ಲಾ
ನಿನ್ನ ಹೆಸರಿಲೆ ಧರ್ಮವ ರಚಿಸಿ ಭೇದ ಮಾಡುವ ಜನರೆಲ್ಲಾ
ಭೇದ ಮಾಡುತಾ ಭವಿಗಳಾಗಿ ಅವು ತಿರುಗಿ ತಿರುಗಿ ಸಾಯುವರೆಲ್ಲಾ

ಎಂದು ಅವರು ಧರ್ಮಗಳ ಹೆಸರಲ್ಲಿ ಭೇದ ಸೃಷ್ಟಿಸುವ ಜನರ ಬಗ್ಗೆ ಖೇದ ವ್ಯಕ್ತಪಡಿಸುತ್ತಾರೆ. ಶರಣರ ಹಾಗೆ ಸ್ವರ್ಗ ನರಕಗಳನ್ನು ತಿರಸ್ಕರಿಸುತ್ತ ಸ್ವರ್ಗ ನರ್ಕದ ಆಸೆಯ ಭಯದಲ್ಲಿ ಎಲ್ಲರೂ ಮುಳುಗ್ಯಾರ. ಸ್ವರ್ಗ ಎಲ್ಲೈತೆ ನರ್ಕ ಎಲ್ಲೈತೆ ಹೇಳದೆ ಸಾಯ್ತಾರ ಯಪ್ಪ ಎಂದು ಅವರು ಹೇಳುತ್ತಾರೆ.

ಮಸೀದಿ ಎಂಬುದು ಹಾಳಾದ ಜಾಗ ಅದರ ಗೊಡವಿ ನಿನಗ್ಯಾಕಂತೆ
ಮಾನವಗೆ ಮಾನವ ತಾ ತಿಳಿದರೆ ಎಲ್ಲ ನಿನ್ನೊಳಗಡಗೈತಂತೆ

ಎಂದು ಹೇಳಲು ಕೂಡ ಅವರು ಹಿಂಜರಿಯುವುದಿಲ್ಲ. ದೇವರು ಮಸೀದಿಯಲ್ಲಿ ಇಲ್ಲ ಆತ ನಮ್ಮೊಳಗೇ ಇದ್ದಾನೆ. ಆತನ ಜೊತೆಗೇ ಇದ್ದು ಪ್ರತಿಯೊಬ್ಬ ಮಾನವ ವಿಶ್ವಮಾನವ ಆಗುವ ಮೂಲಕ ದೇವರೇ ಆಗಬೇಕು ಎಂಬುದು ಅವರ ಆಶಯವಾಗಿದೆ. ಆದ್ದರಿಂದ ಅವರಿಗೆ ಸೂಫಿಗಳ ಮತ್ತು ಶರಣರ ದೃಷ್ಟಿಕೋನದ ಧರ್ಮವೇ ಸತ್ಯ ಎಂಬುದು ಸಿದ್ಧವಾಗುತ್ತದೆ.

ಯಾಕಬೇಕು ನಮಗೆ ಇಂಥ ಸ್ವಾರ್ಥದಿಂದ ಕೂಡಿದ ಧರ್ಮ
ಪಶು ನಾಯಿ ಹಂದಿಗಿಂತ ಕೀಳಾದ ಶೂದ್ರ ಧರ್ಮ
ನಾಲ್ಕು ವರ್ಣದ ವಿರುದ್ಧ ಹುಟ್ಟಿಬಂತು ಸತ್ಯ ಬಸವಧರ್ಮ

ಜನರು ಕೀಳಾಗಿರುವುದಿಲ್ಲ. ಆದರೆ ಜನರನ್ನು ಕೀಳು ಮಾಡು ವ ಧರ್ಮಗಳು ನಾಯಿ ಹಂದಿಗಳಿಗಿಂತಲೂ ಕೀಳಾಗಿರುತ್ತವೆ. ಇಂಥ ಕೀಳುವರ್ಣವ್ಯವಸ್ಥೆಯನ್ನು ಹೊಂದಿರುವ ಧರ್ಮದ ವಿರುದ್ಧ ಸತ್ಯ ಬಸವಧರ್ಮ ಹುಟ್ಟಿಬಂದಿತು ಎಂದು ಅವರು ಹೆಮ್ಮೆಯಿಂದ ಹೇಳುತ್ತಾರೆ. ಯಾವ ಪಂಚಮರನ್ನು ಮತ್ತು ಶೂದ್ರರನ್ನು ವರ್ಣವ್ಯವಸ್ಥೆಯ ಧರ್ಮ ಕೀಳಾಗಿ ಕಂಡಿತೋ ಅಂಥವರನ್ನು ಒಂದುಗೂಡಿಸಿದ ಬಸವಣ್ಣನವರು ಸತ್ಯಧರ್ಮ ವನ್ನು ಲೋಕಕ್ಕೆ ನೀಡಿದರು. ಪವಿತ್ರ ಖುರಾನ್ ಮತ್ತು ಪೈಗಂಬ ರರ ಹದೀಸ್ ಮೂಲಕ ಸೂಫಿಗಳು ಅಥರ್ೈಸಿದ ಇಸ್ಲಾಂ ಧರ್ಮಕ್ಕೂ ಬಸವಧರ್ಮಕ್ಕೂ ಅವರು ಭೇದವನ್ನೇ ಕಾಣು ವುದಿಲ್ಲ. ಹೀಗಾಗಿ ಅವರು ತಮ್ಮ ತತ್ತ್ವಪದಗಳಲ್ಲಿ ಪೈಗಂಬ ರರನ್ನು ಮತ್ತು ಸೂಫಿಗಳನ್ನು ಶರಣರೆಂದೇ ಕರೆದಿದ್ದಾರೆ.

ಸಾಲಗುಂದಿಪುರ ಸೇರಿ ಹೇಳು ಅವ ಇಲ್ಲ ನಾನೇ ನಾನು
ಗುರುಪೀರಾ ಖಾದರಿ ಬೆಳಕಾಗಿ ತಾ ಬಂದು ಕತ್ತಲೋಡುವುದು ಇನ್ನೇನು?
ತಿಳಿದು ಎಲ್ಲಾ ನೋಡು ನೀನು

ಸಾಲಗುಂದಿಪುರ ಎಂಬುದು ಅವರಿಗೆ ಒಂದು ದರ್ಶನ ವಾಗಿ ಕಾಣುತ್ತದೆ. ಅವರ ದೃಷ್ಟಿಯಲ್ಲಿ ಗುರುಪೀರಾ ಖಾದರಿ ಎಂದರೆ ಅವರ ಪೂರ್ವಜ ಹಜರತ್ ಮಹಬೂಬೇ ಸುಬಹಾನಿ ಪೀರಾನೇ ಪೀರ ದಸ್ತಗೀರ ಅಬ್ದುಲ್ ಖಾದಿರ್ ಜೀಲಾನಿ, ಬಗದಾದಿ ಅವರೇ ಆಗಿದ್ದಾರೆ. ಅವರ ತತ್ತ್ವಪದಗಳಲ್ಲಿ ಬರುವ ಗುರುಪೀರಾ ಖಾದರಿ ಅಂಕಿತ ನಾಮವು ಮಹಬೂಬೇ ಸುಬಹಾನಿ ಅವರಿಗೇ ಸಂಬಂಧಿಸಿದೆ.

ಅಲ್ಲನಿಗೊಂದು ಮನೆಯೆಂದು ಹೇಳಿ ನಿನೆ ಕಟ್ಟಿ ಕೊಟ್ಟಿಲ್ಲೇನು?
ಕಲ್ಲಿನ ಮನೆಯೊಳು ಅಲ್ಲನಿಲ್ಲೆಂದು ಗುರುಪೀರ ಅಂದೇ ಹೇಳಲಿಲ್ಲೇನು
ಸಾಲಗುಂದಿಯೊಳು ಹೋಗಿ ನೋಡುನೀ ಕಂಡನು ಅವ ನೋಡಿಲ್ಲೇನೊ
ನಿನ್ನೊಳು ಅವ ತಾ ನೆಲೆಸ್ಯಾನಲ್ಲಾ ಇನ್ನೊರಿಗೆ ನೋಡಿಲ್ಲೇನು?

ಎಂದು ಹೇಳುವ ಅವರು ದೇವರು ನಮ್ಮೊಳಗೇ ಇರುವ ಈ ರಹಸ್ಯವನ್ನು ಮಹಬೂಬೇ ಸುಹಬಾನಿ ಅವರಿಂದ ಕಂಡು ಕೊಂಡಿರುವುದಾಗಿ ಸೂಚಿಸಿದ್ದಾರೆ. ನಿಮ್ಮೊಳಗಿನ ಆ ದೇವರನ್ನು ಇಲ್ಲಿಯವರೆಗೆ ನೋಡಿಲ್ಲೇನು ಎಂದು ನಮ್ಮನ್ನು ಪ್ರಶ್ನಿಸುತ್ತಾರೆ.

ಇಸ್ಲಾಂ ಮೂಲಭೂತವಾದಿಗಳು ಸೂಫಿ ಸಂತರ ಸಮಾ ಧಿಗಳ ಬಗ್ಗೆ ವಿಮುಖ ಧೋರಣೆ ಹೊಂದಿದ್ದಾರೆ. ಈ ಧೋರಣೆ ಯನ್ನು ಖಾದರಿಪೀರಾ ವಿರೋಧಿಸುತ್ತಾರೆ.

ಗೋರಿಯೊಳಗೆ ಏನಿಲ್ಲವೆಂದು ನೀ ಹೇಳತಿಯೊ ಮೌಲಾನಾ
ಮಸೀದಿಯಲ್ಲಿ ಅಲ್ಲನೆ ಇಲ್ಲ; ಹೆಂಗ್ ಹೇಳ್ತಿನೀ ಐದಾನ, ನೀನಾಗು ಮೋಮಿನೀನಾ
ನನ್ನ ಶರಣರು ನಿತ್ಯ ಬದುಕ್ಯಾರ ಹೇಳುತೈತಿ ಖುರಾನಾ
ತಪ್ಪು ಹೇಳಿದರೆ ಕಿವಿ ಹಿಡಿಯೊ ನೀನು ನಿಮ್ಮಪ್ಪ ಈಗ ಒಪ್ತಾನ

ಎಂದು ಅವರು ಮೂಲಭೂತವಾದಿ ಧರ್ಮಪಂಡಿತರಿಗೆ ಸವಾಲು ಹಾಕುತ್ತಾರೆ. ಖಾದರಿಪೀರಾ ಅವರು ಹಿಂದು ಮೂಲ ಭೂತವಾದಿಗಳನ್ನೂ ಬಿಟ್ಟಿಲ್ಲ.

ಯಾಕಪ್ಪ ಈ ಔತಾರ ಬೆತ್ತಲಾಗಿ ಹುಟ್ಟಿದರೆಲ್ಲಾರ
ಹುಟ್ಟಿದಾಗ ಇರಲಿಲ್ಲಪ್ಪೊ ಹಾರವನಿಗೆ ಜನಿವಾರ
ಎಲ್ಲರಿಗೆ ಒಬ್ಬನೆ ದೇವರ, ತಿಳಿದು ತಿಳಿಯಲಿಲ್ಲೊ ಜನರ
ನಿನ್ನೊಳಗಿನ 6 ಕಳ್ಳರ ಜೊತೆಗೂಡಿ ನೀ ಆದಿಯೊ ಚೋರಾ

ಎಂದು ಅವರು ಟೀಕಿಸಿದ್ದಾರೆ. ಈ ಟೀಕೆಯ ಹಿಂದೆ ಅಖಂ ಡ ಮಾನವಪ್ರೇಮ ಇದೆ. ತಪ್ಪು ಮಾಡುವವರಿಗೆ ತಿಳಿಸಿಹೇಳುವ ಕ್ರಮವಿದೆ. ಹಾಳಾಗಬೇಡಿರಿ ಎಂಬ ಎಚ್ಚರಿಕೆಯ ಮಾತಿದೆ.

ಗುರು ಖಾದರಿಪೀರಾ ಅವರ ದೃಷ್ಟಿಕೋನ ವಿಶಿಷ್ಟವಾಗಿದೆ. ಅವರು ಧರ್ಮ, ಸಮಾಜವನ್ನು, ಸಮಾಜದೊಳಿಗಿನ ವೈರು ಧ್ಯಗಳನ್ನು, ಮತ್ತು ಧರ್ಮವನ್ನು ಕಡೆಗಣಿಸಿ ನಿಲ್ಲುವ ಮಾನ ಸಿಕ ತುಮುಲಗಳನ್ನು ಬಹಳ ತೀಕ್ಷ್ಣವಾಗಿ ಗಮನಿಸಿದ್ದಾರೆ. ಆ ಕುರಿತು ಬಹಳ ಆಳವಾಗಿ ಚಿಂತಿಸಿದ್ದಾರೆ. ಭೌತಿಕ ಸ್ಥಿತಿಗತಿ ಗಳು ಮಾನವನನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾನವ ಕುಲದಲ್ಲಿಯ ಗುಟ್ಟು ನಮ್ಮನ್ನು ವಾಸ್ತವದ ಕಡೆಗೆ ಸೆಳೆಯುತ್ತದೆ.

ಮನುಕುಲದಲ್ಲಿಯ ಗುಟ್ಟು ಹೇಳತೀನಿ ಮಾಡಬ್ಯಾಡ್ರಿ
ತಾಸ್ಚಾರ ಚತುರ್ ವರ್ಣದ ಚಕ್ರದಿಂದ ಇದು ಹುಟ್ಯಾದ ಔತಾರಾ ಹಾಂ ಹಾಂ
ಬಲಸ್ಯ ಪೃಥ್ವಿ ಎಂಬುದು ತಿಳಿದರೆ ರಾಜರಾಗುತಾರ; ಸುಳ್ಳಿನ ಗುಟ್ಟು
ತಿಳಿದರೆ ಚೂಟಿಯ ಶ್ರೀಮಂತರಾಗುತಾರ ತಮ್ಮಾ ಶ್ರೀಮಂತರಾಗುತಾರ
ಸುಳ್ಳು ಮೋಸ ವಂಚನೆ ಮಾಡಲು ದೇವರಾಗುತಾರ
ಸತ್ಯಧರ್ಮದಿಂದ ಇದ್ದವರೆಲ್ಲ ಶೂದ್ರರಾಗುತಾರ ತಮ್ಮ ಶೂದ್ರರಾಗುತಾರ
ಇಲ್ಲದ್ದು ಇದ್ದಾಂಗ ಹೇಳಿದವರೆಲ್ಲ ಆರ್ಯರಾಗುತಾರ
ನ್ಯಾಯನೀತಿಯಿಂದ ಇದ್ದವರೆಲ್ಲ ದರಿದ್ರರಾಗುತಾರ ತಮ್ಮಾ
ಗೊಡವೆ ಇಲ್ಲದ ಜನರಿಗೆ ಹೊಡೆದರೆ ಕ್ಷತ್ರಿಯರಾಗುತಾರ
ಕೆಲಸವಿಲ್ಲದೆ ಗಳಿಕೆ ಮಾಡಿದವರು ವೈಶ್ಯರಾಗುತಾರ ತಮ್ಮ
ಕಂಗೆಟ್ಟು ವಲಸೆ ಬಂದವರೆಲ್ಲ ಸೂತ್ರ ಹಿಡಿಯತಾರ
ಅನುಕೂಲ ನೋಡಿ ಜೈ ಎಂದವರೆಲ್ಲ ಬ್ರಾಹ್ಮಣರಾಗುತಾರ ತಮ್ಮಾ
ಭೇದವಿಲ್ಲದೆ ಬೋಧ ಮಾಡುವವರು ಉಪವಾಸ ಸಾಯ್ತಾರ ದುಡಿದು
ದುಡಿದು ಮುಪ್ಪಾದ ಎತ್ತಿಗೆ ಸಂತಿಗೆ ಹೊಡಿತಾರ ತಮ್ಮಾ
ಶಾಸ್ತ್ರದ ಪಟ್ಟಿನ ಗುಟ್ಟು ತಿಳಿದರೆ ಜ್ಞಾನಿಗಳಾಗುತಾರ; ಅನ್ಯಾಯ
ನೋಡಿ ಸುಮ್ಮನಾಗಬೇಕು ತಮ್ಮ ಯೋಗ್ಯರಾಗುತಾರ ತಮ್ಮಾ
ಸತ್ಯ ಇದ್ದರೆ ಹಾಗೆ ಹೇಳಬೇಡ ಖೋಡಿ ದಡ್ಡರಾಗತಾರ
ಅನ್ಯಾಯ ತಡಿಯಲು ಹೋದವರೆಲ್ಲಾ ಸತ್ತುಹೋಗತಾರ
ಧರ್ಮದ ಸತ್ಯ ಮುಚ್ಚಿ ಹೇಳಿದರೆ ಋಷಿ ಮುನಿಗಳಾಗುತಾರ
ನ್ಯಾಯನೀತಿಯಿಂದ ಇದ್ದವರೆಲ್ಲಾ ಅಸ್ಪೃಶ್ಯರಾಗುತಾರ ತಮ್ಮಾ

ಗುರು ಖಾದರಿಪೀರಾ ಅವರಿಗೆ ಆ ಕಾಲದ ಬಹುಸಂ ಖ್ಯಾತ ಬಡನಿರಕ್ಷರಿಕನ್ನಡಿಗರ ಬಗ್ಗೆ ತೀವ್ರ ಕಾಳಜಿ ಇತ್ತು. ಅಂತೆಯೆ ಅವರು ತಮ್ಮ ಭಾಗದ ಹಳ್ಳಿಗರು ಆಡುವ ಕನ್ನಡ ದಲ್ಲಿ ಜ್ಞಾನ ಸಮುದ್ರ ಸೃಷ್ಟಿಸಿದರು. ತಾವು ಕಂಡುಕೊಂಡ ತತ್ತ್ವಜ್ಞಾನವನ್ನು ಹಳ್ಳಿಗಾಡಿನ ಕನ್ನಡಿಗರಿಗೆ ತಲುಪಿಸು ವುದಕ್ಕಾಗಿ ತಮ್ಮ ತತ್ತ್ವಪದಗಳನ್ನು ಅವರ ಮುಂದೆ ಹಾಡಿ ತೋರಿಸಿದರು. ಆ ಮೂಲಕ ಕನ್ನಡವನ್ನು ಎತ್ತಿ ಹಿಡಿದರು. ಆ ನಿರಕ್ಷರಿಕನ್ನಡಿಗರು ತಮ್ಮ ಸ್ಮೃತಿಯಲ್ಲಿ ಗುರು ಖಾದರಿ ಪೀರಾ ಅವರ ತತ್ತ್ವಗಳನ್ನು ಸಂರಕ್ಷಿಸಿದರು. ಅಂಥ ಬಡ ಕನ್ನಡಿಗರು 19ನೇ ಶತಮಾನದಿಂದ ಉಳಿಸಿಕೊಂಡು ಬಂದ ತತ್ತ್ವಪದಗಳೇ ಇಂದು ಜ್ಞಾನಸಮುದ್ರವಾಗಿ ಮುದ್ರಣ ಗೊಂಡು ನಮ್ಮ ಅರಿವಿನ ವಿಸ್ತಾರಕ್ಕೆ ಕಾರಣವಾಗಿವೆ.

ಕನ್ನಡಾಂಬೆಗೆ ರವಿಯು ತಾನಾಗಿ ಬೆಳಕು ನೀಡುತಿತ್ತ; ಅಜ್ಞಾನದ ಕತ್ತಲು
ತಾ ಕಳಿದು ದಾರಿ ತೋರಿಸಿತ್ತ ಭಕ್ತರ ಮನದಲಿ ತಾ ಕುಂತ

ಕನ್ನಡಾಂಬೆಗೆ ದರ್ಶನಸೂರ್ಯನು ಬೆಳಕಿನ ಸೇವೆ ಮಾಡುತ್ತಿದ್ದಾನೆ. ಆ ಮೂಲಕ ಕನ್ನಡಾಂಬೆಯ ಕಂಡು ಜನರ ಅಜ್ಞಾನದ ಕತ್ತಲು ಕಳೆಯುತ್ತಿದೆ. ಆ ದರ್ಶನದ ಬೆಳಕೇ ನಿಜದ ನಿಲವಿನ ಭಕ್ತರ ಮನದಲ್ಲಿ ಕುಳಿತು ವಿಶ್ವಮಾನವ ಪಥವನ್ನು ತೋರಿಸುತ್ತಿದೆ. ಭಕ್ತರೇ ದೇವರಾಗುವ ರಹಸ್ಯವನ್ನು ಬಯಲು ಮಾಡುತ್ತಿದೆ!

ಗುರು ಖಾದರಿಪೀರಾರವರು ಕನ್ನಡ ಜನಪದ ಪರಂಪರೆ ಯೊಂದಿಗೆ ಸೂಫಿಗಳ ಹಾಗೂ ಶರಣರ ಮಾನವಧರ್ಮ ಪರಂಪರೆಯನ್ನು ಒಂದಾಗಿಸಿ ಪ್ರೇಮತತ್ತ್ವವನ್ನು ಸಾರುತ್ತ ವಿಶ್ವಮಾನವನ ಕನಸುಕಂಡಿದ್ದು ಸರ್ವರಿಗೂ ಮಾರ್ಗದಶರ್ಿ ಯಾಗಿದೆ.

ತಾವು ಸಾಕ್ಷಾತ್ಕರಿಸಿಕೊಂಡ ಮಾನವರಿಂದ ಮಾನವ ರನ್ನು ಉದ್ಧಾರ ಮಾಡುವ ಮಾನವಧರ್ಮದ ಪ್ರಚಾರಕ್ಕಾಗಿ, ವಾಹನ ಸೌಲಭ್ಯವಿಲ್ಲದ ಅಂದಿನ ದಿನಗಳಲ್ಲಿ ಕುದುರೆ ಮೇಲೆ ಕುಳಿತು ಕನರ್ಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಅನೇಕ ಕಡೆಗಳಲ್ಲಿ ಸುತ್ತಾಡಿದರು. ಲೋಕಕಲ್ಯಾಣದ ತತ್ತ್ವ ವನ್ನು ಪ್ರಚಾರ ಮಾಡಿದರು. ಅಲ್ಪಸಂಖ್ಯಾತರು, ಹಿಂದುಳಿದ ವರು ಮತ್ತು ದಲಿತರಷ್ಟೇ ಅಲ್ಲದೆ ಮಾನವತಾವಾದಿ ಬ್ರಾಹ್ಮ ಣರಿಗೂ ಅವರು ಸರ್ವ ಸಮತ್ವದಿಂದ ಕೂಡಿದ ಸೂಫಿ ಶರಣರ ಮಾನವಧರ್ಮದ ದೀಕ್ಷೆ ಕೊಟ್ಟರು. ವಂಶಪಾ ಯಂಪರ್ಯವಾಗಿ ಬಂದ ಜಹಗೀರನ್ನು ನಿರಾಕರಿಸಿದ್ದ ಅವ ರು ಕೊನೆಯವರೆಗೂ ಸಾಮಾನ್ಯರ ಮಧ್ಯೆಯೆ ಬದುಕುತ್ತ 25.7.1896ರಂದು ಗುರುವಾರ ಸಾಲ್ಗುಂದಾ ಗ್ರಾಮದಲ್ಲಿ ಇಹಲೋಕ ಯಾತ್ರೆ ಮುಗಿಸಿದರು. ಅವರ ದಗರ್ಾ (ಸಮಾಧಿ) ಸಾಲಗುಂದಾ ಗ್ರಾಮದಲ್ಲಿದೆ.

Monday, July 16, 2012

ದಂಡುಪಾಳ್ಯ'ದ ದಾರಿಯಲ್ಲಿ ಹಂತಕರ ಹೆಜ್ಜೆ...



ದಾಕ್ಷಿಣ್ಯಕ್ಕಾದರೂ ಅಯ್ಯೋ-ಪಾಪ ಎನ್ನದಂಥ ಮನಸ್ಸು, ಕರುಣೆ ಅನ್ನೋದರ ಅರ್ಥವೇ ಗೊತ್ತಿಲ್ಲದ ಪರಮ ಕ್ರೂರಿಗಳು. ತಂಡದ ನಾಯಕಿ ಲಕ್ಷ್ಮಿ ಮೊದಲು ಒಂಟಿ ಮಹಿಳೆಯರಿರುವ ಮನೆಯನ್ನು ಗುರುತಿಸುತ್ತಾಳೆ. ಮನೆಯಲ್ಲಿ ಬೇರೆ ಯಾರೂ ಇಲ್ಲ ಅನ್ನೋದು ಗ್ಯಾರೆಂಟಿಯಾಗುತ್ತಿದ್ದಂತೇ ಆ ಮನೆ ಮತ್ತು ಮನೆಯಲ್ಲಿರುವವರ ಡೀಟೇಲನ್ನು ತಂಡದ ಉಳಿದ ಸದಸ್ಯರಿಗೆ ನೀಡುತ್ತಾಳೆ. ಹಾಗೆ ತನ್ನ ಗುಂಪಿನೊಂದಿಗೆ ಬರುವ ಲಕ್ಷ್ಮಿ ಮೊದಲು ಮನೆ ಬಾಗಿಲು ಬಡಿಯುತ್ತಾಳೆ. ಕುಡಿಯೋಕೆ ನೀರು ಕೊಡಿ ಎನ್ನುತ್ತಾಳೆ. ಮನೆಯಾಕೆ ಒಳಗೆ ಹೋಗಿ ನೀರು ತರುವಷ್ಟರಲ್ಲಿ ಗ್ಯಾಂಗಿನ ಉಳಿದ ಸದಸ್ಯರು ಮನೆಯೊಳಗೆ ಪವೇಶಿಸುತ್ತಾರೆ. ಅಲ್ಲಿಗೆ ಮನೆಯಲ್ಲಿರುವರ ಕತೆ ಮುಗಿದಂತೇ! ಹಿಂದಿನಿಂದ ತಲೆ ಲಟಾರನೆ ರಾಡಿನಿಂದ ಹೊಡೆದು ಕೆಳಗುರುಳಿಸುತ್ತಾರೆ. ಮನೆಯಲ್ಲಿರುವ ನಗ-ನಾಣ್ಯವನ್ನೆಲ್ಲಾದೋಚಿದ ನಂತರ ಮೆತ್ತಗೆ ಗ್ಯಾಂಗ್ ಲೀಡರ್ ಕೃಷ್ಣ ನೆಲದ ಮೇಲೆ ಪ್ರಜ್ಞಾಶೂನ್ಯ ಸ್ಥಿತಿಯಲ್ಲಿರುವ ಹೆಣ್ಣನ್ನು ಎಳೆದುಕೊಳ್ಳುತ್ತಾನೆ. ಎಲೆ-ಅಡಿಕೆ ಜಗಿಯುತ್ತಾ ಎಲ್ಲವನ್ನೂ ನೋಡುತ್ತಾ ಕೂರುವ ಲಕ್ಷ್ಮಿ ಬಂದು ಗಟ್ಟಿಯಾಗಿ ಆ ಹೆಣ್ಣಿನ ಕಾಲುಗಳನ್ನು ಒತ್ತಿಹಿಡಿಯುತ್ತಾಳೆ. ಮತ್ತೊಬ್ಬ ಬಂದು ಮೊಂಡು ಹಿಡಿದ ಕತ್ತಿಯೊಂದನ್ನು ನೀಡುತ್ತಾನೆ. ವಿಲಕ್ಷಣವಾಗಿ ದಿಟ್ಟಿಸುತ್ತಾ ಕತ್ತಿಯನ್ನು ಕುತ್ತಿಗೆಗಿಟ್ಟು ಚರ್ರಚರ್ರನೆ ಕೋಳಿ ಕೊಯ್ಯುವ ಹಾಕೆ ಗೋಮಾಳೆ ಸೀಳಿಬಿಡುತ್ತಾನೆ ಕೃಷ್ಣ. ಹಾಗೆ ಕುತ್ತಿಗೆ ಸೀಳಿದ ಕೂಡಲೇ ಗಂಟಲಿನಿಂದ `ಟಿಸ್ಸ್ಸ್ ' ಅಂತಾ ಶಬ್ದ ಬರುತ್ತದೆ. ಕಿವಿ ಹತ್ತಿರ ಮಾಡಿ ಆ ಸದ್ದನ್ನು ಕೇಳುವುದೆಂದರೆ ಕ್ರೂರಿ ಕೃಷ್ಣನಿಗೆ ಅದೆಂಥದ್ದೋ ಮೋಜು. ನಂತರ ತಂಡದ ಇತರೆ ಸದಸ್ಯರು ಸತ್ತ ಹೆಣವನ್ನೂ ರೇಪ್ ಮಾಡುತ್ತಾರೆ... ಮುನ್ನೂರು ರುಪಾಯಿಗೆ ಮೈಮಾರಿಕೊಳ್ಳುವ ಬೀದಿ ವೇಶ್ಯೆಯನ್ನೂ ಹಿಂಸಿಸಿ ಕೊಲ್ಲುವ, ಮನೆಗಳಿಗೆ ನುಗ್ಗಿದಾಗ ಸಿಗುವ ಗಂಡಸರ ಮೇಲೂ ಅತ್ಯಾಚಾರವೆಸಗುವು ಕೆಟ್ಟ ಕ್ರಿಮಿಗಳವರು...
ಅಬ್ಬಬ್ಬಬ್ಬಬ್ಬ!!
ಇಂಥ ಸರಣೀ ಭೀಬತ್ಸ ಕೊಲೆಗಳಿಗೆ ಕಾರಣರಾದವರು `ದಂಡುಪಾಳ್ಯ'ದ ಹಂತಕರು. ನೈಜ ಕತೆಯನ್ನೇ ಹೆಕ್ಕಿಕೊಂಡು ಅಷ್ಟೇ ನೈಜವಾಗಿ ಚಿತ್ರಿತಗೊಂಡಿರುವ ಸಿನಿಮಾ `ಡಂಡುಪಾಳ್ಯ'. ಈ ಚಿತ್ರವನ್ನು ಗಟ್ಟಿ ಗುಂಡಿಗೆಯಿದ್ದವರು ಮಾತ್ರ ನೋಡಲು ಸಾಧ್ಯ. ದಂಡು ಪಾಳ್ಯದ ಹಂತಕರ ಪ್ರತಿಯೊಂದೂ ವಿವರಗಳನ್ನು ಕಲೆಹಾಕಿ, ಆ ಗ್ಯಾಂಗಿನ ಹುಟ್ಟಡಗಿಸಿದ ಇನ್ಸ್ಪೆಕ್ಟರ್ ಚಲಪತಿವರ ಧೈರ್ಯ-ಬುದ್ದಿವಂತಿಕೆ ಇತ್ಯಾದಿ ವಿವರಗಳನ್ನಿಟ್ಟು ಪಕ್ಕಾ ರಿಯಲಿಸ್ಟಿಕ್ ಡಾಕ್ಯುಮೆಂಟರಿಯಂತೆ `ದಂಡುಪಾಳ್ಯ'ವನ್ನು ಕಟ್ಟಿಕೊಟ್ಟಿದ್ದಾರೆ ನಿದರ್ೇಶಕ ಶ್ರೀನಿವಾಸರಾಜು.

ಲಕ್ಷ್ಮಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೂಜಾಗಾಂಧಿ, ಕೃಷ್ಣನಾಗಿ ಮಕರಂದ್ ದೇಶಪಾಂಡೆ, ರವಿಕಾಳೆ, ಮುನಿ, ಯತಿರಾಜ್, ಪೆಟ್ರೋಲ್ ಪ್ರಸನ್ನ ಮುಂತಾದವರು ಡಂಡುಪಾಳ್ಯದ ಹಂತಕರನ್ನೇ ಆವಾಹಿಸಿಕೊಂಡು ನಟಿಸಿದ್ದಾರೆ. ಚಿತ್ರದ ಮೊದಲಾರ್ಧದಲ್ಲಿ ಕುತ್ತಿಗೆ ಕತ್ತರಿಸುವ ದೃಶ್ಯಗಳೇ ಹೆಚ್ಚು ಇರುವುದರಿಂದ ಪ್ರೇಕ್ಷಕರ ಕರುಳು ಬಾಯಿಗೆ ಬಂದಂತಾಗುತ್ತದೆ; ಪ್ರೇಕ್ಷಕ ಪದೇ ಪದೇ ಕಣ್ಣು-ಕಿವಿ ಮುಚ್ಚಲೇಕಾದ ಅನಿವಾರ್ಯ! ಮತ್ತೆ ನೋಡುಗರ ಕಣ್ತೆಯುವುದು ಇನ್ಸ್ಪೆಕ್ಟರ್ ಚಲಪತಿ ಸಂಪೂರ್ಣವಾಗಿ ಎಂಟ್ರಿ ಕೊಟ್ಟು ತನಿಖೆ ಆರಂಭಿಸಿದ ಮೇಲಷ್ಟೇ. ಮೊದಲಿಗೆ ದರೋಡೆ ಮಾಡಿದ ಬಂಗಾರವನ್ನು ಸಂಶಯಾಸ್ಪದವಾಗಿ ಮಾರಲು ಯತ್ನಿಸುವ ತಂಡದ ಸದಸ್ಯ ತಿಮ್ಮನನ್ನು ಬಂಧಿಸಿ ನಂತರ ಗ್ಯಾಂಗಿನ ಇತರರ ಬೆನ್ನುಹತ್ತುವ ಎಪಿಸೋಡುಗಳು ರೋಚಕವಾಗಿವೆ. ಸಾಯಿ ಪ್ರಕಾಶ್ ಸಹೋದರ ರವಿಶಂಕರ್ ಚಲಪತಿ ಪಾತ್ರಕ್ಕೆ ಹೇಳಿಮಾಡಿಸಿದಂತೆ ನಟಿಸಿದ್ದಾರೆ. ದವಡೆಯಲ್ಲಿ ಅಡಿಕೆ-ಎಲೆ ಇಟ್ಟುಕೊಂಡು, ಬೀಡಿ ಸೇದುವ, ಹಂದಿಯನ್ನು ಭೇಟೆಯಾಡಿ ಹೆಗಲೆ ಮೇಲೆ ಹೊತ್ತೊಯ್ಯುವ ಪೂಜಾಗಾಂಧಿ ತಾನೊಬ್ಬಳು ಜನಪ್ರಿಯ ಹೀರೋಯಿನ್ ಅನ್ನೋದನ್ನು ಮರೆತು ನಟಿಸಿದ್ದಾಳೆ. ಇಂಥ ಸರಣಿ ಪಾಥಕಗಳನ್ನು ದೃಶ್ಯರೂಪದಲ್ಲಿ ನೀಡುವಾಗ ಹಿನ್ನೆಲೆ ಸಂಗೀತ ಮಹತ್ವವಾದ ಪಾತ್ರ ವಹಿಸುತ್ತದೆ. ಸಂಗೀತ ನಿದರ್ೇಶಕ ಅಜರ್ುನ್ ಇರುವ ಒಂದು ಹಾಡು ಮತ್ತು ಬಿಜಿಎಮ್ ಅಜರ್ುನ್ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಛಾಯಾಗ್ರಾಹಕ ರಾಮ್ಪ್ರಸಾದ್ ಇಡೀ ಸಿನಿಮಾವನ್ನು ಹಸಿಹಸಿಯಾಗಿ ಕಟ್ಟಿಕೊಟ್ಟೊದ್ದಾರೆ.

ದಂಡುಪಾಳ್ಯದ ಗ್ಯಾಂಗಿನವರಿಗೆ ಸುಫಾರಿ ಕೊಟ್ಟು ಪೊಲೀಸರನ್ನೇ ಕೊಲ್ಲಿಸುವ ಪೊಲೀಸರು, ಎರಡು ಮೂರು ಸಾವಿರ ರುಪಾಯಿಗಳನ್ನು ಕೊಟ್ಟು ಕೊಲೆ ಮಾಡಿಸುವ ವಕೀಲ... ಹೀಗೆ ನಡೆದ ಕಥೆಯನ್ನು ಯಥಾವತ್ತು ನಿರೂಪಿಸಿದ್ದಾರೆ; `ದಂಡುಪಾಳ್ಯ'ವನ್ನು ಜೀಣರ್ಿಸಿಕೊಳ್ಳುವುದು ಕಷ್ಟಕರವಾಗಿರುವುದೂ ಅದೇ ಕಾರಣಕ್ಕೇ. ಸಿನಿಮಾ ಪೊಲೀಸ್ ಫೈಲ್ಗಳ ಪ್ರಕಾರ ಬಹುತೇಕ ನೈಜವಾಗಿದೆ ಅನ್ನೋದರಲ್ಲಿ ಡೌಟಿಲ್ಲ. ಆದರೆ ಅಷ್ಟೊಂದು ನೈಜತೆಯನ್ನು ನೋಡುಗರ ಮೇಲೆ ಹೇರುವ ಅಗತ್ಯತೆ ಇತ್ತಾ ಅನ್ನೋದಷ್ಟೇ ಮತ್ತೆಮತ್ತೆ ಕಾಡುವ ಪ್ರಶ್ನೆ...

-ಅರುಣ್.ಜಿ


ನಿವೃತ್ತಿ, ಒಪ್ಪಂದ, ಸಂತಸ


ಓದುಗರೇ, ಇಂದು ತಾವುಗಳು ನೋಡುತ್ತಿರುವ ಪ್ರಜಾಸಮರ ಪತ್ರಿಕೆಯೂ 2007ರಲ್ಲಿ ಆರಂಭಗೊಂಡಿತು. ಇದರ ಸಿದ್ದತೆಗಾಗಿ 1 ವರ್ಷ ಕಳೆದರೂ ಕೂಡ ಕೊನೆಗೆ 2007 ರ ಅಂತ್ಯದಲ್ಲಿ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಸಂಘಟನೆ ಹಿನ್ನಲೆಯಿಂದ ಬಂದಿದ್ದ ನಮಗೆ ಪತ್ರಿಕೋದ್ಯಮದ ಒಳವಿಸ್ತಾರ ಹೇಗಿದೆ ಎಂಬುದು ಊಹಿಸುವುದು ಕಷ್ಟಕರವಾಗಿತ್ತು. ಇನ್ನೇನು ಪತ್ರಿಕೆಯ ಎಲ್ಲಾ ಹಂತಗಳ ಕಾರ್ಯಗಳು ಮುಗಿದಾಗ ಬಿಡುಗಡೆಗೆ ಯಾರನ್ನು ಆಮಂತ್ರಿಸಬೇಕು ಎಂಬ ಗೊಂದಲ ನಮ್ಮ ಬಳಗದಲ್ಲಿ ಏರ್ಪಟ್ಟಿತ್ತು.
ಆದಾಗ್ಯೂ ಅಂದು ಟಿವಿ 9 ಖಾಸಗಿ ವಾಹಿನಯಲ್ಲಿ ಪತ್ರಕರ್ತರಾಗಿದ್ದ ಹಮೀದ್ ಪಾಳ್ಯ ಅವರನ್ನು ಆಹ್ವಾನಸಲಾಯಿತು. ಕೊನೆ ಸಂದರ್ಭಕ್ಕೆ ಅವರು ಬರದೇ ಹೋದಾಗ, ನಮಗೆ ಏನು ಮಾಡಬೇಕೆಂದು ತೋಚದಂತಾಗಿ ಕೂಡಲೇ ಡಾ.ಎಂ.ಎಲ್ ಪಾಟೀಲ್ರನ್ನು ಆಹ್ವಾನಸಿದಾಗ ಅವರು ಅಂದಿನ ಪ್ರಧಾನ ವ್ಯವಸ್ಥಾಪಕರಾದ ಡಿ.ವೈ ವೆಂಕಟೇಶರ ಅನುಮತಿಯನ್ನು ಪಡೆದು ನಮ್ಮ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡರು. ಸಹಜವಾಗಿ ಎಲ್ಲರೂ ಸಂತಸದಿಂದಲೇ ಪಾಟೀಲ್ರನ್ನು ಬರಮಾಡಿಕೊಂಡು ಕಾರ್ಯಕ್ರಮವನ್ನು ಮುಂದುವರೆಸಿದೆವು.
ಪ್ರಜಾಸಮರವನ್ನು ಉದ್ಘಾಟಿಸಿ ಮಾತನಾಡಿದ ಪಾಟೀಲ್ರು ಮುಂದಿನ ದಿನಗಳಲ್ಲಿ ಪತ್ರಿಕೆಗೆ ಒಳ್ಳೆಯ ಭವಿಷ್ಯವಿದೆ. ಅದನ್ನು ಈ ಯುವಪಡೆ ಮಾಡುತ್ತದೆ ಎಂಬ ಭರವಸೆ ನನಗಿದೆ. ಸ್ಥಳೀಯ ಮಟ್ಟದ ಪತ್ರಿಕೆ ಇದಾದರೂ, ರಾಜ್ಯಮಟ್ಟದ ಪತ್ರಿಕೆಯಾಗಿ ಹೊಮ್ಮುವದರಲ್ಲಿ ಎರಡು ಮಾತಿಲ್ಲ ಎಂಬ ಮಾತನ್ನು ಹೇಳಿದರು. ಅಂದಿನ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ನೇಹಿತರಾದ ನಾಗಣ್ಣ ಕಟ್ಟಿಮನ, ಎಂ.ಸಿ ಲಿಂಗಪ್ಪ, ಹಿತೈಷಿಗಳಾದ ದಾಸಪ್ಪಗೌಡ, ಲಿಂಗಣ್ಣ ತಬಲಾಜಿ ಮೊದಲಾದವರು ಹಾಜರಿದ್ದರು.
ಯಾಕಾಗಿ ಇದನ್ನೆಲ್ಲ ನೆನಪಿಸಬೇಕಾಗಿ ಬಂತೆಂದರೆ,
ಅಂದು ಪತ್ರಿಕೆಯನ್ನು ಬಿಡುಗಡೆ ಮಾಡಿ ಸಂತಸದಿಂದ ನಾಲ್ಕು ಹಿತ ನುಡಿಗಳನ್ನು ಹೇಳಿದ್ದ ಪಾಟೀಲ್ರು ಇದೇ 30ರಂದು ಕಂಪೆನಿಯಿಂದ ನಿವೃತ್ತಿ ಹೊಂದಿದರು. ಕಂಪೆನಿಯಲ್ಲಿ ಇದ್ದಷ್ಟು ದಿನ ಪತ್ರಿಕೆಯ ಜೊತೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದ ಅವರು, ಮೊನ್ನೆ ನಮ್ಮ ಪತ್ರಿಕೆಯ 5ನೇ ವಾಷರ್ಿಕೋತ್ಸವದ ವಿಶೇಷ ಸಂಚಿಕೆಗೆ ಹಟ್ಟಿ ಚಿನ್ನದ ಗಣಿಯ ಪಿತಾಮಹ ಎಲ್.ಸಿ ಕಟರ್ಿಸ್ ಅವರ ಕುರಿತು ಲೇಖನವೊಂದನ್ನು ಬರೆದು ಕೊಟ್ಟದ್ದರು. ಅವರ ಲೇಖನದಿಂದ ಪತ್ರಿಕೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ಸಾಕಷ್ಟು ಸಂದರ್ಭಗಳಲ್ಲಿ ಪತ್ರಿಕೆಯ ಜೊತೆ ಸಕಾರಾತ್ಮಕ ಸಂಬಂಧವನ್ನು ಇಟ್ಟುಕೊಂಡಿದ್ದ ಪಾಟಿಲ್ರನ್ನು ಇಂದು ಬೀಳ್ಕೊಡುತ್ತಿರುವುದು ಬೇಸರವೆನಿಸುತ್ತದೆ.
ಕಂಪೆನಿಯ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಪಾಟೀಲ್ರು ಕೊನೆಗೆ ಕಂಪೆನಯ ಕಾರ್ಯನಿವರ್ಾಹಕ ನಿದರ್ೇಶಕರಾಗಿ, ತಮ್ಮ ನಿವೃತ್ತಿಯ ಹಿಂದಿನ ದಿನ ಕಾಮರ್ಿಕರ ಐತಿಹಾಸಿಕ ವೇತನ ಒಪ್ಪಂದಕ್ಕೆ ಸಹಿ ಹಾಕಿದರು. ಅವರನ್ನು ಬೀಳ್ಕೋಡಲು ಕಂಪೆನಿಯ ಹಲವು ವಿಭಾಗಗಳ ಕಾಮರ್ಿಕರು ಮತ್ತು ಸಂಘದ ಸದಸ್ಯರು ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಅದರಲ್ಲಿ ಪಾಟೀಲರು ತಮ್ಮ ಮನದಾಳದ ಇಂಗಿತವನ್ನು ಬಿಚ್ಚಿಟ್ಟರು. ಕಂಪೆನಿಯನ್ನು ಬಿಟ್ಟುಹೋಗುತ್ತಿರುವುದು ದುಃಖಕರವಾಗಿದ್ದರೂ, ನಾನು ಲಿಂಗಸ್ಗೂರಿನಲ್ಲಿಯೇ ಮನೆ ಮಾಡುತ್ತಿದ್ದೂ, ಸಾಧ್ಯವಾದಾಗಲೆಲ್ಲ ಕಾಮರ್ಿಕರು ನಮ್ಮನ್ನು ಭೇಟಿಯಾಗಿರಿ ಎಂದು ಹೇಳಿದರು.
******
ಹಟ್ಟಿ ಚಿನ್ನದ ಗಣಿ ಕಂಪೆನಿಯ ಕಾಮರ್ಿಕ ಸಂಘದ ಅಧ್ಯಕ್ಷರಾಗಿದ್ದ ಎಸ್.ಎಂ ಶಫೀ ಕೂಡ ಇದೇ 30ರಂದು ನವೃತ್ತಿ ಹೊಂದಿದರು. ಪತ್ರಿಕೆ ಆರಂಭದಿಂದ ಪರಿಚಿತರಾಗಿದ್ದ ಅವರನ್ನು ಕಾಮರ್ಿಕ ಸಂಘದ ವಿಷಯ ಬಂದಾಗ ಅವರ ವಿರುದ್ದ ನೇರಾನೇರ ವರದಿಗಳನ್ನು ಪ್ರಜಾಸಮರ ಮಾಡಿತ್ತು. ವೈಯಕ್ತಿಕವಾಗಿ ಯಾವುದೇ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೂ ಕೂಡ ಸಾಮಾಜಿಕ ದೃಷ್ಟಿಕೋನದಿಂದ ಒಳ್ಳೆಯ ಹೆಸರು ಮಾಡಲು ಪ್ರಯತ್ನಿಸುತ್ತಿರುವದನ್ನು ಮೆಚ್ಚಬಹುದು. ತಮ್ಮದೇ ಅಧ್ಯಕ್ಷತೆಯಲ್ಲಿ ಶಿಕ್ಷಣ ಸಂಸ್ಥೆಯೊಂದನ್ನು ಆರಂಭಿಸಿ, ಸಾಕಷ್ಟು ಬಡಮಕ್ಕಳಿಗೆ ಕಡಿಮೆ ಹಣದಲ್ಲಿ ಶಿಕ್ಷಣವನ್ನು ಕೊಡುವ ಪ್ರಯತ್ನ ಮಾಡಿದ್ದಾರೆ. ಹಟ್ಟಿಯಲ್ಲಿ ಅತ್ಯಂತ ರಿಯಾಯಿತಿ ಹಣದಲ್ಲಿ ಶಿಕ್ಷಣ ಕೊಡುವುದು ನರಸಪ್ಪ ಯಾದವ ಅವರ ವಿನಾಯಕ ಸಂಸ್ಥೆ ಬಿಟ್ಟರೆ, ಎರಡನೇಯದ್ದೇ ಶಫೀಯವರ ಲಿಟಲ್ ಏಂಜೆಲ್ಸ್ ಶಾಲೆ. ಇನ್ನುಳಿದ ಕೆಲವು ಶಾಲೆಗಳಂತೂ ಪಾಲಕರನ್ನು ಕಿತ್ತುಕೊಂಡು ತಿನ್ನಲು ಜಾತಕ ಪಕ್ಷಿಯಂತೆ ಕಾದು ಕುಳಿತಿರುತ್ತವೆ. ಕಂಪೆನಿ, ಇತರೆ ಇಲಾಖೆಗಳ ಸಹಾಯವನ್ನು ಪಡೆದು ಶಾಲೆಯ ಅಭಿವೃದ್ದಿಯನ್ನು ಮಾಡಿದ್ದಾರೆ. (ಶಾಲೆಯ ಬೆಳವಣಿಗೆಗೆ ಇತರೆ ಸದಸ್ಯರು ಕಾರಣರಲ್ಲ ಎಂಬ ಭಾವನೆ ನಮ್ಮದಲ್ಲ. ಆದರೆ, ಯಾವುದೇ ಒಂದು ಬೆಳವಣಿಗೆ ಕ್ರಿಯೆ ನಡೆದಾಗ ಅದರ ಯಶಸ್ಸು ಲಭಿಸುವುದು ಅದನ್ನು ನಡೆಸುವ ಸಾರಥಿಗೆ. ಆ ಕಾರಣಕ್ಕೆ ಇದನ್ನು ಬೇರೆ ರೀತಿಯಲ್ಲಿ ಊಹಿಸುವುದು ತರವಲ್ಲ)
ಆರಂಭದಲ್ಲಿ ಸಣ್ಣದಾಗಿ ಶಫೀ ಯವರು ತೆಗೆದ ಶಾಲೆ ಇಂದು ಹಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ವರ್ಷದಿಂದ ವರ್ಷಕ್ಕೆ ಶಾಲೆಯ ಫಲಿತಾಂಶ ಗಣನೀಯವಾಗಿ ಏರುತ್ತಿದೆ. ಹಾಗೆ ವಿದ್ಯಾಥರ್ಿಗಳ ಸಂಖ್ಯೆಯೂ ಹೆಚ್ಚುತ್ತಿದೆ.
ಕಾಮರ್ಿಕ ಸಂಘದ ಅಧ್ಯಕ್ಷರಾದ ಶಫೀ ಮುಂಗೋಪಿ ಯಾದರೂ, ಕೂಡ ಪತ್ರಿಕೆ ಅವರ ವಿರುದ್ದ ಸಾಕಷ್ಟು ಸುದ್ದಿಗಳನ್ನು ಮಾಡಿದಾಗ ಅದ್ಯಾವುದನ್ನು ಮನಸ್ಸಲ್ಲಿಟ್ಟುಕೊಳ್ಳದೇ, ಪತ್ರಿಕೆಯೊಂದಿಗೆ ಕೆಲವೊಂದು ಸಂದರ್ಭದಲ್ಲಿ ಸಹಕರಿಸಿದ್ದಾರೆ.
ಲಿಂಗರಾಜು ಅವರು ತಂಗಿ ಆ ಶಾಲೆಗೆ ಪ್ರಥಮ ಸ್ಥಾನದಲ್ಲಿ ಬಂದಾಗ ಅತಿಹೆಚ್ಚು ಸಂತೋಷ ಪಟ್ಟದ್ದು ಶಾಲೆಯ ಆಡಳಿತ ಮಂಡಳಿ ಮತ್ತು ಶಫೀ ಎಂದು ಕೇಳಿದಾಗ ಅವರಲ್ಲಿ ಕೂಡ ವೈಯಕ್ತಿಕವಾಗಿ ಪ್ರಜಾಸಮರದ ಮೇಲೆ ಭಿನ್ನಾಭಿಪ್ರಾಯವಿಲ್ಲವೆಂಬುದು ಗೊತ್ತಾಯಿತು.
ವಾರದಲ್ಲಿ ನಾಲ್ಕೈದು ದಿನ ಊರಲ್ಲಿದ್ದರೂ, ತನ್ನ ನೆಟ್ವಕರ್್ನಂದ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳುತ್ತಿದ್ದ ಶಫೀ 30ಕ್ಕೆ ಕೆಲಸದಿಂದ ನವೃತ್ತಿ ಹೊಂದಿದರೂ, ಕಾಮರ್ಿಕ ಸಂಘದ ಅಧ್ಯಕ್ಷರಾಗಿ ಮುಂದುವರೆದಿರುತ್ತಾರೆ.
ಇನ್ನು ಮುಂದಿನ ದಿನಗಳಲ್ಲಿ ಶಫೀಯವರು ಸಾಕಷ್ಟು ಸಮಯವನ್ನು ಸಂಸ್ಥೆಗೆ ಮೀಸಲಿಟ್ಟು ಹಟ್ಟಿಯಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಕೇಂದ್ರವನ್ನಾಗಿ ತಮ್ಮ ಶಾಲೆಯನ್ನು ಮಾಡಲಿ.
******
ಹಟ್ಟಿ ಕಾಮರ್ಿಕರಿಗೆ ಜೂನ್ 29 ಶುಭ ಶುಕ್ರವಾರ. ಯಾಕೆಂದರೆ, ಅಂದು ಕಾಮರ್ಿಕ ಸಂಘ ಮತ್ತು ಆಡಳಿತ ಮಂಡಳಿ, ಕಾಮರ್ಿಕ ಇಲಾಖೆಯ ಪ್ರಾದೇಶಿಕ ಆಯುಕ್ತರ ಮುಂದೆ ಹೊಸ ವೇತನ ಒಪ್ಪಂದಕ್ಕೆ ಸಹಿ ಹಾಕಿದರು. ಆ ವೇತನ ಒಪ್ಪಂದವು ಎಪ್ರಿಲ್ 2011ರಿಂದ ಜಾರಿಗೆ ಬರುತ್ತದೆ. ಕಂಪೆನಿ ಹಾಗೂ ಕಾಮರ್ಿಕ ಸಂಘದ ಮಧ್ಯೆ ಏರ್ಪಟ್ಟ ಈ ಬಾರಿಯ ವೇತನ ಒಪ್ಪಂದವು ಐತಿಹಾಸಿಕ ದಾಖಲೆಯಾಗಿದೆ.
ಶೇ.10ರ ಗಟಿ ದಾಟಲಾಗದ ವೇತನ ಒಪ್ಪಂದವನ್ನು ಕಾಮ್ರೇಡ್ಸ್ ತಮ್ಮ ಶಕ್ತಿ ಸಾಮಥ್ರ್ಯದೊಂದಿಗೆ, ಸತತ 13 ತಿಂಗಳು ಹೋರಾಡಿ, ಇದೀಗ ಶೇ.23ರಷ್ಟುನ್ನು ಕಾಮರ್ಿಕರಿಗೆ ಕೊಡಿಸುವಲ್ಲಿ ಸಫಲರಾಗಿದ್ದಾರೆ. ಶೇ.10ರ ಗಡಿ ದಾಟಬೇಕಾದರೆ, ಸಕರ್ಾರದ ಅನುಮೋದನೆ ಅವಶ್ಯವೆಂದು ಗೊತ್ತಾದಾಗ ಕಂಪೆನಿಯ ವ್ಯವಸ್ಥಾಪಕ ನಿದರ್ೇಶಕರಾದ ಎ.ಕೆ ಮೊನ್ನಪ್ಪ, ಕಾಮರ್ಿಕ ಸಂಘದ ಅರವಿಂದ ಮಳೆಬೆನ್ನೂರು, ಶಫೀ ಒಗ್ಗಟ್ಟಿನಿಂದ ಪ್ರಯತ್ನ ಮಾಡಿ ಸಕರ್ಾರ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾದರು.
ಆದರೆ, ಸಕರ್ಾರ 23 ಪ್ರತಿಶತದ ಹಿಂದೆ ನಾನಾ ಷರತ್ತುಗಳನ್ನು ಹಾಕಿದೆ. ಕಾರಣ ಲಾಭದಲ್ಲಿ ಕಂಪೆನಿ ಇರುವುದರಿಂದ ನಿಮ್ಮ ಲಾಭದಲ್ಲಿ ನಷ್ಟ ಅನುಭವಿಸುತ್ತಿರುವ ಕಂಪೆನಗಳಿಗೆ ಸ್ವಲ್ಪ ಪಾಲು ಕೊಡಿ ಎಂದು ಕೇಳಲಾಗಿದೆ ಎಂದು ಗೊತ್ತಾಗಿದೆ. ಪ್ರತಿನಿತ್ಯ ಕಾಮರ್ಿಕರು ಎಲ್ಲಿ ನೋಡಿದರಲ್ಲಿ ಬರೀ ವೇತನ ಒಪ್ಪಂದದ್ದೇ ಮಾತನಾಡುತ್ತಿದ್ದರು. ಮೊನ್ನೆ ಶುಕ್ರವಾರದಂದು ವೇತನ ಒಪ್ಪಂದಕ್ಕೆ ಸಹಿ ಬೀಳುತ್ತಿದ್ದಂತೆ ಎಲ್ಲರಲ್ಲಿ ಸಂತಸ ಮನೆ ಮಾಡಿದೆ. ಶೇಕಡವಾರು ರೂ.5000ರಷ್ಟು ವೇತನ ಹೆಚ್ಚಳವಾಗುತ್ತಿದ್ದು ಕಾಮರ್ಿಕರು ಅದನ್ನು ಸರಿಯಾದ ಕಾರ್ಯಕ್ಕೆ ವಿನಯೋಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಂಡರೆ ಒಳ್ಳೆಯದು ಎಂದು ಅಭಿಪ್ರಾಯ ಪಡುತ್ತಾರೆ ಕಂಪೆನಿಯ ವ್ಯವಸ್ಥಾಪಕ ನಿದರ್ೇಶಕರಾದ ಎ.ಕೆ ಮೊನ್ನಪ್ಪನವರು. ಜೊತೆಯಲ್ಲಿ ವೇತನ ಒಪ್ಪಂದದ ಬಾಕಿ ಹಣವಾಗಿ ಕಾಮರ್ಿಕರಿಗೆ ಏನಿಲ್ಲವೆಂದರೂ, ಸರಿಯಾಗಿ ಕೆಲಸ ಮಾಡಿದವರಿಗೆ ರೂ.30000ರಷ್ಟು ಬರುತ್ತದೆ ಎಂಬ ಲೆಕ್ಕಾಚಾರ ಈಗಾಗಲೇ ನಡೆದಿದೆ.
ಕಳೆದ ವೇತನ ಒಪ್ಪಂದದಲ್ಲಿ ಕಾಮರ್ಿಕರಿಗೆ ಅನ್ಯಾಯವಾಗಿತ್ತು ಎಂದು ಪ್ರತಿಭಟಿಸಿದ್ದ ಕಾಮ್ರೇಡ್ಸ್ಗಳನ್ನೆಲ್ಲ ಅಂದಿನ ಆಡಳಿತ ಮಂಡಳಿ ಜೈಲಿಗೆ ತಳ್ಳಿತ್ತು. ಲಿಂಗರಾಜು, ಮುನ್ನಭಾಯ್ ಅವರು ಕಳೆದ ವೇತನ ಒಪ್ಪಂದವನ್ನು ವಿರೋಧಿಸಿ ಸಹಿ ಸಂಗ್ರಹ ಚಳವಳಿ ಮಾಡಿದ್ದರು. ಅದಕ್ಕೆ ಎ.ಐ.ಟಿ.ಯು.ಸಿ ಮತ್ತು ದಲಿತ ಸಂಘಟನೆ ಬೆಂಬಲಿಸಿತ್ತು.
ಪ್ರತಿ ಸಾರಿ ವೇತನ ಒಪ್ಪಂದಗಳು ನಡೆದಾಗ ಪರ-ವಿರೋಧಗಳು ನಡೆಯುತ್ತಿದ್ದವು. ಈ ಬಾರಿಯ ವೇತನ ಒಪ್ಪಂದದ ಪ್ರತಿ ಇನ್ನೂ ಕೆಲವು ಕಾಮರ್ಿಕ ಮುಖಂಡರ ಕೈಗೆ ಸಿಗದಿದ್ದರಿಂದ, ಯಾರು ಪ್ರತಿಕ್ರಿಯೆ ನೀಡಲು ಮುಂದೆ ಬರುತ್ತಿಲ್ಲ.
ಇನ್ನುಳಿದ ಅವಧಿಯಲ್ಲಿ ಕಾಮರ್ಿಕ ಸಂಘ ಕಾಮರ್ಿಕರಿಗೆ ವಿಆರ್ಎಸ್, ಮರಣ ಹೊಂದಿದ ಕಾಮರ್ಿಕರ ಮಕ್ಕಳು, ಸಂಬಂಧಿಗಳಿಗೆ ನೌಕರಿ, ಸುಮಾರು ವರ್ಷಗಳಿಂದ ದಿನಗೂಲಿಗಳಾಗಿ ದುಡಿಯುತ್ತಿರುವ ಕಾಮರ್ಿಕರ ಖಾಯಂಮಾತಿ ಹಾಗೂ ಕಾಮರ್ಿಕರಿಗೆ ಸಿಗಬಹುದಾದ ಅನೇಕ ಸವಲತ್ತುಗಳನ್ನು ಕೊಡಿಸಿ, ಕಾಮರ್ಿಕರ ಏಳಿಗೆಗಾಗಿ ಶ್ರಮಿಸಲಿ ಎಂದು ಪತ್ರಿಕೆ ಹಾರೈಸುತ್ತದೆ.

ಬದಲಾಗುತ್ತಿರುವ ವೃತ್ತಿಯ ಚಕ್ರವ್ಯೂಹದಲ್ಲಿ ಪತ್ರಕರ್ತ


ನಾಲ್ಕು ದಿಕ್ಕುಗಳಿಂದಲೂ ದಾಳಿ ನಡೆಯುತ್ತಿದೆ, ಪತ್ರಕರ್ತ ಯುದ್ಧಭೂಮಿಯ ಚಕ್ರವ್ಯೂಹ ದಲ್ಲಿದ್ದಾನೆ. ಭ್ರಷ್ಟ, ಅಪ್ರಾಮಾಣಿಕ,  ಸ್ವಾಥರ್ಿ, ...ಇತ್ಯಾದಿ ಟೀಕಾಸ್ತ್ರಗಳು ಆತನನ್ನು ಒಂದೇ ಸಮನೆ ಇರಿಯುತ್ತಿವೆ.
ವೈಯಕ್ತಿಕ ನೆಲೆಯಲ್ಲಿ ಈ ಆರೋಪಗಳನ್ನು ನಿರಾಕರಿಸಬಹುದಾದರೂ ತಾವು ಭಾಗವಾಗಿರುವ ಇಡೀ ಸಮುದಾಯವನ್ನು ಸಮಥರ್ಿಸಿಕೊಳ್ಳುವ ಸ್ಥಿತಿಯಲ್ಲಿ ಆತನೂ ಇಲ್ಲ.
ಹೆಚ್ಚೆಂದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿರೋಧಪಕ್ಷದ ನಾಯಕರನ್ನು ಉಡಾಫೆಯಿಂದ ಕೇಳಿದಂತೆ ನವೇನು ಸಾಚಾನಾ? ಎಂದು ಪ್ರಶ್ನಿಸಿ ಬಾಯಿಮುಚ್ಚಿಸಬಹುದು.
ಎಲ್ಲ ವೃತ್ತಿಗಳಂತೆ ಪತ್ರಿಕೆಗಳಲ್ಲಿಯೂ ಒಂದಷ್ಟು ಕಪ್ಪುಕುರಿಗಳು ಹಿಂದೆಯೂ ಇದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಉಳಿದವರನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವಷ್ಟರ ಮಟ್ಟಿಗೆ ಈ ಕಪ್ಪುಕುರಿಗಳ ಸಂಖ್ಯೆ ಬೆಳೆಯುತ್ತಿದೆ. ಪತ್ರಕರ್ತನ ಆದರ್ಶದ ಹಾದಿ ತಪ್ಪಿದ್ದೆಲ್ಲಿ?
ಪತ್ರಕರ್ತನದ್ದು ಏಕವ್ಯಕ್ತಿ ಪ್ರದರ್ಶನ ಅಲ್ಲ, ಸಾಮೂಹಿಕ ಪ್ರಯತ್ನದ ಮೂಲಕವೇ ಪತ್ರಿಕೆ ರೂಪುಗೊಳ್ಳುವುದು. ಬದಲಾಗುತ್ತಿರುವ ಈ ಸಮೂಹವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾದರೆ ಮಾತ್ರ ಪತ್ರಕರ್ತರಲ್ಲಿನ ಬದಲಾವಣೆಯನ್ನೂ ಅರ್ಥಮಾಡಿಕೊಳ್ಳಲು ಸಾಧ್ಯ. ಪತ್ರಕರ್ತರ ತಲೆಮೇಲೆ ಆತನ ಮಾಲೀಕರಿರುತ್ತಾರೆ, ಕಣ್ಣೆದುರಿನಲ್ಲಿ ಪತ್ರಿಕೆಯ ಓದುಗರಿರುತ್ತಾರೆ, ಅಕ್ಕಪಕ್ಕದಲ್ಲಿ ಸಹೋದ್ಯೋಗಿಗಳಿರುತ್ತಾರೆ, ಬೆನ್ನಹಿಂದೆ ಕಟ್ಟಿಕೊಂಡ ಸಂಸಾರ ಇರುತ್ತದೆ, ಇವುಗಳ ಮಧ್ಯೆ ಆತ ಇರುತ್ತಾನೆ, ಆತನೊಳಗೆ ಸದಾ ಪ್ರಶ್ನಿಸುವ, ಎಚ್ಚರಿಸುವ, ಕುಟುಕುವ, ಬುದ್ಧಿಹೇಳುವ ಆತ್ಮಸಾಕ್ಷಿ ಇರುತ್ತದೆ.
ಮುಖ್ಯವಾಗಿ ಆಥರ್ಿಕ ಉದಾರೀಕರಣ ಮತ್ತು ಜಾಗತೀಕರಣ ಯುಗ ಪ್ರಾರಂಭವಾದ ನಂತರದ ಎರಡು ದಶಕಗಳಲ್ಲಿ ಪತ್ರಕರ್ತನ ಸುತ್ತಮುತ್ತ ಇರುವ ಈ ಎಲ್ಲ ಪಾತ್ರಧಾರಿಗಳು ಗುರುತಿಸಲಾಗದಷ್ಟು ಬದಲಾಗಿ ಹೋಗಿದ್ದಾರೆ. ಬದಲಾಗುತ್ತಲೇ ಇರುವ ಈ ಪಾತ್ರಧಾರಿಗಳ ಒತ್ತಡಗಳ ನಡುವೆ ಪತ್ರಕರ್ತ ತನ್ನ ಆತ್ಮಸಾಕ್ಷಿಯ ಕರೆಗೆ ಓಗೊಡುತ್ತಾ ಕೆಲಸಮಾಡಬೇಕಾಗಿದೆ.
ಮೊದಲನೆಯದಾಗಿ  ಮಾಲೀಕ ವರ್ಗ.  169 ವರ್ಷಗಳ ಹಿಂದೆ ಕಲ್ಲಚ್ಚನ್ನು ಕೊರೆದು ಅಚ್ಚುಮೊಳೆ ಮಾಡಿ ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಿಸಿದ ಹೆರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್ನ ಕಾಲದಿಂದ ಪತ್ರಿಕಾವೃತ್ತಿ ಬಹುದೂರ ಸಾಗಿ ಬಂದಿದೆ. ನಿಧಾನವಾಗಿ ವಾಣಿಜ್ಯೀಕರಣಗೊಳ್ಳುತ್ತಾ ಬಂದ ಈ ವೃತ್ತಿ ಈಗ ಪೂರ್ಣಪ್ರಮಾಣದ ಉದ್ಯಮವಾಗಿ ಪರಿವರ್ತನೆಗೊಂಡಿದೆ.
ಬದಲಾದ ಪರಿಸ್ಥಿತಿಯಲ್ಲಿ ಹೊಸ ಆಟಗಾರರು ಮೈದಾನ ಪ್ರವೇಶ ಮಾಡಿದ್ದಾರೆ, ಆಟ ಬದಲಾದಾಗ ಅದರ ನಿಯಮಾವಳಿಗಳೂ ಬದಲಾಗುತ್ತವೆ. ಹಳೆಯ ಆಟಗಾರರು ಹಳೆಯ ನಯಮಗಳ ಪ್ರಕಾರವೇ ಆಡುತ್ತೇನೆಂದು ಹೊರಟರೆ ಮೈದಾನದಿಂದ ಹೊರಬೀಳಬೇಕಾಗುತ್ತದೆ. ಉದ್ಯಮವನ್ನು ಸಮಾಜ ಸೇವಾ ಸಂಸ್ಥೆಯ ರೀತಿಯಲ್ಲಿ ನಡೆಸಿಕೊಂಡು ಹೋಗಲಾಗುವುದಿಲ್ಲ, ಅಂತಹ ದುಸ್ಸಾಹಸ ಮಾಡಿದವರು  ದಿವಾಳಿಯಾಗಬೇಕಾಗುತ್ತದೆ.
ಉದ್ಯಮದ ರೂಪ ಪಡೆದ ನಂತರ ಮಾಧ್ಯಮದ ಕಚೇರಿಯೊಳಗಿನ ಸಂಪಾದಕೀಯ ಮತ್ತು ಜಾಹೀರಾತು ವಿಭಾಗಗಳ ನಡುವಿನ ಗೆರೆ  ತೆಳ್ಳಗಾಗುತ್ತಿದೆ.  ಮುದ್ರಣ ವೆಚ್ಚಕ್ಕೆ ಅನುಗುಣವಾಗಿ ಪತ್ರಿಕೆಯ ಮುಖಬೆಲೆಯನ್ನು, ಮಾರುಕಟ್ಟೆಯಲ್ಲಿನ ಪೈಪೋಟಿಯಿಂದಾಗಿ ಹೆಚ್ಚಿಸಲಾರದ ಮಾಲೀಕರು  ಜಾಹೀರಾತುದಾರರನ್ನು ಹೆಚ್ಚುಹೆಚ್ಚು ಅವಲಂಬಿಸಬೇಕಾಗಿದೆ.
ಈ ಅಸಹಾಯಕತೆಯನ್ನು ಬಳಸಿಕೊಂಡು ಜಾಹೀರಾತು ನೀಡುವ ಉದ್ಯಮಗಳು ಮಾಧ್ಯಮಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸುತ್ತಿವೆ. ಈ ವ್ಯವಸ್ಥೆ ಮಾಧ್ಯಮರಂಗವನ್ನು ಸದಾ ಉದ್ಯಮಿಗಳು ಮತ್ತು ಸಕರ್ಾರದ ಋಣಭಾರದಲ್ಲಿರುವಂತೆ ಮಾಡಿದೆ.
ಈ ಅನಾರೋಗ್ಯಕಾರಿ ವಾತಾವರಣದಲ್ಲಿಯೇ ಕಾಸಿಗಾಗಿ ಸುದ್ದಿಯಂತಹ ಲಾಲಸೆ, ರಾಡಿಯಾ ಟೇಪ್ನಂತಹ ವೃತ್ತಿದ್ರೋಹಗಳು ಹುಟ್ಟಿಕೊಂಡಿರುವುದು.  ಪತ್ರಿಕೋದ್ಯಮ  ಅತ್ತ ಪೂರ್ಣಪ್ರಮಾಣದಲ್ಲಿ ಉದ್ಯಮವಾಗಿಯೂ ಬೆಳೆಯದೆ, ಇತ್ತ ಆದರ್ಶ ವೃತ್ತಿಯಾಗಿಯೂ ಉಳಿಯದೆ ತ್ರಿಶಂಕು ಸ್ಥಿತಿಯಲ್ಲಿದೆ. ಇದನ್ನು ಓದುಗರಿಗೆ ಅರ್ಥಮಾಡಿಕೊಡಲು ಪತ್ರಿಕೆಯ ಮಾಲೀಕರಿಗೂ ಸಾಧ್ಯವಾಗಿಲ್ಲ.
ವೃತ್ತಿಯಿಂದ ಉದ್ಯಮವಾಗಿ ಬದಲಾವಣೆಗೊಂಡ ಈ ಕ್ಷೇತ್ರಕ್ಕೆ ಈಗ ರಾಜಕಾರಣಿಗಳು ಪ್ರವೇಶಿಸುತ್ತಿದ್ದಾರೆ. ಕನರ್ಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರಗಳ ಬಹುತೇಕ ಟಿವಿ ಚಾನೆಲ್ಗಳು ರಾಜಕಾರಣಿಗಳ ಒಡೆತನದಲ್ಲಿವೆ, ಪತ್ರಿಕೆಗಳು ಕೂಡಾ ಇದಕ್ಕೆ ಹೊರತಲ್ಲ.
ಇದು ಉದ್ಯಮಿಗಳ ಪ್ರವೇಶಕ್ಕಿಂತಲೂ ಅಪಾಯಕಾರಿ ಬೆಳವಣಿಗೆ. ಜನಾಭಿಪ್ರಾಯವೇ ಪ್ರಜಾಪ್ರಭುತ್ವದ ಬುನಾದಿ. ರಾಜಕಾರಣಿಗಳ ಒಡೆತನದಲ್ಲಿರುವ ಮಾಧ್ಯಮಗಳು ತಮಗೆ ಅನುಕೂಲವಾಗುವ ರೀತಿಯಲ್ಲಿ ಜನಾಭಿಪ್ರಾಯವನ್ನೇ ಉತ್ಪಾದಿಸುವ ಪ್ರಯತ್ನ ನಡೆಸಿವೆ. ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಸಾವಿನ ನಂತರ ಅವರ ಒಡೆತನದ ಟಿವಿಚಾನೆಲ್ ಸೃಷ್ಟಿಸಿದ್ದ ಸಮೂಹ ಸನ್ನಿ ಇದಕ್ಕೆ ಉತ್ತಮ ಉದಾಹರಣೆ. ತಮಿಳುನಾಡು, ಕನರ್ಾಟಕಗಳು ಇದರಲ್ಲಿ ಹಿಂದೆ ಬಿದ್ದಿಲ್ಲ.
ಪತ್ರಿಕಾಮಂಡಳಿಯ ಏರ್ಕಂಡೀಷನ್ ಕಚೇರಿಯೊಳಗೆ ಕೂತಿರುವ ಅದರ ಅಧ್ಯಕ್ಷ ನ್ಯಾಯಮೂತರ್ಿ ಮಾರ್ಕಂಡೇಯ ಖಟ್ಜು ಅವರಂತೆ ಐಶ್ಚರ್ಯ ರೈ ಅವರಿಗೆ ಮಗು ಹುಟ್ಟಿದ್ದನ್ನು ದೊಡ್ಡ ಸುದ್ದಿ ಮಾಡುವ ಮಾಧ್ಯಮಗಳಿಗೆ, ಪೋಷಕಾಂಶಗಳ ಕೊರತೆಯಿಂದ ಸಾಯುತ್ತಿರುವ ಮಕ್ಕಳು ಸುದ್ದಿಯೇ ಅಲ್ಲ ಎಂದು ಚುಚ್ಚುವುದು ಸುಲಭ. ಆದರೆ ವಾಸ್ತವ ಬೇರೆಯಾಗಿದೆ.
ಐಶ್ಚರ್ಯರೈ ಕನಿಷ್ಠ ಒಂದು ಡಜನ್ ಉತ್ಪನ್ನಗಳಿಗೆ ಮಾಡೆಲ್, ಆಕೆಯ ಸುದ್ದಿ ಪ್ರಕಟಿಸಿದರೆ ಜಾಹೀರಾತು ಬರುತ್ತದೆ, ಬಡ ಮಕ್ಕಳ ಬಗ್ಗೆ ಬರೆದರೆ ಏನು ಸಿಗುತ್ತದೆ? ಇನ್ನೂ ಉಳಿದುಕೊಂಡಿರುವ ಒಂದಷ್ಟು ಸಹೃದಯಿಗಳು ಅಯ್ಯ ಪಾಪ  ಎಂದು ಉದ್ಗರಿಸಬಹುದು ಅಷ್ಟೆ.
ಇಂತಹ ಸ್ಥಿತಿಗೆ ಮಾಧ್ಯಮಕ್ಷೇತ್ರವನ್ನು ತಳ್ಳಿದ ವ್ಯವಸ್ಥೆಯನ್ನು ಬದಲಾವಣೆ ಮಾಡುವ ಬಗೆಯ ಬಗ್ಗೆ ನ್ಯಾ.ಖಟ್ಜು ಯೋಚನೆ ಮಾಡಿದರೆ ಅವರು ಬಯಸುವಂತೆ ಪತ್ರಿಕೆಗಳು,ಟಿವಿಚಾನೆಲ್ಗಳು ವರದಿ ಮಾಡಲು ಸಾಧ್ಯವಾಗಬಹುದು.
ಎರಡನೆಯದಾಗಿ ಪತ್ರಕರ್ತನ ಮುಂದಿರುವ ಓದುಗರು ಮತ್ತು ಟಿವಿ ವೀಕ್ಷಕರು. ಪ್ರಜ್ಞಾವಂತ ಓದುಗರೇ ಪತ್ರಿಕೆಯ ಶಕ್ತಿ, ಅಂತಹವರನ್ನೊಳಗೊಂಡ ಜಾಗೃತ ಸಮಾಜದಲ್ಲಿ ಮಾತ್ರ ಪತ್ರಿಕೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯ.
ಶಿಕ್ಷಣ, ಸಂಪರ್ಕ ಮತ್ತು ಆಥರ್ಿಕ ಅಭಿವೃದ್ಧಿಯಿಂದಾಗಿ 2-3ದಶಕಗಳ ಹಿಂದಿನ ಓದುಗರಿಗಿಂತ ಈಗಿನವರು ಹೆಚ್ಚು ಪ್ರಜ್ಞಾವಂತರು. ಟಿವಿಚಾನೆಲ್ಗಳು ಹಳ್ಳಿಮನೆಗಳನ್ನೂ ಪ್ರವೇಶಿಸಿದ ನಂತರ ಅನಕ್ಷರಸ್ಥರು ಕೂಡಾ  ಸಮಕಾಲೀನ ವಿದ್ಯಮಾನಗಳನ್ನು ನೋಡಿ, ಕೇಳಿ ತಿಳಿದುಕೊಳ್ಳಬಲ್ಲರು.
ಮಾಧ್ಯಮಗಳ ನಡುವಿನ ಪೈಪೋಟಿಯಿಂದಾಗಿ ಯಾವುದೇ ಪತ್ರಿಕೆ ಇಲ್ಲವೇ ಟಿವಿಚಾನೆಲ್ ಯಾವ ಸುದ್ದಿಯನ್ನೂ ಬಚ್ಚಿಡುವ ಸ್ಥಿತಿಯಲ್ಲಿ ಇಲ್ಲ. ಒಬ್ಬರು ಬಚ್ಚಿಟ್ಟರೆ ಇನ್ನೊಬ್ಬರು ಬಿಚ್ಚಿಡುತ್ತಾರೆ, ಒಟ್ಟಿನಲ್ಲಿ ಎಲ್ಲವೂ ಬಟಾಬಯಲು. ಆದರೆ ಈ ಜನಜಾಗೃತಿಯ ಪ್ರತಿಬಿಂಬ ಓದುಗ ಸಮುದಾಯದ ನೀತಿ-ನಿಧರ್ಾರಗಳಲ್ಲಿ ಹುಡುಕಲು ಹೊರಟರೆ ನಿರಾಶೆಯಾಗುತ್ತದೆ.
ಇದಕ್ಕೆ ಉತ್ತಮ ಉದಾಹರಣೆ ರಾಜ್ಯದ ಬಿಜೆಪಿ ನಡೆಸಿದ ಆಪರೇಷನ್ ಕಮಲದ ನಂತರದ ಬೆಳವಣಿಗೆಗಳು. ಪಕ್ಷಾಂತರ ಮಾಡಿದ ಶಾಸಕರು ಯಾವ ಆಮಿಷಕ್ಕೆ ಬಲಿಯಾಗಿದ್ದರು ಎನ್ನುವುದನ್ನು ಎಲ್ಲ ಮಾಧ್ಯಮಗಳು ಕೂಗಿಕೂಗಿ ಹೇಳಿದ್ದವು. ಆ ಶಾಸಕರ ಬಗ್ಗೆ ಮತದಾರರಿಗೆ ಸಂಪೂರ್ಣ ಮಾಹಿತಿ ಇತ್ತು.
ಹೀಗಿದ್ದರೂ ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಅವರು ಮತ್ತೆ ಅದೇ ಪಕ್ಷಾಂತರಿ ಶಾಸಕರನ್ನು ಉಪಚುನಾವಣೆಯಲ್ಲಿ ಆರಿಸಿಕಳುಹಿಸುತ್ತಾರೆ. ವಿಜ್ಞಾನದ ಪದವೀಧರರೇ ಟಿವಿ ಚಾನೆಲ್ಗಳಲ್ಲಿ ಕಾಣಿಸಿಕೊಳ್ಳುವ ಜ್ಯೋತಿಷಿ-ಬಾಬಾಗಳ ಮುಂದೆ ಬಾಯಿಬಿಟ್ಟು ಕೂತಿರುತ್ತಾರೆ, ಎಂಜಲೆಲೆಯ ಮೇಲೆ ಉರುಳಾಡುತ್ತಿರುತ್ತಾರೆ.
ಸ್ವಜಾತಿ ರಾಜಕಾರಣಿಯ ಪರ ವಾದಕ್ಕೆ ನಲ್ಲುತ್ತಾರೆ. ಪತ್ರಿಕೆ ಜನಪರವಾಗಿರಬೇಕೆಂದು ಬೋಧನೆ ಮಾಡುವ ಈ ಓದುಗರು ಮಾರುಕಟ್ಟೆಯಲ್ಲಿ ಇನ್ನೊಂದು ಪತ್ರಿಕೆ ಎಂಟಾಣೆ ಕಡಿಮೆಮಾಡಿದರೆ ಆ ಕಡೆ ಓಡುತ್ತಾರೆ.
ಅನೈತಿಕ ಪೈಪೋಟಿಯ ದರ ಸಮರ ಅಂತಿಮವಾಗಿ ಜನರ ಜತೆಯಲ್ಲಿರಬೇಕಾದ ಪತ್ರಿಕೆಯನ್ನು ಜಾಹೀರಾತುದಾರರ ಕಾಲಬುಡಕ್ಕೆ ಕೊಂಡೊಯ್ದು ಅಡ್ಡಬೀಳಿಸುತ್ತದೆ ಎನ್ನುವುದು ಅವರಿಗೆ ಅರ್ಥವಾಗುವುದಿಲ್ಲ. ಹತ್ತು ರೂಪಾಯಿ ಉತ್ಪಾದನಾವೆಚ್ಚದ ಪತ್ರಿಕೆ ಏಳು ರೂಪಾಯಿ ಕೊಡುವ ಜಾಹಿರಾತುದಾರರ ಬದಲಿಗೆ ಮೂರು ರೂಪಾಯಿಯನ್ನಷ್ಟೇ ಕೊಡುವ ಓದುಗನಗೆ ಹೇಗೆ ನಿಷ್ಠೆಯಿಂದಿರಲು ಸಾಧ್ಯ?
ಮೂರನೆಯದಾಗಿ ಅಕ್ಕಪಕ್ಕದಲ್ಲಿರುವ ಸಹೋದ್ಯೋಗಿಗಳು.
25 ವರ್ಷಗಳ ಹಿಂದೆ ನನ್ನಂತಹವರು ಈ ವೃತ್ತಿ ಪ್ರವೇಶಿಸಿದಾಗ ಪ್ರಾಮಾಣಿಕತೆ ಮತ್ತು ವೃತ್ತಿನಷ್ಠೆಯನ್ನು ಪಾಲಿಸುವುದು ದೊಡ್ಡ ಸವಾಲು ಆಗಿರಲೇ ಇಲ್ಲ. ರಾತ್ರಿಪಾಳಿ ಮುಗಿಸಿ ಪ್ರೆಸ್ನಲ್ಲಿಯೇ ನ್ಯೂಸ್ಪ್ರಿಂಟ್ ಎಳೆದುಕೊಂಡು ಮಲಗಿದಾಗ, ಪಕ್ಕದಲ್ಲಿ ಹಾಗೆಯೇ ಮಲಗಿದ್ದ ಹತ್ತು ಮಂದಿ ಸಹೋದ್ಯೋಗಿಗಳಿರುತ್ತಿದ್ದರು.
ಕ್ಯಾಂಟೀನ್ನಲ್ಲಿ ಸಾಲ ಕೇಳಲು ಮುಜುಗರ ಆಗುತ್ತಿರಲಿಲ್ಲ, ಯಾಕೆಂದರೆ ಸಾಲದ ಪಟ್ಟಿಯಲ್ಲಿ ಆಗಲೇ ಸಹೋದ್ಯೋಗಿಗಳ ಹೆಸರುಗಳು ರಾರಾಜಿಸುತ್ತಿರುತ್ತಿತ್ತು. ಆದರೆ ಕಾಲ ತ್ವರಿತ ಗತಿಯಲ್ಲಿ ಬದಲಾಗಿ ಹೋಗಿದೆ.
ಕಳೆದ ಹತ್ತು ವರ್ಷಗಳಲ್ಲಿ ಕಡಿಮೆಯಾಗುತ್ತಿರುವ ಜಾಹೀರಾತು ಮತ್ತು ಏರುತ್ತಿರುವ ಉತ್ಪಾದನಾ ವೆಚ್ಚದಿಂದಾಗಿ ಪತ್ರಿಕಾ ಸಂಸ್ಥೆಗಳು, ಟಿವಿ ಚಾನೆಲ್ಗಳು ನರೀಕ್ಷಿತ ರೀತಿಯಲ್ಲಿ ಲಾಭ ಗಳಿಸಲಾಗುತ್ತಿಲ್ಲ. ಆದರೆ ಅವುಗಳಲ್ಲಿ ಕೆಲಸ ಮಾಡುವ ಕೆಲವು ಉದ್ಯೋಗಿಗಳ ಶ್ರಿಮಂತಿಕೆ ಏರುತ್ತಲೇ ಇದೆ.
ಆದಾಯ ಮೀರಿದ ಆಸ್ತಿಗಳಿಸಿದ ಆರೋಪ ಸಕರ್ಾರಿ ನೌಕರರ ಮೇಲೆ ಮಾತ್ರವಲ್ಲ ಕೆಲವು ಪತ್ರಕರ್ತರ ಮೇಲೂ ಇದೆ. ನೌಕರರ ಮನೆ ಮೇಲೆ ದಾಳಿ ನಡೆಸುವ ಲೋಕಾಯುಕ್ತರು ಪತ್ರಕರ್ತರ ಮೇಲೂ ನಡೆಸಬಹುದಲ್ಲವೇ ಎಂದು ಜನ ಕೇಳುತ್ತಿರುವುದು ಇದೇ ಕಾರಣಕ್ಕೆ.
ಇಂತಹ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಬದುಕಬೇಕೆನ್ನುವವರು ಬದುಕುವ ಕಲೆ ಗೊತ್ತಿಲ್ಲದ ಹುಚ್ಚರು ಎಂದು ಅನಸಿಕೊಳ್ಳುತ್ತಾರೆ ಅಷ್ಟೆ. ಭ್ರಷ್ಟರಾಗುವುದಕ್ಕೆ ಸಮರ್ಥನೆಗಳನ್ನು ಹುಡುಕಿಕೊಂಡು ಹೊರಟರೆ ಊರೆಲ್ಲ ಉದಾಹರಣೆಗಳು ಸಿಗುತ್ತವೆ. ಪ್ರಾಮಾಣಿಕವಾಗಿ ಉಳಿಯಬಯಸುವ ಪತ್ರಕರ್ತ ಸಮರ್ಥನೆಗಳನ್ನು ತನ್ನೊಳಗೆ ಹುಡುಕಬೇಕು. ಇಡೀ ಜಗತ್ತು ಭ್ರಷ್ಟಗೊಂಡರೂ ನಾನು ಭ್ರಷ್ಟನಾಗಲಾರೆ ಎಂಬ ತೀಮರ್ಾನಕ್ಕೆ ಬರಲು ಆತನಗೆ ಸಾಧ್ಯವಾಗಬೇಕು.
ಕೊನೆಯದಾಗಿ ಪತ್ರಕರ್ತ ಬೆನ್ನಗೆ ಕಟ್ಟಿಕೊಂಡ ಸಂಸಾರ.  ಈತ ಒಂದು ಆದರ್ಶ ವೃತ್ತಿಯಲ್ಲಿದ್ದಾನೆ ಎನ್ನುವ ಕಾರಣಕ್ಕೆ ಯಾರೂ ಮನೆಬಾಡಿಗೆ ಕಡಿಮೆ ಮಾಡುವುದಿಲ್ಲ, ಕಿರಾಣಿ ಅಂಗಡಿಯವ ಪುಕ್ಕಟೆಯಾಗಿ ಅಕ್ಕಿ-ಬೇಳೆ ತಂದುಹಾಕುವುದಿಲ್ಲ. ಈತನ ಮನೆಯ ಒಂದು ಪಕ್ಕದಲ್ಲಿ ಇನ್ಫೋಸಿಸ್ನ ಉದ್ಯೋಗಿ ಇರುತ್ತಾನೆ, ಇನ್ನೊಂದು ಪಕ್ಕದಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಇರುತ್ತಾನೆ.
ಪ್ರತಿಯೊಬ್ಬನ ಸಂಸಾರದ ಬಹುಪಾಲು ಬೇಕುಬೇಡಗಳು ನೆರೆಹೊರೆಯವರನ್ನು ನೋಡಿಯೇ ನಧರ್ಾರವಾಗುವುದು. ಆಧುನಕ ಬದುಕಿನಲ್ಲಿ ಬಹುಪಾಲು ಗಳಿಕೆ ವ್ಯಯವಾಗುತ್ತಿರುವುದು ಸಾಮಾಜಿಕವಾದ ಹುಸಿ ಸ್ಥಾನಮಾನವನ್ನು ಕಾಯ್ದುಕೊಂಡು ಹೋಗುವ ವ್ಯಸನಕ್ಕಾಗಿ. ಇದನ್ನು ಮೀರಿಹೋಗುವ ಇಲ್ಲವೇ ಬದಲಾಯಿಸುವ ಶಕ್ತಿ ಪತ್ರಕರ್ತರಲ್ಲಿಯೂ ಇಲ್ಲ.
ಇವೆಲ್ಲವನ್ನೂ ಯೋಚನೆ ಮಾಡುತ್ತಾ ಹೋದರೆ ಈ ವೃತ್ತಿ ಸಾಕಪ್ಪ ಸಾಕು ಎಂಬ ತೀಮರ್ಾನಕ್ಕೆ ಬರಲು ಹತ್ತು ಕಾರಣಗಳು ಸುಲಭದಲ್ಲಿ ಸಿಗುತ್ತವೆ, ಆದರೆ ಪತ್ರಿಕೆಯನ್ನು ಬಿಡಿಸಿಕೊಂಡು ಕೂತರೆ ಇದೇ ವೃತ್ತಿಯಲ್ಲಿ ಮುಂದುವರಿಯಲು ನೂರು ಕಾರಣಗಳು ಪುಟಪುಟಗಳಲ್ಲಿ ಸಿಗುತ್ತವೆ.
ಸಮಾಜ ಎಷ್ಟೇ ಕೆಟ್ಟುಹೋದರೂ ಪ್ರಾಮಾಣಿಕರಿಗೆ, ಮಾನವಂತರಿಗೆ ಬದುಕಲು ಜಾಗ ಇದ್ದೇ ಇರುತ್ತದೆ.  ಅದೇ ರೀತಿ ಮಾಧ್ಯಮ ಕ್ಷೇತ್ರ ಎಷ್ಟೇ ಕೆಟ್ಟುಹೋದರೂ ಜನಪರ ಪತ್ರಿಕೋದ್ಯಮಕ್ಕೆ ಜಾಗ ಇದ್ದೇ ಇರುತ್ತದೆ. ಅದು ಸ್ವಲ್ಪ ಕಡಿಮೆಯಾಗಿರಬಹುದು ಅಷ್ಟೆ.
ಉದ್ಯಮವಾದ ವೃತ್ತಿ, ಬದಲಾಗಿ ಹೋಗಿರುವ ಓದುಗರು, ಸಹೋದ್ಯೋಗಿಗಳು, ಸಂಸಾರದ ಒತ್ತಡದ ನಡುವೆಯೂ ವೃತ್ತಿನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆನ್ನುವವರಿಗೆ  ಅವಕಾಶ ಇದೆ.
ಸಮಸ್ಯೆ ಅವಕಾಶದ್ದು ಅಲ್ಲವೇ ಅಲ್ಲ, ಅದನ್ನು ಬಳಸಿಕೊಳ್ಳುವ ಪತ್ರಕರ್ತರದ್ದು. ಹಳ್ಳಿಗಳಿಗೆ ಹೋಗಿ ಬರಪರಿಸ್ಥಿತಿಯ ವರದಿ ಮಾಡಿಕೊಂಡು ಬರುತ್ತೇನೆ ಎಂದೋ, ಮಲದ ಗುಂಡಿಗೆ ಬಿದ್ದು ಸಾಯುತ್ತಿರುವ ಪೌರಕಾಮರ್ಿಕರ ಬಗ್ಗೆ ಬರೆಯುತ್ತೇನೋ ಎಂದೋ ಒಬ್ಬ ವರದಿಗಾರ ಆಸಕ್ತಿ ತೋರಿದರೆ ಸಾಮಾನ್ಯವಾಗಿ ಯಾವ ಸಂಪಾದಕರೂ ಬೇಡ ಎಂದು ಹೇಳಲಾರರು.
ಆ ರೀತಿಯ ಆಸಕ್ತಿಯನ್ನು ತೋರಿಸುವ ಪತ್ರಕರ್ತರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕದ ಬೆಳವಣಿಗೆ.

ಪತ್ರಿಕೆ ಎಂದರೆ, ಸಂಬಂಧವೇ ಇಲ್ಲದವರ ಸಾಮ್ರಾಜ್ಯ


ಪತ್ರಕರ್ತರು ಅಂದರೆ ಎಲ್ಲವನ್ನೂ ತಿಳಿದುಕೊಂಡವರು, ಪ್ರಾಮಾಣಿಕತೆಗೆ ಹೆಸರಾದವರು, ಜನರ ಬಗ್ಗೆ ವಿವೇಚಿಸುವವರು, ವ್ಯವಸ್ಥೆ ದೋಷ ನಿವಾರಿಸುವ ಪ್ರಯತ್ನದಲ್ಲಿ ತೊಡಗುವವರು, ಭಷ್ಟ ರಾಜಕಾರಣಿ, ಅಧಿಕಾರಿಗಳೊಂದಿಗೆ, ರಾಜಿಯಾಗದ ವರು ಎಂಬೆಲ್ಲಾ ವಿಶೇಷತೆಗಳೊಂದಿಗೆ ಜನರು ಅವರನ್ನು ಗೌರವಿಸುತ್ತಾರೆ. ಬಹುಪಾಲು ಜನರಿಗೆ ಈಗಲೂ ಅದೇ ಭಾವನೆ, ಗೌರವ ಇದೆ. ಪತ್ರಿಕೆಗಳು ಅಂದ ತಕ್ಷಣ ಜನರಲ್ಲಿ ಏನೋ ಒಂದು ರೀತಿಯ ಭೀತಿ ಜಾಗೃತವಾಗುತ್ತದೆ. ಆದರೆ, ಪತ್ರಕರ್ತರು ಅಥವಾ ಪತ್ರಿಕೆಗಳು ಮಾತ್ರ ಜನರ ಭಾವನೆಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಅದಕ್ಕೆ ಹಲವಾರು ಕಾರಣ ನೀಡಬಹುದು. ವಾಗ್ವಾದಕ್ಕಿಳಿಯಬಹುದು. ಆದರೆ, ಪತ್ರಿಕಾಧರ್ಮ ಉಳಿಸಲು ಕಷ್ಟವೆನಿಸಿದರೆ ಆ ಕೆಲಸಕ್ಕೆ ಕೈ ಹಾಕುವುದಾದರೂ ಏತಕ್ಕೆ? ಹಣ ಮಾಡುವ ಬೇರೆ ದಂಧೆಯನ್ನು ನೆಚ್ಚಿಕೊಳ್ಳಬಹುದಲ್ಲ ಎಂಬ ಪ್ರಶ್ನೆಗೆ ಉತ್ತರ ಸುಲಭ.
ಕಾಯರ್ಾಂಗ ಮತ್ತು ರಾಜಕಾರಣ ಸಂಪೂರ್ಣ ವಾಗಿ ಭ್ರಷ್ಟಗೊಂಡಿರುವುದು, ಜನರ ಪರವಾಗಿ ಕೆಲಸ ಮಾಡಬೇಕಾದ ಪತ್ರಿಕೆಗಳು ಈ ಎರಡೂ ರಂಗಗಳ ತಪ್ಪನ್ನು ಪ್ರಶ್ನಿಸುವ ಅಧಿಕಾರ ಪಡೆದಿರುವುದು ಪ್ರಶ್ನೆಗೆ ಉತ್ತರವಾಗಿದೆ. ಭ್ರಷ್ಟ ಅಧಿಕಾರಿ ಹಾಗೂ ರಾಜಕಾರಣಿಯ ಊಟದೆಲೆಯಲ್ಲಿ ಪಾಲು ಪಡೆಯುವ ಅಥವಾ ಅವರು ಉಂಡು ಹೆಚ್ಚಾದವನ್ನು ತಾವು ಗೋರುವ ದುರಾಸೆ ಅಥವಾ ಧರ್ಮ ಪತ್ರಿಕೆಗಳದು.
ರಾಜಕಾರಣಿಯಾಗಲು ಹೇಗೆ ಯಾವುದೇ ಅರ್ಹತೆ ಅಗತ್ಯವಿಲ್ಲವೋ ಹಾಗೆಯೇ ಪತ್ರಕರ್ತ ನಾಗಬೇಕಾದರೆ ಯಾವುದೇ ಅರ್ಹತೆಯ ಅಗತ್ಯವಿಲ್ಲ. ದೊಡ್ಡಮಟ್ಟದ ಪತ್ರಿಕೆ (ರಾಜ್ಯ, ರಾಷ್ಟ್ರೀಯ ಪತ್ರಿಕೆಗಳು) ಹೆಸರಿನಲ್ಲಿ ವ್ಯಾಪಾರ ಆರಂಭಿಸುವವರು ಚೆನ್ನಾಗಿ ಬರೆಯುವವರು, ಪತ್ರಿಕೋದ್ಯಮದ ಪದವಿಯನ್ನು ಪಡೆದವರನ್ನು ಆಯ್ಕೆಗೆ ಅರ್ಹತೆಯನ್ನಾಗಿ ಪರಿಗಣಿಸುತ್ತಾರೆ. ಆದರೆ, ಮಾಲೀಕನಾಗುವವನಿಗೆ ಅದರ ಅರ್ಹತೆ ಅಗತ್ಯವಿಲ್ಲ. ಹಣವಿದ್ದರೆ, ಜೊತೆಗೆ ವ್ಯಾವಹರಿಕ ಜಾಣ್ಮೆಯಿದ್ದರೆ, ಆತ ಪತ್ರಿಕೋದ್ಯಮಿ ಯಾಗಬಹುದು. ಈ ಕಾರಣಕ್ಕೆ ಪತ್ರಿಕೆಗಳು ಪತ್ರಕರ್ತರು ಅಂದರೆ, ಸಂಬಂಧವೇ ಇಲ್ಲದವರ ಸಾಮ್ರಾಜ್ಯ. ಪತ್ರಿಕಾ ಧರ್ಮ, ಮೌಲ್ಯ, ಸಿದ್ದಾಂತ ಹೇಳುವವನನ್ನು ಅಪಹಾಸ್ಯ ಮಾಡಲಾಗುತ್ತಿದೆ. ವೇಸ್ಟ್ ಎಂದು ಪರಿಗಣಿಸಲಾಗುತ್ತಿದೆ. ಎರಡು ಹೊತ್ತಿನ ಊಟಕ್ಕಾಗಿ ಮನುಷ್ಯ ಏನನ್ನು ಬೇಕಾದರೂ ಮಾಡುತ್ತಾನೆ, ದುರಾಸೆಯಿಂದ ವ್ಯವಸ್ಥೆಯನ್ನೇ ಗಬ್ಬೆಬ್ಬಿಸುತ್ತಾನೆಂಬುದಕ್ಕೆ ಪತ್ರಿಕೆ ಪತ್ರಕರ್ತರು ಉದಾಹರಣೆಗೆ ನಿಲ್ಲುತ್ತಾರೆ.
ನಮ್ಮ ಹಿರಿಯರು ಅಥವಾ ಈ ಹಿಂದಿನ ಪತ್ರಿಕೆಗಳು ಹೀಗೆಯೇ ಇದ್ದರೆ, ಇತ್ತ ಎಂಬ ಪ್ರಶ್ನೆಗೆ ಇಲ್ಲವೆಂಬ ಉತ್ತರ ನೀಡಲು ಸಾಧ್ಯವಿಲ್ಲ. ಪ್ರಮಾಣ ಕಡಿಮೆಯಿ ರಬಹುದು. ಇತ್ತು. ಗೌಪ್ಯವಾಗಿತ್ತು. ಲಾಭ ಮಾಡಿಕೊ ಳ್ಳುವವ ಗೌಪ್ಯತೆ ಕಾಪಾಡಿಕೊಳ್ಳುತ್ತಿದ್ದ. ನಾಚಿಕೆ, ಭೀತಿ, ಸುತ್ತವಾಗಿರುತ್ತಿತ್ತು. ಈಗ ಅದೆಲ್ಲ ಇಲ್ಲವೇ ಇಲ್ಲ. ಖುಲ್ಲಂ ಖುಲ್ಲ ಗೋಡಾ ಬಿ ಹೈ, ಮೈದಾನ ಬೀ ಹೈ
ಮೊದಲು ಎಲ್ಲರೂ ಪತ್ರಕರ್ತರಾಗಲು ಹೆದರುತ್ತಿದ್ದರು. ಭಯವಲ್ಲ, ಕಾರಣ. ಅದು ಊಟಕ್ಕೂ ಕಷ್ಟ ಕೊಡುತ್ತದೆಂದು. ಪತ್ರಕರ್ತನನ್ನು ಬಡ ಪತ್ರಕರ್ತ, ಬಡಪಾಯಿ ಎಂದು ಸಂಭೋದಿಸುತ್ತಿದ್ದುದನ್ನು ಹೊಸ ತಲೆಮಾರಿನವರಿಗಲ್ಲದಿದ್ದರೂ, ಹಳೇ ತಲೆಮಾರಿನವರಿಗೆ ಗೊತ್ತಿದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಪತ್ರಕರ್ತರಾದರೆ, ಯಥೇಚ್ಛವಾಗಿ ಹಣ ಮಾಡಬಹುದು. ಅಧಿಕಾರಿ, ರಾಜಕಾರಣಿಗಳನ್ನು ಹೆದರಿಸಿ ಕೆಲಸ ಮಾಡಿಸಿಕೊಳ್ಳಬಹುದೆಂದು.
ನಂ.1 ಪತ್ರಿಕೆ (ರಾಜ್ಯಮಟ್ಟದ್ದು) ಸಂಪಾದಕ, ಪತ್ರಕರ್ತರಲ್ಲಿಯೇ ನಂ.1 ಕುಬೇರನಾಗಿರುವುದು ಹೇಗೆ? ರಾಜಕಾರಣಿಯೊಬ್ಬರ ಬೂಟು ನೆಕ್ಕುತ್ತಿದ್ದುದೇ ಈತ ಸಂಪಾದಕನಾಗಲು ಇದ್ದ ಅರ್ಹತೆ. ಪತ್ರಿಕೋದ್ಯಮದ ಪಟ್ಟುಗಳನ್ನು ಬದಲಿಸಿರುವುದಾಗಿ ಸನ್ನಿ ಬಡಿದವನಂತೆ ಪದೇ ಪದೇ ಬಡಿದುಕೊಳ್ಳುವ ಈತನ ಮತ್ತೊಂದು ಸಾಧನೆಯೆಂದರೆ, ಹೋಟೆಲ್ಗಳಲ್ಲಿ ಮಾಣಿಗಳಾಗಿ ದ್ದವರೂ ಪತ್ರಿಕಾ ಕಛೇರಿಗಳಿಗೆ ಪತ್ರಿಕೆ ವಿತರಿಸಿ ಬದುಕುತ್ತಿದ್ದವರನ್ನು ಪತ್ರಕರ್ತರನ್ನಾಗಿ ಪ್ರತಿಷ್ಟಾಪಿಸಿದ್ದು. ಭಾಷೆ, ವ್ಯಾಕರಣ ಕಲಿತುಕೊಳ್ಳುವುದು ಕಷ್ಟವೇನಲ್ಲವೇ? ಮತ್ತೊಂದು ರಾಜ್ಯಮಟ್ಟದ ಪತ್ರಿಕೆಯೊಂದಕ್ಕೆ ಅಕ್ಷರಜ್ಞಾನವೇ ಇಲ್ಲದವನು ಸಂಪಾದಕನಾಗಿ ವಿಜೃಂಭಸಿದ್ದ. ಬಯಲಲ್ಲಿ ಬೆತ್ತಲಾದವರ ಸಂಖ್ಯೆ ಸಾಕಷ್ಟಿದೆ. ವೈಯಕ್ತಿಕ ಮಟ್ಟದಲ್ಲಿ ಪತ್ರಕರ್ತರು ಏನಾಗಿದ್ದಾರೆಂಬುದಕ್ಕೆ ಇದು ಉದಾಹರಣಿ. ಜಾತಿವಾದಿಗಳು, ಜಾತ್ಯಾತೀತವಾದಿಗಳು ಎಂಬ ಹಣಿಪಟ್ಟಿಯೊಂದಿಗೆ ಪತ್ರಿಕೋದ್ಯಮವನ್ನು ಕಸದ ಬುಟ್ಟಿಗೆ ಹಾಕಿದವರು ಇದ್ದಾರೆ. ಆಂದೋಲನ ಮಾಡುವುದಾಗಿ ಇನ್ನೂ ಮಾಡುತ್ತಿರುವುದಾಗಿ ಹೇಳಿಕೊಳ್ಳುವ ಸಮಾಜವಾದಿ ಪತ್ರಕರ್ತನೊರ್ವ ಜನರ ಮುಂದೆ ಸಮಾಜಸೇವಕ ಪೋಸು ನೀಡುತ್ತಾನೆ. ಸರಳತೆ, ಭಾಷಣ ಮಾಡಿ ಐಷಾರಾಮಿ ಕಾರುಗಳಲ್ಲಿ ತೆರಳುತ್ತಾನೆ. ಏನಾದರೂ, ಮಾಡಿಕೊಳ್ಳಲಿ ಸುದ್ದಿ ಬರೆಯುವ ಕೆಲಸಗಾರರಿಗೆ ಹೊಟ್ಟೆ ತುಂಬುವಷ್ಟು ಸಂಬಳವಾದರೂ ಕೊಡುತ್ತಾನೆಂದರೆ, ಅದು ಇಲ್ಲ. ಆದರೆ, ತನ್ನ ಆದಾಯದಲ್ಲಿ ಶೇಕಡಾ 40ರಷ್ಟನ್ನು ಸಮಾಜ ಸೇವೆಗೆ ವಿನಿಯೋಗಿಸುವುದಾಗಿ ಘೋಷಿಸುತ್ತಾನೆ.
ಇದು ಒತ್ತಟಿಗಿರಲಿ, ಇತ್ತೀಚಿಗೆ ಪತ್ರಿಕೆಗಳಿಗೆ ಚುನಾವಣಿ ಬಂತೆಂದರೆ ಹಬ್ಬ. ಕಾರಣ ಚುನಾವಣಿಗಳಲ್ಲಿ ವೆಚ್ಚದ ಮಿತಿ ಇರುವುದರಿಂದ ಜಾಹೀರಾತುಗಳನ್ನು ಮಿತಿ ಮೀರಿ ನೀಡುವಂತಿಲ್ಲ. ಅದಕ್ಕಾಗಿ ಪ್ರಾಯೋಜಿಕ ಸುದ್ದಿ ಪುಟಗಳು ಮುದ್ರಣಗೊಳ್ಳುತ್ತವೆ. ವಿಶ್ಲೇಷಣಿ ಮತ್ತು ಪ್ರಾಯೋಜಿತ ಸುದ್ದಿ ಪುಟಗಳು ಅಕ್ಕಪಕ್ಕದಲ್ಲಿಯೇ ಪ್ರಕಟಗೊಳ್ಳುವದರಿಂದ ಜನರು ಅಂದರೆ, ಓದುಗರು ಗೊಂದಲಗೊಂಡಿದ್ದಾರೆ. ಹೊಗಳಿ ಬರೆಸಿಕೊಳ್ಳುವದ ರಿಂದ ಪ್ರಯೋಜನವಿಲ್ಲವೆಂದು ರಾಜಕಾರಣಿಗಳಿಗೆ ಗೊತ್ತಿದೆ. ಆದರೆ, ಕಾಟ ತಡೆಯಲಾರದೇ ಪತ್ರಕರ್ತರಿಗೆ ಹಣ ನಡಬೇಕಾಗುತ್ತದೆ ಎಂದು ರಾಜಕಾರಣಿಗಳು ಗೊಳಾಡುತ್ತಾರೆ. ಎಷ್ಟೋ ರಾಜಕಾರಣಿಗಳನ್ನು ಪತ್ರಕರ್ತರು ಪ್ರಚಾರಕ್ಕೆ ತೆರಳಲು ಬಿಡುವುದಿಲ್ಲವಂತೆ. ಹಣ ನೀಡದಿದ್ದರೆ, ಹಿಂಬಾಲಿಸುವದರಲ್ಲಿ ಪತ್ರಕರ್ತರು ರಾಜಕೀಯ ಪಕ್ಷಗಳ ಕಾರ್ಯಕರ್ತರಿಗಿಂತ ಒಂದು ಕೈ ಮುಂದೆ.
ಇತ್ತೀಚಿಗೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಯುವಕನೊಬ್ಬ ಕೆಲಸಕ್ಕಾಗಿ ಅಲೆಯುತ್ತಿದ್ದ. ನಂ.1 ಪತ್ರಿಕೆ ಸಂಪಾದಕ ಹಾಗೂ ಭ್ರಷ್ಟ ರಾಜಕಾರಣಿಯೊಬ್ಬರಿಗೆ ಪರಸ್ಪರ ಸಂಬಂಧವಿರುವುದು ನನಗೆ ಗೊತ್ತಿತ್ತು. ಆ ರಾಜಕಾರಣಿಯ ಬಳಿ ಹೋಗಲು ತಿಳಿಸಿದೆ. ಯುವಕನಗ ಸಂತೋಷವಾಗಿದ್ದಾನೆ.
ಪತ್ರಿಕೆ ಎಂದರೆ, ಸಂಬಂಧವೇ ಇಲ್ಲದವರ ಸಾಮ್ರಾಜ್ಯ. ಹೇಗಾಗುತ್ತದೆ ಎಂಬುದಕ್ಕೆ ಇದನ್ನೆಲ್ಲ ಹೇಳಬೇಕಾಯಿತು. ಹೊಟ್ಟೆ ಪಾಡಿಗಾಗಿ ಮಾಡುತ್ತಾರೆಂದು ಸುಮ್ಮನಾಗೋಣ. ಆದರೆ, ಕೈತುಂಬ ಸಂಬಳ ನಡಿದ ಮೇಲೆಯೂ ಕೈಚಾಚುವರು ಇದ್ದಾರೆ. ಪ್ರಖ್ಯಾತ ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದಕ್ಕೆ ಅಪರಾದ ಸುದ್ದಿ ವರದಿ ಮಾಡುವವ ಬೆಂಗಳೂರಿನ ಬಹಳಷ್ಟು ಪೊಲೀಸ್ ಠಾಣಿಯಲ್ಲಿ ಪ್ರತಿನತ್ಯ ಕೇವಲ ನೂರು ರೂಪಾಯಿಯನ್ನು ಕಡ್ಡಾಯವಾಗಿ ವಸೂಲಿ ಮಾಡುತ್ತಾನೆ. ಕಿತ್ತು ತಿನ್ನುವ ಪೊಲೀಸರನ್ನೇ ಕಿತ್ತು ತಿನ್ನವವನಿತ.
ಇಡೀ ದೇಶದಲ್ಲಿಯೇ ಸಿದ್ದಾಂತಕ್ಕೆ ಬದ್ದವಾದ ಪತ್ರಿಕೆಯೊಂದು ಇತ್ತೀಚಿನ ಉಪಚುನಾವಣಿಯ ಬಗ್ಗೆ ಅದರ ವರದಿಗಾರನಾದ ವ್ಯಕ್ತಿ ಆಶ್ಚರ್ಯಕರ ವಿಶ್ಲೇಷಣಿ ಬರೆದ. ಆತನ ಪ್ರಕಾರ ಕಣಕ್ಕಿಳಿದಿದ್ದ ಕುಬೇರ ಅಭ್ಯಥರ್ಿಯೊಬ್ಬ ಗೆದ್ದೆಗೆಲ್ಲುತ್ತಾನೆಂದು ವಾದಿಸಿದ್ದ.
ಆದರೆ, ಆಶ್ಚರ್ಯದ ವಿಷಯವೆಂದರೆ, ಆ ಚುನಾವಣಿಯಲ್ಲಿ ಆತ ಸೋತೆ ಸೋಲುತ್ತಾನೆಂಬುದು ಕ್ಷೇತ್ರದಲ್ಲಿ ಸಣ್ಣಮಕ್ಕಳಿಗೂ ಗೊತ್ತಾಗಿತ್ತು. ಇದಕ್ಕೆ ಏನನ್ನೋಣ.

ಆರ್ಟಿಪಿಎಸ್ ಗೋಳಿನ ಕಥೆ

ರಾಜ್ಯದಲ್ಲಿಗ ಬೀಕರ ಬರಗಾಲ. ಆದರೆ, ಈ ಬರ ಕೇವಲ ತುತ್ತು ಅನ್ನ, ಕುಡಿಯುವ ನೀರಿಗೆ ಮಾತ್ರ ಬಂದಿಲ್ಲ. ವಿದ್ಯುತ್ ವಲಯಕ್ಕೂ ತನ್ನ ಛಾಯೆಯನ್ನು ಆವರಿಸಿದೆ! ಹೌದು ರಾಜ್ಯದಲ್ಲಿ ಎಲ್ಲಕ್ಕಿಂತ ವಿದ್ಯುತ್ ಬರ ನಮ್ಮನ್ನು ತೀವ್ರವಾಗಿ ಕಾಡುತ್ತಿದೆ. ಕಳೆದ ಎರಡು ವರ್ಷದಿಂದ ಬೀಕರ ವಿದ್ಯುತ್ ಕ್ಷಾಮ ನಮ್ಮನ್ನು ಆವರಿಸಿದೆ. ಬೇಸಿಗೆ ದಿನಗಳಲ್ಲಂತೂ ಕರೆಂಟ್ ಯಾವಾಗ ಹೋಗುತ್ತೇ, ಮತ್ತ್ಯಾಗ ಬರುತ್ತೇ ಗೊತ್ತೇ ಆಗುವುದಿಲ್ಲ. ಇದಕ್ಕೆಲ್ಲ ಕಾರಣ ರಾಜ್ಯದ ವಿದ್ಯುತ್ ಬೇಡಿಕೆ ಮತ್ತು ಉತ್ಪಾದನೆ ನಡುವೆ ಇವರು ಅಜಗಜಾಂತಗರ ವ್ಯತ್ಯಾಸ.
ನಮ್ಮ ರಾಜ್ಯಕ್ಕೆ  ಪ್ರತಿನಿತ್ಯ 150 ದಶಲಕ್ಷ ಯೂನಿಟ್ನಿಂದ 160 ದಶಲಕ್ಷ ಯೂನಿಟ್ ವಿದ್ಯುತ್ ಬೇಕು. ಈ ವಿದ್ಯುತ್ನ್ನ ನಾವು ರಾಯಚೂರಿನ ಆರ್ಟಿಪಿಎಸ್, ಬಳ್ಳಾರಿಯ ಬಿಟಿಪಿಎಸ್, ಲಿಂಗನಮಕ್ಕಿ, ಶರಾವಾತಿ, ಕಾಳಿ, ಆಲಮಟ್ಟಿ ಸೇರಿದಂತೆ ಕೇಂದ್ರ ಸಕರ್ಾರ ಮತ್ತು ಖಾಸಗಿ ಕಂಪೆನಿಗಳಿಂದ ಪಡೆಯುತ್ತೇವೆ. ಆದರೆ, ಇದರಲ್ಲಿ ನಮ್ಮ ರಾಜ್ಯವು ಅತಿ ಹೆಚ್ಚು ಅವಲಂಬನೆಯಾಗಿರುವುದು ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್ಟಿಪಿಎಸ್ ಮೇಲೆ.
ಆರ್.ಟಿ.ಪಿ.ಎಸ್ ನಲ್ಲಿ ಒಟ್ಟು 8 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಈ 8 ಘಟಕಗಳು ಪ್ರತಿದಿನ 25 ಮೆಟ್ರಿಕ್ ಟನ್ ಕಲ್ಲಿದ್ದಲ್ಲನ್ನು ಉರಿಸಿ ಅವಿರತವಾಗಿ ವಿದ್ಯುತ್ ಉತ್ಪಾದಿಸುತ್ತಿವೆ. 210 ಮೆಗಾವ್ಯಾಟ್ ಸಾಮಥ್ರ್ಯದ 7 ಘಟಕ ಹಾಗೂ 250 ಮೆಗಾವ್ಯಾಟ್ ಸಾಮಥ್ರ್ಯದ 1 ಘಟಕ  ಸೇರಿ ಒಟ್ಟು ನಿತ್ಯ 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಅಂದರೆ ರಾಜ್ಯದ ಒಟ್ಟು ಉತ್ಪಾದನೆಯ ಶೇಕಡಾ 40ರಷ್ಟು ಇಲ್ಲಿ ಉತ್ಪಾದಿಸಲಾಗುತ್ತಿದೆ. ಹಾಗಾಗಿಯೇ ರಾಯಚೂರಿನ ಆರ್ಟಿಪಿಸ್ನ್ನು ಆಪದ್ಬಾಂಧವ ಎಂದು ಕರೆಯುತ್ತಾರೆ.
ಇನ್ನೂ ಒಂದು ವಿಚಾರ ನಿಮಗಿಲ್ಲಿ ನಾವು ಹೇಳಲೇಬೇಕು. ಕನರ್ಾಟಕ ವಿದ್ಯುತ್ ನಿಗಮವು ಆರ್.ಟಿ.ಪಿ.ಎಸ್ನಲ್ಲಿ ಉತ್ಪಾದಿಸುವ ವಿದ್ಯುತ್ನ್ನು ಕೇವಲ 2 ರೂ. 60 ಪೈಸೆಗೆ ಒಂದು ಯೂನಿಟ್ನಂತೆ ಅಗ್ಗದ ದರಕ್ಕೆ ಬೇರೆಯವರಿಗೆ ನೀಡುತ್ತಿದೆ. ಅಂದರೆ, ನಮಗೆ ಆರ್ಟಿಪಿಎಸ್ ಅವಶ್ಯಕತೆ ಹಾಗೂ ಅನಿವಾರ್ಯತೆ ಹೇಗಿರಬೇಕು ಊಹಿಸಿ.
ಈಗ ರಾಜ್ಯದಲ್ಲಿ ಆರ್.ಟಿ.ಪಿ.ಎಸ್ ಹೊರತು ಪಡಿಸಿದರೇ ಬಳ್ಳಾರಿ ಶಾಖೋತ್ಪನ್ನ ಕೇಂದ್ರದಿಂದ 500 ಮೆಗಾವ್ಯಾಟ್ ಮತ್ತು ಲಿಂಗನಮಕ್ಕಿ, ಶರಾವತಿ, ಕಾಳಿ, ಆಲಮಟ್ಟಿಗಳ ಜಲಮೂಲದಿಂದ ಸ್ವಲ್ಪ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದೆ. (ಅದು ಸಾಕಷ್ಠು ಮಳೆಯಾಗಿ ಜಲಾಶಯ ಭತರ್ಿಯಾದಾಗ ಮಾತ್ರ)
ಉತ್ತರಕನರ್ಾಟಕದಲ್ಲಿದ್ದಂತೆ ಎಲ್ಲೆಡೆ ಬರ ಆವರಿಸಿದೆ, ಮೇಲಿನ ಯಾವಸ್ಥಳದಲ್ಲಿಯೂ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲ. ಕಾರಣ ಸಕರ್ಾರ ಶಕ್ತಿನಗರದ ಮೇಲೆಯೇ ಅವಲಂಬನೆಯಾಗಿದೆ.
ಒಂದೊಮ್ಮೆ ಆರ್.ಟಿ.ಪಿ.ಎಸ್ ನಲ್ಲಿ ಒಂದೆರಡು ಘಟಕಗಳು ತಾಂತ್ರಿಕ ಸಮಸ್ಯೆಯಿಂದ ಉತ್ಪಾದನೆ ನಿಲ್ಲಿಸಿ ಬಿಟ್ಟರೆ, ರಾಜ್ಯದ ವಿದ್ಯುತ್ ವಿತರಣಾ ಜಾಲದಲ್ಲಿ ಏರು ಪೇರಾಗುತ್ತೆ. ಇನ್ನೂ ಆರ್ಟಿಪಿಎಸ್ ಜನ್ಮ ತಾಳಿದಾಗಿನಿಂದ ತಾಂತ್ರಿಕ ಸಮಸ್ಯೆ, ಕಳಪೆ ಕಲ್ಲಿದ್ದಿಲ್ಲು, ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಿಕೊಂಡು ದಾಖಲೆ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದಿಸಿ ರಾಜ್ಯಕ್ಕೆ ನೀಡುತ್ತಾ ಬಂದಿದೆ.
ರಾಜ್ಯದ ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಕ್ತಿನಗರದ ಆರ್ಟಿಪಿಎಸ್ಗೆ ಈಗ ಆಪತ್ತು ಬಂದೊದಗಿದೆ. ಬಂದಿರುವ ಆಪತ್ತು ಅಂತಿಂತಹುದಲ್ಲ ಈ ಆಪತ್ತನ್ನು ಸಕರ್ಾರ ಗಂಭೀರವಾಗಿ ಪರಿಗಣಿಸದೇ ಹೋದರೆ, ಕನರ್ಾಟಕ ಕತ್ತಲಾಗುವುದು ಗ್ಯಾರಂಟಿ. ಆರ್ಟಿಪಿಎಸ್ಗೆ ಬಂದೊದಗಿದ ಆಪತ್ತೇ, ರಾಜ್ಯದ ಭೀಕರ ವಿದ್ಯುತ್ ಸಮಸ್ಯೆಗೆ ಕಾರಣ.
ಆರ್ಟಿಪಿಎಸ್ನಲ್ಲಿ ಕಲ್ಲಿದ್ದಲು ಕೊರತೆ, ತಾಂತ್ರಿಕ ಸಮಸ್ಯೆ ಆಥರ್ಿಕ ಸಂಕಷ್ಟ, ನೀರಿನ ಕೊರತೆ ಹೀಗೆ ಸಾಲು ಸಾಲು ಸಮಸ್ಯೆಗಳು ಬೃಹದಾಕಾರದಲ್ಲಿ ಬೆಳೆದು ನಿಂತಿವೆ. ಈ ಎಲ್ಲ ಸಮಸ್ಯೆಗಳು ಆರ್ಟಿಪಿಎಸ್ನ ಉತ್ಪಾದನೆಯನ್ನು ಕುಂಠಿತಗೊಳಿಸಿವೆ.
ಆರ್ಟಿಪಿಎಸ್ನ 8 ಘಟಕಗಳು ಪೂರ್ಣ ಸಾಮಥ್ರ್ಯದಲ್ಲಿ ವಿದ್ಯುತ್ ಉತ್ಪಾದಿಸಬೇಕು ಅಂದ್ರೆ ಪ್ರತಿ ದಿನ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲ್ಲು ಬೇಕು. ಈ ಕಲ್ಲಿದ್ದಲು ಆಂದ್ರ ಪ್ರದೇಶದ ಬೆಲ್ಲಂಪಲ್ಲಿಯ ಸಿಂಗರೇಣಿ, ಮಹಾರಾಷ್ಟ್ರದ ಮಹಾನದಿ, ಓರಿಸ್ಸ್ದ ತಲ್ಚೆರ್ ಹಾಗೂ ವಿದೇಶಿ ಗಣಿಗಳಿಂದ ಪೂರೈಕೆಯಾಗುತ್ತದೆ.
ಆದರೆ ಇತ್ತಿಚೀನ ದಿನಗಳಲ್ಲಿ ಮಾತ್ರ ನೀರಿಕ್ಷಿತ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಇದು ವಿದ್ಯುತ್ ಉತ್ಪಾದನೆ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಕಲ್ಲಿದ್ದಲು ಕೊರತೆಗೆ ತೆಲಂಗಾಣ ಹೋರಾಟ, ಕೇಂದ್ರ ಸರಕಾರದ ಅಸಹಕಾರ ಎಂದು ಆರೋಪಿಸುತ್ತಾ ಕಾಲ ದೂಡುತ್ತಿದ್ದ ಇಂಧನ ಸಚಿವರ ಹೇಳಿಕೆ ಸತ್ಯ ಮರೆ ಮಾಚಲು ನಡೆಸುತ್ತಿರುವ ಸರ್ಕಸ್ ಎನ್ನುವದು ಈಗ ಗುಟ್ಟಾಗಿಯೇನು ಉಳಿದಿಲ್ಲ.
ಬೇಸಿಗೆ ಕಾಲದಲ್ಲಿ ಜಲಮೂಲ ವಿದ್ಯುತ್ ಉತ್ಪಾದನೆ ಕಡಿಮೆ ಇರುವುದರಿಂದ, ಸಹಜವಾಗಿ ವಿದ್ಯುತ್ ಉತ್ಪಾದನೆಯ ಹೆಚ್ಚಿನ ಒತ್ತಡ ಶಾಖೋತ್ಪನ್ನ ಕೇಂದ್ರ ಆರ್ಟಿಪಿಎಸ್ ಮೇಲಿರುತ್ತದೆ. ಈ ಹಿನ್ನಲೆಯಲ್ಲಿ ಮೊದಲಿಗೆ ಮುಂಗಡವಾಗಿ 3 ರಿಂದ 6 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಆರ್ಟಿಪಿಎಸ್ನಲ್ಲಿ ಸಂಗ್ರಹಿಸಲಾಗುತ್ತಿತ್ತು. ಆದರೆ, ಕಳೆದ ಒಂದು ವರ್ಷದಿಂದ ಆರ್ಟಿಪಿಎಸ್ನಲ್ಲಿ ಕಲ್ಲಿದ್ದಲು ಸಂಗ್ರಹಣೆ ಸಂಪೂರ್ಣ ಬರಿದಾಗಿದೆ. ಈಗ ನಿತ್ಯವೂ ರೈಲಿನಿಂದ ಆಮದಾಗುವ ಕಲ್ಲಿದ್ದಲನ್ನು ಕಾಯುವ ದುಸ್ಥಿತಿ ಆರ್ಟಿಪಿಎಸ್ಗೆ ಬಂದೊದಗಿದೆ.
ಇದರಲ್ಲಿ ಪೂರೈಕೆಯಾಗುತ್ತಿರುವ ಕಲ್ಲಿದ್ದಲು ಕೂಡ ತೀರ ಕಳಪೆ ಗುಣಮಟ್ಟದ್ದು. ಸಕರ್ಾರ ತೊಳೆದ ಕಲ್ಲಿದ್ದಲು ಪೂರೈಕೆ ನಿಲ್ಲಿಸಿದಾಗಿಂದ, ಕಲ್ಲಿದ್ದಲಿನಲ್ಲಿ ಬರುವ ಕಬ್ಬಿಣ, ಸರಳು, ಭಾರಿ ಗಾತ್ರದ ಕಲ್ಲುಗಳು ಘಟಕಗಳನ್ನು ತೀವ್ರ ಹಾನಿಗೀಡು ಮಾಡಿವೆ. ಇದರಿಂದಾಗಿ ಘಟಕಗಳು ಮೇಲಿಂದ ಮೇಲೆ ಉತ್ಪಾದನೆ ನಿಲ್ಲಿಸುತ್ತಿವೆ. ಕಳಪೆ ಕಲ್ಲಿದ್ದಲಿನಲ್ಲಿ ಬರುವ ಶೇಕಡಾ 60% ರಷ್ಟು ಬೂದಿ, ಕಲ್ಲುಗಳು ಹಾಗೂ ಇತರೆ ಸಾಮಗ್ರಿಗಳು ತುಂಬಿಕೊಂಡು ಘಟಕಗಳು ದುಸ್ಥಿಗೆ ತಲುಪಿವೆ. ಇನ್ನೂ ಕಳಪೆ ಕಲ್ಲಿದ್ದಲು ಬಳಕೆಯಿಂದ ಹೆಚ್ಚು ಹೆಚ್ಚು ಇಂಧನವನ್ನು ಕಲ್ಲಿದ್ದಲು ಉರಿಸಲು ಬಳಕೆ ಮಾಡಲಾಗುತ್ತೆ, ಇದು ಸಕರ್ಾರಕ್ಕೆ ಅನಗತ್ಯ ಆಥರ್ಿಕ ಹೊರೆಯಾಗಿದೆ, ಇನ್ನೂ ಹಳೆಯಾದಾದ ಯಂತ್ರೋಪಕಾರಣಗಳನ್ನು ಕಾಲ ಕಾಲಕ್ಕೆ ಸರಿಯಾಗಿ ನಿರ್ವಹಣೆ ಮಾಡದಿರುವುದು ಸಮಸ್ಯೆ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ.
ಉಷ್ಣ ವಿದ್ಯುತ್ ಘಟಕಗಳ ಕಾರ್ಯಕ್ಷಮತೆಯ ಮಿತಿ 25 ವರ್ಷ. ಹೀಗಾಗಿ 1985ರಲ್ಲಿ ಸ್ಥಾಪಿತವಾದ ಆರ್.ಟಿ.ಪಿ.ಎಸ್ 1 ಮತ್ತು 2ನೇ ಘಟಕ ಹಾಗೂ ನಂತರದ ದಿನಗಳಲ್ಲಿ ಸ್ಥಾಪನೆಯಾದ 3 ಮತ್ತು 4ನೇ ಘಟಕಗಳು ಈಗ ಪದೇ ಪದೇ ತಾಂತ್ರಿಕ ತೊಂದರೆಗೆ ಒಳಪಡುತ್ತಿವೆ. ಇವುಗಳ ಸಂಪೂರ್ಣ ನವೀಕರಣಕ್ಕೆ ಅಂದಾಜು ಸಾವಿರ ಕೋಟಿ ರೂಪಾಯಿಗಳ ಹಣಕಾಸಿನ ಅಗತ್ಯವಿದೆ. ಆದರೆ ಕನರ್ಾಟಕ ವಿದ್ಯುತ್ ನಗಮದ ಬಳಿ ಹಣಕಾಸಿನ ಕೊರತೆಯಿದೆ. ಹಣ ಹೊಂದಿಸಬೇಕಾದ ಸರಕಾರ ದುಬಾರಿ ಬೆಲೆಗೆ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಗೆ ತೋರುವ ಆಸಕ್ತಿ, ಆರ್ಟಿಪಿಎಸ್ ದುರಸ್ಥಿಗೆ ತೋರುತ್ತಿಲ್ಲ..!
ಹೀಗೆ ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿರುವ ಕೆಲ ಘಟಕಗಳ ದುರಸ್ಥಿಗೆ ಜಪಾನ್ದಿಂದ ತಜ್ಞರು ಬರಬೇಕಾಗಿದೆ. ಆದ್ದರಿಂದಲೇ ಘಟಕಗಳು ಕೈಕೊಟ್ಟಾಗಲೆಲ್ಲಾ ನಾಲ್ಕಾರು ದಿನ ವಿಳಂಬವಾಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ವಿತರಣಾ ವ್ಯವಸ್ಥೆಯಲ್ಲಿ ಏರು ಪೇರಾಗಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗುತ್ತದೆ.
ಈ ವರ್ಷದ ಬೀಕರ ಬರಗಾಲದ ಬಿಸಿ ಆರ್ಟಿಪಿಎಸ್ಗೂ ತಟ್ಟಿದೆ. ಆರ್ಟಿಪಿಎಸ್ನ 8 ಘಟಕಗಳ ಕೂಲಿಂಗ್ ಟವರ್ಗಳಿಗೆ ಪ್ರತಿ ದಿನ ಬೇಕಾಗುವ 150 ಕ್ಯೂಸೆಕ್ ನೀರು ಕೃಷ್ಣಾ ನದಿಯಿಂದ ಪೂರೈಸಲಾಗುತ್ತಿತ್ತು. ಆದರೆ, ಈಗ ಬರಗಾಲ ಇರುವದರಿಂದ  ನದಿಯಲ್ಲಿ ನೀರಿಲ್ಲ..! ಇದರಿಂದಾಗಿ ಆರ್ಟಿಪಿಎಸ್ 8 ಘಟಕಗಳ ಪೈಕಿ 4 ಘಟಕಗಳು ಈಗಾಗಲೇ ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ. ಇನ್ನು ಕೆಲವು ದಿನಗಳಲ್ಲಿ ನದಿಗೆ ನೀರು ಬಾರದಿದ್ದರೆ ಆರ್ಟಿಪಿಎಸ್ನ ಎಲ್ಲ ಘಟಕಗಳು ಸ್ತಬ್ದವಾಗುವುದು ಗ್ಯಾರಂಟಿ.. ಹೀಗೆ ಆರ್ಟಿಪಿಎಸ್ಗೆ ಸಾಲು ಸಾಲು ಸಮಸ್ಯೆಗಳು ಬೆಂಬಿಡದೇ ಕಾಡುತ್ತಿದ್ದು, ಉತ್ಪಾದನೆ ಮಾಡುವುದು ಕಷ್ಟವಾಗಿದೆ.
ಆರ್.ಟಿ.ಪಿ.ಎಸ್ನಲ್ಲಿ ಕಲ್ಲಿದ್ದಲು, ಆಥರ್ಿಕ ಮತ್ತು ತಾಂತ್ರಿಕ ಸಮಸ್ಯೆಗಳಿಗಿಂತ ಭೀಕರವಾದದ್ದು ಇಲ್ಲಿನ ಗುತ್ತಿಗೆ ಕಾಮರ್ಿಕರದ್ದು. ಇವರನ್ನು ದ್ವೀತಿಯ ದಜರ್ೆ ನಾಗರೀಕರಂತೆ ಕಾಣುವ ಕೆಪಿಸಿ ಕನಿಷ್ಟ ಸೌಕರ್ಯ ಕಲ್ಪಿಸದೇ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ.
ಇಲ್ಲಿ ಒಟ್ಟು 2089 ಜನ ಖಾಯಂ ನೌಕರರಿದ್ದು, 900 ಜನ ಗುತ್ತಿಗೆ ಕಾಮರ್ಿರು ಕೆಲಸ ಮಾಡುತ್ತಿದ್ದಾರೆ. ಆದರೆ, ಗುತ್ತಿಗೆ ಕಾಮರ್ಿಕರು ತಾತ್ಕಾಲಿಕ ಕೆಲಸಕ್ಕೆಂದು ಬಂದು ಹೋಗುವವರಲ್ಲ. ದಶಕಗಳಿಂದ ನಿರಂತರವಾಗಿ ಆರ್ಟಿಪಿಎಸ್ನಲ್ಲಿ ಕಲ್ಲಿದ್ದಲು ವಿಭಾಗ, ಬಾಯ್ಲರ್, ಟಬರ್ೈನ್ ನಿರ್ವಹಣೆ, ಸ್ಟೋರ್, ಐಎನ್ಸಿ, ತ್ಯಾಜ್ಯವಾಗಿ ಬೂದಿ ಹೊರಬೀಳುವ ವಿಭಾಗ, ಆಸ್ಪತ್ರೆ ಸೇರಿದಂತೆ ಬಹುತೇಕ ವಿಭಾಗಗಳನ್ನು ನೋಡಿಕೊಳ್ಳುವವರು. ಹೀಗೆ ಕಾರ್ಯ ನಿರ್ವಹಿಸುವಾಗ ಅದೆಷ್ಟೋ ಜನ ತಮ್ಮ ಪ್ರಾಣ ಕಳೆದುಕೊಂಡ ಉದಾರಣೆಗಳಿವೆ.
ಹಗಲಿರುಳು ತಮ್ಮ ಬದುಕನ್ನೇ ಒತ್ತೇಯಿಟ್ಟು ದುಡಿಯುತ್ತಿರುವ ಗುತ್ತಿಗೆ ನೌಕರರನ್ನು ಇಲ್ಲಿಯವರೆಗಾದರೂ ಖಾಯಂ ಮಾಡಲು ಆಡಳಿತ ಮಂಡಳಿ ಮನಸ್ಸು ಮಾಡಿಲ್ಲ. ಖಾಯಂ ಮಾಡಬೇಕೆಂದು ಕನರ್ಾಟಕ ವಿದ್ಯುತ್ ನಿಗಮಕ್ಕೆ ಪ್ರಸ್ತಾವನೆ ಹೋಗಿದ್ದರೂ, ನಿಗಮ ಮಾತ್ರ ತನಗೇನು ಗೊತ್ತಿಲ್ಲದಂತೆ ವತರ್ಿಸುತ್ತಿದೆ. ಸಕರ್ಾರ ಮಾತ್ರ ಗುತ್ತೇದಾರರನ್ನು ಬೆಂಬಲಿಸುತ್ತಾ, ಕಾಮರ್ಿಕರ ಬದುಕಿನ ಮೇಲೆ ಚೆಲ್ಲಾಟವಾಡುತ್ತಿದೆ.
ಕಾಮರ್ಿಕರ ಕುರಿತು ಇಲ್ಲಿ ಒಂದು ವಿಷಯ ಗಮನಿಸಬೇಕು. ಯಾಕೆಂದರೆ, 1985ರಲ್ಲಿ ಆರ್ಟಿಪಿಎಸ್ ನ 1 ಮತ್ತು 2ನೇ ಘಟಕಗಳಿಗೆ ನೇಮಕಗೊಂಡ ನೌಕರರೇ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ, ಸದ್ಯ ಆರ್ಟಿಪಿಎಸ್ನಲ್ಲಿ 8 ಘಟಕಗಳಿವೆ. ತಾಂತ್ರಿಕ, ಆಡಳಿತಾತ್ಮಕ ಸಿಬ್ಬಂದಿ ಕೊರತೆ ಇದ್ದರೂ ಹೊಸದಾಗಿ ನೌಕರರನ್ನು ನೇಮಕ ಮಾಡಿಕೊಳ್ಳುವ ಗೋಜಿಗೆ ಕೆಪಿಸಿ ಹೋಗುತ್ತಿಲ್ಲ. ಇದು ಮುಖ್ಯವಾಗಿ ಆರ್ಟಿಪಿಎಸ್ನ್ನು ಕಾಡುತ್ತಿದೆ.
ಕೆಪಿಸಿ ತಾನು ವಿವಿಧ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ನ್ನು ಅಗ್ಗದ ದರದಲ್ಲಿ ನೀಡುತ್ತಿದೆ, ಆದರೆ, ವಿದ್ಯುತ್ ಪಡೆದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಕಂಪನಿಗಳು ಕೆಪಿಸಿಗೆ 13 ಸಾವಿರ ಕೋಟಿ ಹಣ ಬಾಕಿ ನೀಡಬೇಕಿದೆ. ಇದೇ ನೆಪೆಲ್ಲಿ ಕೆಪಿಸಿ ನೂತನ ಯೋಜನೆಗಳನ್ನು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆರ್.ಟಿ.ಪಿಎಸ್ ನಲ್ಲಿ ಉಲ್ಬಣಿಸಿರುವ ತಾಂತ್ರಿಕ ಸಮಸ್ಯೆ ನಿವಾರಣಿಗೆ ಹಣದ ಕೊರತೆ ಕಾಡುತ್ತಿದೆ.

MS Hiremath

Friday, July 6, 2012

ಡೈನಾಮಿಕ್ ಪಿಎಸ್ಐ ಬಾಳನಗೌಡ

 ಇಡೀ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒತ್ತಡವಿರುವ ಹುದ್ದೆಯೆಂದರೆ, ಅದು ಪೊಲೀಸ್ ಪೊಲೀಸ್ ಸಬ್ ಇನ್ಸಪೆಕ್ಟರ್ (ಪಿಎಸ್ಐ) ಹುದ್ದೆ.. ಪೊಲೀಸ್ ಸ್ಟೇಷನ್ನಿನಲ್ಲಿ ಒರ್ವ ಪಿಸಿ ಯಾಗಿದ್ದರೆ, ಕಛೇರಿಯ ಕೆಲಸವನ್ನು ನೆಮ್ಮದಿಯಿಂದ ಮಾಡಿಕೊಂಡು ಹೋಗಬಹುದು! ಸಿಪಿಐ ಅಥವಾ ಅದರ ಮೇಲಿನ ಅಧಿಕಾರಿಗಳಾದರೆ, ಇನ್ನಷ್ಟು ನೆಮ್ಮದಿ. (ಕೆಲವೊಂದು ಸಂದರ್ಭಗಳನ್ನು ಹೊರತುಪಡಿಸಿ) ಆದರೆ, ಪಿಎಸ್ಐ ಆಗಿಬಿಟ್ಟರೆ 24 ಗಂಟೆ ಸಭೆ, ಗಸ್ತು, ಗಲಾಟೆ, ಅಪಘಾತ, ಬಂದೋಬಸ್ತ್, ಕೋಟರ್ು ಅಂತೆಲ್ಲ ಕಳೆಯಬೇಕಾಗುತ್ತದೆ. ಜೊತೆಗೆ ಯಾವಾಗಾದರೂ, ಒಮ್ಮೆ ಮೈಕ್ 1,2 ಹಾಗೂ 3 ಸಾಹೇಬರು ಕಛೇರಿಗೆ ಭೇಟಿ ನೀಡುತ್ತಾರೆಂದರೆ, ಅವರು ಬಂದು ಹೋಗುವ ತನಕ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಬೇಕು. ಇನ್ನೂ ಪೊಲೀಸ್ ಠಾಣಿ ಪ್ರಮುಖ ನಗರಗಳಿಗೆ ಹಾದು ಹೋಗುವ ರಸ್ತೆಯಲ್ಲಿತ್ತೆಂದರೆ, ಕಥೆಯೇ ಮುಗಿಯಿತು. ಇಷ್ಟೇಲ್ಲ ಕರ್ತವ್ಯವನ್ನು ನಿರ್ವಹಿಸಿಕೊಂಡು ಜನಸಾಮಾನ್ಯರು, ಮುಖಂಡರು, ರಾಜಕಾರಣಿಗಳು ಹಾಗೂ ಗ್ರಾಮಸ್ಥರ ಜೊತೆ ಎಲ್ಲಿಯೂ ತಾಳ್ಮೆ ಕಳೆದುಕೊಳ್ಳದೇ, ಅತ್ತ ಕಾನೂನು ವ್ಯವಸ್ಥೆಗೆ ದಕ್ಕೆಯಾಗದಂತೆ ಹೋಗುವುದು ಒರ್ವ ಪಿಎಸ್ಐ ಜವಾಬ್ದಾರಿ.
    ಇಂತಹ ಜವಾಬ್ದಾರಿಯನ್ನು ಹಲವು ಪಿಎಸ್ಐಗಳು ಯಶಸ್ವಿಯಾಗಿ ನೋಡಿಕೊಂಡು ಹೋಗಿ ಈಗ ಸಿಪಿಐ ಗಳಾಗಿದ್ದಾರೆ. ಅಂತವರಿಗೆ ಸಮಾಜ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಿದೆ. ಅಂತಹ ಕೆಲವು ಅಧಿಕಾರಿಗಳ ಸಾಲಿಗೆ ಸೇರುತ್ತಾರೆ ಬಳಗಾನೂರು ಠಾಣಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಬಾಳನಗೌಡ.
ಡೈನಾಮಿಕ್ ಪಿಎಸ್ಐ ಬಾಳನಗೌಡ ಎಂ.ಎಸ್
    2007ರಲ್ಲಿ ಸೇವೆಗೆ ಸೇರಿಕೊಂಡ ಪೊಲೀಸ್ ಸಬ್ಇನ್ಸ್ಪೆಕ್ಟರ್ ಬಾಳನಗೌಡ ಸೇವೆಯ ಮೊದಲ ವರ್ಷವನ್ನು ಮಲೆನಾಡಿನ ಆಗುಂಬೆ ಠಾಣಿಯಲ್ಲಿ ಮುಗಿಸಿ, ಈಗ್ಗೆ 1ವರ್ಷದಿಂದ ಬಯಲುಸೀಮೆಯ ಬಳಗಾನೂರು ಠಾಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
    ಮೂಲತಃ ಕೊಪ್ಪಳ ಜಿಲ್ಲೆ ಯಲಬುಗರ್ಾದವರಾದ ಇವರು, ಬಡತನ ಹಸಿವು ನಿರುದ್ಯೋಗವನ್ನು ಹತ್ತಿರದಿಂದ ಬಲ್ಲವರು. ಯಾಕೆಂದರೆ ಉತ್ತರ ಕನರ್ಾಟಕದ ಕೊಪ್ಪಳ ರಾಯಚೂರು ಜಿಲ್ಲೆಗಳು ಎಲ್ಲ ಸಂದರ್ಭಗಳಲ್ಲಿ ಬರಗಾಲ, ಹಸಿವು, ಆತ್ಮಹತ್ಯೆಗಳಲ್ಲಿ ಪ್ರಖ್ಯಾತಿಯನ್ನು ಹೊಂದಿರುವಂತಹವು. ಹಾಗಾಗಿ ಬಯಲುಸೀಮೆಯಲ್ಲಿ ವಾಸಿಸುವ ಜನರ ಕಷ್ಟಕಾರ್ಪಣ್ಯಗಳನ್ನು ಹೇಗಿರುತ್ತವೆ ಎಂಬುದರ ಬಗ್ಗೆ ಪಿಎಸ್ಐ ಬಾಳನಗೌಡ ಸಂಪೂರ್ಣ ಮಾಹಿತಿ ಹೊಂದಿದ್ದಾರೆ.
    ಪಿ.ಎಸ್.ಐ ಬಾಳನಗೌಡ, ಖಡಕ್ ಆಗಿ ಭಾರತದ ಪರಮೋಚ್ಛ ಸಂವಿಧಾನ, ಭಾರತೀಯ ದಂಡ ಸಂಹಿತೆ ಸೇರಿದಂತೆ ಎಲ್ಲ ವಿಭಾಗದ ಕಾನೂನು ನಿಯಮಗಳನ್ನು ಕರಗತ ಮಾಡಿಕೊಂಡು, ಪ್ರತಿಯೊಬ್ಬರ ಜೊತೆಯಲ್ಲಿ ಉತ್ತಮ ಬಾಂಧವ್ಯದಿಂದ ಸ್ಪಂದಿಸುತ್ತಿರುವುದು ಆ ಸ್ಥಾನದ ಕಾರ್ಯದಕ್ಷತೆಯನ್ನು ಎತ್ತಿ ತೋರಿಸುವಂತಿದೆ.
ಸಹಜವಾಗಿ ಅನ್ಯಾಯಕ್ಕೊಳಪಟ್ಟವರು ಮಾತ್ರ ಪೊಲೀಸ್ ಠಾಣಿಯ ಮೆಟ್ಟಿಲು ಹತ್ತುತ್ತಾರೆ. ಅವರಿಗೆ ಇಲ್ಲಿಯೇ ನ್ಯಾಯ ಸಿಗಬಹುದೆಂಬ ನಂಬಿಕೆ, ಭರವಸೆಯೂ ಇರುತ್ತದೆ. ಆ ಭರವಸೆಯ ಬೆಳಕು ಅಭಿವೃದ್ದಿಗೊಳ್ಳುವುದು, ಅಲ್ಲಿನ ಅಧಿಕಾರಿಗಳು ನ್ಯಾಯಸಮ್ಮತವಾಗಿ ಸಮಸ್ಯೆಯನ್ನು ಬಗೆಹರಿಸಿ ಕೊಟ್ಟಾಗ ಮಾತ್ರ.
    ಕೆಲವೊಮ್ಮೆ ದೂರು ನೀಡಲು ಬಂದವನ ಅಹವಾಲು ಅಲ್ಲಿನ ಅಧಿಕಾರಿಗಳು ಸ್ವೀಕರಿಸದೇ ಹೋದರೆ, ದೂರುದಾರನೇ ಅಪರಾಧಿಯಾಗುತ್ತಾನೆ! ಅದು ಆ ಠಾಣಿಯ ಪಿಎಸ್ಐ ಆತನ ಜೊತೆ ಸಂವಹನ ಮಾಡುವ ಕ್ರಿಯೆಯಿಂದ ಗೊತ್ತಾಗುತ್ತದೆ.
ಮೊನ್ನೆ 70 ವಯಸ್ಸಿನ ವೃದ್ದನೊರ್ವ ಬಳಗಾನೂರು ಠಾಣಿಗೆ ಬಂದಿದ್ದ. ಆತನದು ಕೌಟುಂಬಿಕ ಸಮಸ್ಯೆ. ವೃದ್ಧ ತನ್ನ ಬದುಕಿನಲ್ಲಿ ಎಂದೂ ಪೊಲೀಸ್ ಠಾಣಿ ಹತ್ತದಾತ. ಏಕಾಏಕಿ ಕೌಟುಂಬಿಕ ಸಮಸ್ಯೆ ಮನೆಯಲ್ಲಿ ಬಗೆಹರಿಯದಿದ್ದರಿಂದ ಅನಿವಾರ್ಯವಾಗಿ ಪೊಲೀಸ್ ಠಾಣಿಯತ್ತ ಹೆಜ್ಜೆ ಹಾಕಿದ್ದ.
    ವೃದ್ಧ ಕಛೇರಿಗೆ ಹೋದಾಗ ಸಾಹೇಬರು ಇರದಿದ್ದರಿಂದ, ಪಿಎಸ್ಐ ಬರುವಿಕೆಯನ್ನು ಕಾಯುತ್ತ ಕುಳಿತಿದ್ದ. ನಂತರ ಬಂದ ಪಿಎಸ್ಐ ಅವರು ತಕ್ಷಣವೇ, 70ರ ವೃದ್ಧನ ದಯನೀಯ ಸ್ಥಿತಿಯನ್ನು ನೋಡಿ, ಹೇಳಿ ಯಜಮಾನ್ರೇ.. ಬಂದೀರಲ್ಲ.. ಏನು ವಿಷಯ.. ಎಂದು ಸೌಜನ್ಯದಿಂದ ಕೇಳತೊಡಗಿದಾಗ, ವೃದ್ಧನು ತನಗಾದ ಅನ್ಯಾಯವನ್ನು ವಿವರಿಸಿದ.
    ಅದಕ್ಕೆ ಕೂಡಲೇ ಪಿಎಸ್ಐ ಬಾಳನಗೌಡ ಇದೊಂದು ಕೌಟುಂಬಿಕ ಸಮಸ್ಯೆ. ನೀವು ನೇರವಾಗಿ ಕೋಟರ್್ಗೆ ಹೋಗಿ, ಸಂಬಂಧಪಟ್ಟ ದಾಖಲೆಗಳನ್ನು ಕೋಟರ್ಿಗೆ ಕೊಟ್ಟರೆ, ಅಲ್ಲಿ ಸರಿಯಾದ ನ್ಯಾಯ ಸಿಗುತ್ತದೆ ಎಂದು ಹೇಳಿ,, ವೃದ್ಧನ ಜೊತೆಯಲ್ಲಿ ಹೋಗಿದ್ದ ಮುಖಂಡರಿಗೆ ಹಿಂದೂ ಮ್ಯಾರೇಜ್ ಆ್ಯಕ್ಟ್ ಮತ್ತು ವೃದ್ದನಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಇರುವ ಕಾನೂನಿನ ಹಲವು ನಿಯಮಗಳ ವಿವರಣಿಯನ್ನು ನೀಡಿ ಕಳುಹಿಸಿಕೊಟ್ಟರು.
    ಪಿಎಸ್ಐ ಮಾತಿನಿಂದ ಸಮಾಧಾನಪಟ್ಟ ವೃದ್ಧರು ಮತ್ತು ಮುಖಂಡರು ನಿಟ್ಟುಸಿರು ಬಿಡುತ್ತಾ, ಬಾಳನಗೌಡರ ವಾಕ್ಚಾತುರ್ಯ, ಅವರಲ್ಲಿರುವ ಜ್ಞಾನವನ್ನು ಕೊಂಡಾಡುತ್ತಾ ಊರಿಗೆ ಹೋದರು.
ಈ ಘಟನೆಯನ್ನು ಯಾಕಾಗಿ ಹೇಳಬೇಕಾಗಿದೆಯೆಂದರೆ, ಇಂದು ಅದೆಷ್ಟೋ ಕುಟುಂಬಗಳು, ತಮಗೆ ಪರಿವಿಲ್ಲದೇ, ಕಾನೂನಿನ ಮಹತ್ವ ಗೊತ್ತಿಲ್ಲದ ತಪ್ಪು ದಾರಿ ಹಿಡಿಯುತ್ತಿವೆ. ಶ್ರೇಣಿಕೃತ ವ್ಯವಸ್ಥೆಯಲ್ಲಿ ಕೌಟುಂಬಿಕ ಸಮಸ್ಯೆಗಳೇ ಮುಖ್ಯವಾಗಿ ಹೋಗಿ ಐಕ್ಯತೆ, ಒಗ್ಗಟ್ಟು, ಸಂಬಂಧಗಳು ಎಂಬುದು ಹಳಸಿ ಹೋಗುತ್ತಿದೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಗ್ರಾಮೀಣ ಪ್ರದೇಶದ ಜನರ ಬದುಕನ್ನು ಉಳ್ಳವರು ಹಸನಗೊಳಿಸುವ ಬದಲಿಗೆ ಕಲುಷಿತಗೊಳಿಸುತ್ತಿದ್ದಾರೆ. ಒಂದೊಂದು ಕುಟುಂಬಗಳಲ್ಲಿ ಎರಡೆರಡು ಗುಂಪುಗಳಾಗಿ ಮಾನವೀಯತೆಯೆಂಬುದೇ ಸಮಾಜದಲ್ಲಿ ಇಲ್ಲವೆಂಬತೆ ಭಾಸವಾಗುತ್ತಿದೆ.
    ಪರಿಸ್ಥಿತಿ ಹೀಗಿದ್ದಾಗ ನ್ಯಾಯ ಹರಸಿ ಬಂದವನಿಗೆ ಸರಿಯಾದ ಮಾಗರ್ೋಪಾಯಗಳನ್ನು ಹೇಳಿ ಕೊಡುವುದು ಕಾನೂನು ಬಲ್ಲವರ ಕರ್ತವ್ಯ. ಅಂತಹ ಕಾರ್ಯವನ್ನು ಬಾಳನಗೌಡರು ಮಾಡುತ್ತಿರುವದಕ್ಕೆ ಮೇಲಿನ ಉದಾಹರಣಿ ನೀಡಬೇಕಾಗಿ ಬಂತು.
    ಸುತ್ತ ಹತ್ತಾರು ಹಳ್ಳಿಗಳಲ್ಲಿ ಗಸ್ತು ಹಾಕುತ್ತಾ, ಕಾನೂನು ಸುವ್ಯವಸ್ಥೆಗೆ ಎಲ್ಲಿಯೂ ದಕ್ಕೆಯಾಗದಂತೆ, ಸಿಬ್ಬಂದಿ ಹಾಗೂ ಜನರ ಬಳಿ ಉತ್ತಮ ಬಾಂಧವ್ಯವನ್ನಿಟ್ಟುಕೊಮಡು ಕೆಲಸ ಮಾಡುತ್ತಿರುವ ಪಿಎಸ್ಐ ಅವರು ಮೊನ್ನೆಯೊಂದು ಪ್ರಕರಣವನ್ನು ಭೇದಿಸಿದರು. ಅದು ಸಿನಿಮಿಯ ರೀತಿಯಲ್ಲಾದರೂ, ಅಚ್ಚರಿಪಡಿಸುವಂತಹದ್ದು.
    ಬಳಗಾನೂರು ಠಾಣಿಯೂ ಸುಮಾರು 40ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ! ಗುಡದನೂರು, ಆಯನೂರು ಗ್ರಾಮಗಳು ಕೂಡ ಇದೇ ಠಾಣಿಯ ವ್ಯಾಪ್ತಿಗೆ ಬರುತ್ತವೆ.
    ಇತ್ತೀಚಿಗೆ ಠಾಣಾ ವ್ಯಾಪ್ತಿಯಲ್ಲಿ 30 ತೊಲೆ ಬಂಗಾರ ಕಳುವಾದ ಪ್ರಕರಣ ದಾಖಲಾಗಿತ್ತು. ಕೂಡಲೇ ಕಳ್ಳತನ ಮಾಡಿದ ವ್ಯಕ್ತಿ ಕುರಿತು ಸುಳಿವನ್ನು ಪಡೆದು, ಕಾರ್ಯಪ್ರವೃತ್ತರಾದ ಪಿಎಸ್ಐ ಮೊಬೈಲ್ ಟವರ್ಗಳ ಸಹಾಯದಿಂದ ಕಳ್ಳನನ್ನು ದೂರದ ಮಂತ್ರಾಲಯದಲ್ಲಿ ಹಿಡಿದು ತಂದರು. ನಂತರ ಕಳ್ಳನಿಂದ 30 ತೊಲೆ ಬಂಗಾರ ವಶಪಡಿಸಿಕೊಂಡು, ದೂರು ನೀಡಿದ್ದ ವ್ಯಕ್ತಿಗಳಿಗೆ ಬಂಗಾರವನ್ನು ಮರಳಿ ಕೊಟ್ಟರು.
    ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವಲ್ಲಿ ಸಾಕಷ್ಟು ಶ್ರಮಿಸುತ್ತಿರುವ ಪಿಎಸ್ಐ ಬಾಳನಗೌಡರು ಮುಂದಿನ ಮುಂದಿನ ದಿನಗಳಲ್ಲಿ ಠಾಣಾ ವ್ಯಾಪ್ತಿಯಲ್ಲಿ ಮೋಟಾರ್ ಚಾಲನಾ ಪರವಾನಿಗೆ ಕ್ಯಾಂಪ್ನ್ನು ಆಯೋಜಿಸಿ, ಎಲ್ಲರಿಗೂ ಚಾಲನಾ ಪರವಾನಿಗೆ ಕೊಡಿಸುವ ಇರಾದೆಯನ್ನು ಹೊಂದಿದ್ದಾರೆ.
    ಇವರ ಸಾಮಾಜಿಕ ಕಳಕಳಿಯ ಕಾರ್ಯಗಳು ಹೀಗೆಯೇ ಮುಂದುವರೆಯಲಿ ಎಂದು ಪತ್ರಿಕೆ ಹಾರೈಸುತ್ತದೆ.